Homeಅಂತರಾಷ್ಟ್ರೀಯಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

ಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

- Advertisement -
- Advertisement -

ಕೊರೊನಾ ವೈರಸ್ ನಿರ್ಬಂಧಿತ ಕ್ರಮಗಳನ್ನು ಪ್ರಶ್ನಿಸಿದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಎರಡು ಟ್ವೀಟ್‌ಗಳನ್ನು ಅವರು ಸಾಮಾಜಿಕ ಜಾಲತಾಣದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಟ್ವಿಟ್ಟರ್‌ ತೆಗೆದುಹಾಕಿದೆ

ತೀವ್ರ ಬಲಪಂಥೀಯ ನಾಯಕನಾದ ಬೋಲ್ಸನಾರೊ ಹಲವಾರು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದರು. ಅವರು ತಮ್ಮ ಸರ್ಕಾರದ ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಮುರಿದು ಬ್ರೆಸಿಲಿಯಾದ ಬೀದಿಗಳಲ್ಲಿ ಬೆಂಬಲಿಗರೊಂದಿಗೆ ಬೆರೆತು ಆರ್ಥಿಕತೆಯನ್ನು ಮುಂದುವರೆಸುವಂತೆ ಒತ್ತಾಯಿಸಿದ್ದರು.

ಎರಡು ಪೋಸ್ಟ್‌ಗಳನ್ನು ತೆಗೆದುಹಾಕಿದೆಯಲ್ಲದೆ ಅವುಗಳನ್ನು ಏಕೆ ತೆಗೆದುಹಾಕಲಾಗಿದೆ ಎಂಬುದನ್ನು ವಿವರಿಸುವ ನೋಟೀಸ್‌ ಅನ್ನು ಟ್ವಿಟ್ಟರ್‌ ನೀಡಿದೆ.

ಅಧಿಕೃತ ಮೂಲಗಳ ಪ್ರಕಾರ ಟ್ವಿಟ್ಟರ್‌ ಸಾರ್ವಜನಿಕ ಆರೋಗ್ಯ ಮಾಹಿತಿಗೆ ವಿರುದ್ಧವಾದ ವಿಷಯವನ್ನು ನಿರ್ವಹಿಸುವ ಕುರಿತು ತನ್ನ ಜಾಗತಿಕ ನಿಯಮಗಳನ್ನು ಇತ್ತೀಚೆಗೆ ವಿಸ್ತರಿಸಿದೆ. ಜನರು ಒಂದೆಡೆ ಸೇರುವುದರಿಂದ ಕೊರೊನಾ ಹರಡುವ ಹೆಚ್ಚಿನ ಅಪಾಯವಿದೆ ಎಂದು ಟ್ವಿಟರ್ ಹೇಳಿಕೆಯಲ್ಲಿ ವಿವರಿಸಿದೆ.

ಅಳಿಸಿದ ವೀಡಿಯೊವೊಂದರಲ್ಲಿ, ಬೋಲ್ಸನಾರೊ ಒಬ್ಬ ಬೀದಿ ಮಾರಾಟಗಾರನಿಗೆ, “ನಾನು ಜನರಿಂದ ಕೇಳುತ್ತಿರುವುದು ಅವರು ಕೆಲಸ ಮಾಡಲು ಬಯಸುತ್ತಾರೆ”. “ನಾನು ಮೊದಲಿನಿಂದಲೂ ಹೇಳಿದ್ದು, ‘ನಾವು ಜಾಗರೂಕರಾಗಿರುತ್ತೇವೆ, 65 ವರ್ಷಕ್ಕಿಂತ ಮೇಲ್ಪಟ್ಟವರು ಮನೆಯಲ್ಲಿಯೇ ಇರುತ್ತಾರೆ’ ಎಂದು ಅವರು ಹೇಳಿದ್ದರು.

“ನಾವು ಇನ್ನೂ ಮನೆಯಲ್ಲಿ ನಿಲ್ಲಲು ಸಾಧ್ಯವಿಲ್ಲ, ಭಯವಿದೆ, ಯಾಕೆಂದರೆ ನೀವು ರೋಗದಿಂದ ಸಾಯದಿದ್ದರೆ, ನೀವು ಹಸಿವಿನಿಂದ ಬಳಲುತ್ತಿದ್ದೀರಿ” ಎಂದು ಮಾರಾಟಗಾರ ಬೋಲ್ಸೊನಾರೊಗೆ ಹೇಳುತ್ತಾರೆ. ಆಗ ಅವರು ಪ್ರತಿಕ್ರಿಯಿಸುತ್ತಾ “ನೀವು ಸಾಯುವುದಿಲ್ಲ!” ಎನ್ನುತ್ತಾರೆ.

ಮತ್ತೊಂದು ವೀಡಿಯೊದಲ್ಲಿ, ಅಧ್ಯಕ್ಷರು “ಸಾಮಾನ್ಯ ಸ್ಥಿತಿಗೆ ಮರಳಬೇಕು” ಎಂದು ಹೇಳುತ್ತಾರೆ. ದಕ್ಷಿಣ ಅಮೆರಿಕಾದಾದ್ಯಂತ ಗವರ್ನರ್‌ಗಳು ಮತ್ತು ಕೆಲವು ಮೇಯರ್‌ಗಳು ವಿಧಿಸಿರುವ ಸಂಪರ್ಕತಡೆಯನ್ನು ಪ್ರಶ್ನಿಸಿದ್ದಾರೆ.

“ಇದೇ ರೀತಿ ಮುಂದುವರಿದರೆ, ನಿರುದ್ಯೋಗದ ಪ್ರಮಾಣವು ಹೆಚ್ಚಿ ಬಹಳ ಗಂಭೀರ ಸಮಸ್ಯೆಯಾಗಲಿದ್ದು, ಅದನ್ನು ಪರಿಹರಿಸಲು ವರ್ಷಗಳು ಬೇಕಾಗುತ್ತವೆ” ಎಂದು ಅವರು ಪ್ರತ್ಯೇಕತೆಯ ಕ್ರಮಗಳ ಬಗ್ಗೆ ಹೇಳಿದ್ದಾರೆ.

“ಬ್ರೆಜಿಲ್ ಅನ್ನು ನಿಲ್ಲಿಸಲು ಸಾಧ್ಯವಿಲ್ಲ. ನಾವು ವೆನೆಜುವೆಲಾ ಆಗಿ ಬದಲಾಗುತ್ತೇವೆ” ಎಂದು ಬೋಲ್ಸನಾರೊ ನಂತರ ತಮ್ಮ ಅಧಿಕೃತ ನಿವಾಸದ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬ್ರೆಜಿಲ್ ಆರೋಗ್ಯ ಸಚಿವ ಲೂಯಿಜ್ ಹೆನ್ರಿಕ್ ಮಾಂಡೆಟ್ಟಾ “ಬ್ರೆಜಿಲ್‌ನಲ್ಲಿ ಈಗಾಗಲೇ 3,904 ಜನರಿಗೆ ಸೋಂಕು ತಗುಲಿದ್ದು, 114 ಮಂದಿ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ.

“ವೈರಸ್ ಅನ್ನು ವಾಸ್ತವದೊಂದಿಗೆ ಎದುರಿಸೋಣ. ಇದು ಜೀವನ, ನಾವೆಲ್ಲರೂ ಒಂದು ದಿನ ಸಾಯಬೇಕು” ಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ನಾಲ್ಕು ವೀಡಿಯೊಗಳಲ್ಲಿ, ಬೋಲ್ಸನಾರೊ ಅವರು ಸಣ್ಣ ಜನಸಂದಣಿಯಿಂದ ಸುತ್ತುವರೆದಿದ್ದರು. ಈ ಕಾರಣಕ್ಕಾಗಿ ಟ್ವಿಟ್ಟರ್‌ ಅವರ ಟ್ವೀಟ್‌ಗಳನ್ನು ಅಳಿಸಿಹಾಕಿದೆ.

ಬೋಲ್ಸೊನಾರೊ ಕೊರೊನ ವೈರಸ್ ಅನ್ನು “ಜ್ವರ” ಎಂದು ಬಣ್ಣಿಸಿದ್ದಾರೆ ಮತ್ತು ಶಾಲೆಗಳು ಮತ್ತು ಅಂಗಡಿಗಳನ್ನು ಪುನಃ ತೆರೆಯಬೇಕೆಂದು ಪ್ರತಿಪಾದಿಸಿದ್ದಾರೆ. ಸ್ವಯಂ-ಪ್ರತ್ಯೇಕತೆಯು 60 ಕ್ಕಿಂತಲೂ ಹೆಚ್ಚು ವಯಸ್ಸಿನವರಿಗೆ ಮಾತ್ರ ಅಗತ್ಯವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...