Homeಮುಖಪುಟನಿಮ್ಮ ಜೀವನವನ್ನೇ ಸರ್ವನಾಶ ಮಾಡುತ್ತೇನೆ: ಮತ್ತೆ ವಿವಾದಾತ್ಮಕ ಟ್ವೀಟ್ ಮಾಡಿದ ಕಂಗನಾ!

ನಿಮ್ಮ ಜೀವನವನ್ನೇ ಸರ್ವನಾಶ ಮಾಡುತ್ತೇನೆ: ಮತ್ತೆ ವಿವಾದಾತ್ಮಕ ಟ್ವೀಟ್ ಮಾಡಿದ ಕಂಗನಾ!

ಕಂಗನಾ ರಣಾವತ್ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು ಎಂದು ಆರೋಪಿಸಲಾಗಿದೆ.

- Advertisement -
- Advertisement -

ತನ್ನ ಟ್ವಿಟರ್ ಖಾತೆಯನ್ನು ನಿರ್ಬಂಧಿಸಲಾಗಿದೆ ಎಂದು ಕಂಗನಾ ರಣಾವತ್ ಆರೋಪಿಸಿದ್ದು, ಈ ಹಿಂದೆ ತಾಂಡವ್ ವೆಬ್‌ ಸೀರೀಸ್ ವಿರುದ್ಧ ಹಿಂಸೆಗೆ ಕರೆ ನೀಡುವ ಪ್ರಚೋದನಾತ್ಮಕ ಟ್ವೀಟ್ ಮಾಡಿದ್ದರು. ಇದನ್ನು ಅನುಸರಿಸಿ ಟ್ವಿಟರ್ ಕಂಪನಿ ಈ ಕ್ರಮವನ್ನು ತೆಗೆದುಕೊಂಡಿದೆ ಎಂದು ಹೇಳಲಾಗಿದೆ.

ಅಮೇಜಾನ್ ಪ್ರೈಮ್‌‌ನಲ್ಲಿ ಬಿಡುಗಡೆಯಾದ ’ತಾಂಡವ್’ ವೆಬ್‌‌ ಸೀರಿಸ್‌‌‌ನ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ವಿವಾದಾತ್ಮಕ ನಟಿ ಕಂಗನಾ ರಾಣಾವತ್‌, “ಅವರ ತಲೆಗಳನ್ನು ಕತ್ತರಿಸುವ ಸಮಯ” ಎಂದು ಹಿಂಸಾಚಾರಕ್ಕೆ ಕರೆ ನೀಡಿದ್ದರು. ಕಂಗನಾ ಈ ಟ್ವೀಟನ್ನು ನಂತರ ಡಿಲೀಟ್ ಮಾಡಿದ್ದಾರಾದರೂ, ಅಷ್ಟರಲ್ಲೇ ಅದರ ಸ್ಕ್ರೀನ್ ಶಾರ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದು ‌ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ’ತಲೆಗಳನ್ನು ಕತ್ತರಿಸುವ ಸಮಯ’ – ಹಿಂಸಾಚಾರಕ್ಕೆ ಕರೆ ನೀಡಿದ ನಟಿ ಕಂಗನಾ

ಟ್ವೀಟ್ಟರ್‌ನಲ್ಲಿ ತಾಂಡವ್‌ ವೆಬ್ ಸಿರೀಸ್ ಬಗ್ಗೆ ಟ್ವೀಟ್ ಮಾಡಿದ್ದ ದಿ ಅತುಲ್ ಮಿಶ್ರಾ( @TheAtulMishra) ಎಂಬವರಿಗೆ ಪ್ರತಿಕ್ರಿಯಿಸಿದ ಕಂಗನಾ, “ಭಗವಾನ್‌ ಕೃಷ್ಣ ಶಿಶುಪಾಲ ಮಾಡಿದ್ದ 99 ಪಾಪಗಳನ್ನು ಕ್ಷಮಿಸಿದ್ದರೂ ಕೂಡಾ.. ಮೊದಲು ಶಾಂತಿ ನಂತರ ಕ್ರಾಂತಿಯಾಗಬೇಕು. ಅವರ ತಲೆಗಳನ್ನು ಕತ್ತರಿಸುವ ಸಮಯವಾಗಿದೆ, ಜೈ ಶ್ರೀ ಕೃಷ್ಣ” ಎಂದು ಹಿಂಸೆಗೆ ಕರೆ ನೀಡಿದ್ದಾರೆ. ಅವರು ಅತುಲ್ ಮಿಶ್ರ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ಮಾತ್ರವಲ್ಲದೆ, ಅದನ್ನು ರೀಟ್ವೀಟ್ ಕೂಡಾ ಮಾಡಿದ್ದರು.

ಇದಾದ ನಂತರ ಕಂಗನಾ ಅವರ ಟ್ವಿಟರ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು ಎಂದು ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ.

“ಕೆಲವು ಉದಾರವಾದಿಗಳು ತಮ್ಮ ಸಂಬಂಧಿ ಜ್ಯಾಕ್ (ಟ್ವಿಟರ್ ಸಿಇಒ) ಬಳಿ ಅತ್ತು-ಕರೆದು ನನ್ನ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಮಾಡಿದ್ದರು. ಜೊತೆಗೆ ನನ್ನ ಖಾತೆಯನ್ನು ನಿರ್ಬಂಧಿಸುವುದಾಗಿ ನನಗೆ ಬೆದರಿಕೆ ಹಾಕುತ್ತಿದ್ದಾರೆ. ಹಾಗಾಗಿ ನನ್ನ ಸಾಮಾಜಿಕ ಮಾಧ್ಯಮ ಖಾತೆ ದೇಶಕ್ಕಾಗಿ ಯಾವ ಕ್ಷಣದಲ್ಲಾದರೂ ಮಡಿಯಬಹುದು (ಹುತಾತ್ಮ) ಹೊಂದಬಹುದು. ಆದರೂ ಮತ್ತೊಮ್ಮೆ ನನ್ನ ಚಿತ್ರಗಳ ಮೂಲಕ ನನ್ನ ದೇಶಭಕ್ತಿ ಹೊರಬರಲಿದೆ. ನಿಮ್ಮ ಜೀವನವನ್ನೇ ಸರ್ವನಾಶ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ಈ ಮೂಲಕ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ ಕಂಗನಾ, ಸೇಡು ತೀರಿಸಿಕೊಳ್ಳುತ್ತೇನೆ ಎನ್ನುವಂತೆ ಟ್ವೀಟ್ ಮಾಡಿದ್ದಾರೆ.

ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿರುವ ಸೈಫ್ ಅಲಿಖಾನ್ ಮತ್ತು ಡಿಂಪಲ್ ಕಪಾಡಿಯ ನಟಿಸಿರುವ ಹೊಸ ವೆಬ್ ಸೀರೀಸ್ ಆದ‌ ‘ತಾಂಡವ್‌’ನಲ್ಲಿ ಹಿಂದೂ ದೇವತೆಗಳನ್ನು ಅವಮಾನಿಸಲಾಗಿದೆ ಎಂಬ ಆರೋಪವೆದ್ದಿದೆ. ಮಹಾರಾಷ್ಟ್ರ ಬಿಜೆಪಿ ಶಾಸಕ ರಾಮ್ ಕದಮ್, ಇದರ ನಿರ್ಮಾಪಕರು, ನಿರ್ದೇಶಕರು ಮತ್ತು ನಟರ ವಿರುದ್ಧ ದೂರು ದಾಖಲಿಸಿದ್ದರು. ಅಲ್ಲದೆ ಉತ್ತರ ಪ್ರದೇಶದಲ್ಲಿಯೂ ಪ್ರಕರಣ ದಾಖಲಾಗಿದ್ದು, ಬಂಧನದ ಎಚ್ಚರಿಕೆ ನೀಡಲಾಗಿತ್ತು. ಇದರ ಬೆನ್ನಲ್ಲೇ ತಾಂಡವ್ ಚಿತ್ರತಂಡ ಕ್ಷಮೆಯನ್ನೂ ಕೇಳಿತ್ತು. ಜೊತೆಗೆ ವಿವಾದಾತ್ಮಕ ದೃಶ್ಯಗಳಿಗೆ ಕತ್ತರಿ ಹಾಕುವುದಾಗಿಯೂ ಹೇಳಿತ್ತು.


ಇದನ್ನೂ ಓದಿ: ಫ್ಲ್ಯಾಟ್ ವಿಚಾರದಲ್ಲಿ ಕಂಗನಾ ರಾಣಾವತ್ ನಿಯಮ ಉಲ್ಲಂಘಿಸಿದ್ದಾರೆ: ಮುಂಬೈ ಸಿವಿಲ್ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...