Homeಅಂತರಾಷ್ಟ್ರೀಯಟ್ರಂಪ್ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಿದ ಟ್ವಿಟರ್: ಅಮಾನತ್ತಾದ ಟೀಮ್‌ಟ್ರಂಪ್ ಖಾತೆ!

ಟ್ರಂಪ್ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಿದ ಟ್ವಿಟರ್: ಅಮಾನತ್ತಾದ ಟೀಮ್‌ಟ್ರಂಪ್ ಖಾತೆ!

ಟ್ರಂಪ್‌ ಆಡಳಿತವಧಿಯಲ್ಲಿ ತನ್ನ ವೈಯಕ್ತಿಕ ಖಾತೆಯ ಮೂಲಕ ಆಧಾರವಿಲ್ಲದ ಆರೋಪಗಳು, ಸುಳ್ಳು ಘೋಷಣೆಗಳು, ತಪ್ಪು ಮಾಹಿತಿಗಳನ್ನು ಹರಡಿದ್ದಾರೆ ಎಂದು ಟ್ವಿಟರ್ ಆರೋಪಿಸಿದೆ.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರವರ ವೈಯಕ್ತಿಕ ಖಾತೆಯನ್ನು (realDonaldTrump) ಟ್ವಿಟರ್ ಶಾಶ್ವತವಾಗಿ ಬ್ಯಾನ್ ಮಾಡಿದೆ. ಅಮೆರಿಕ ಕ್ಯಾಪಿಟಲ್ ಮೇಲಿನ ಮತ್ತೊಂದು ದಾಳಿಯನ್ನು ತಡೆಯಲು ಈ ಕ್ರಮ ಅನಿವಾರ್ಯವಾಗಿದೆ ಎಂದು ಟ್ವಿಟರ್ ಹೇಳಿದೆ.

ಇದರಿಂದ ಕೆರಳಿದ ಟ್ರಂಪ್ ‘ಟ್ವಿಟರ್ ನನ್ನ ಮಾತನಾಡುವ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತಿದೆ’ ಎಂದು ತನ್ನ ಕಾರ್ಯಕ್ರಮಗಳ ಮತ್ತು ಚುನಾವಣಾ ಪ್ರಚಾರಕ್ಕಾಗಿ ಬಳಸುತ್ತಿದ್ದ ಟೀಮ್ ಟ್ರಂಪ್ ಖಾತೆಯಿಂದ ಟ್ವೀಟ್ ಮಾಡಿದ್ದಾರೆ. ಕೂಡಲೇ ಆ ಖಾತೆಯನ್ನು ಸಹ ಟ್ವಿಟರ್ ಅಮಾನತು ಮಾಡಿದೆ.

ನಾವು ಟ್ರಂಪ್‌ ಟ್ವೀಟ್‌ಗಳನ್ನು ಹತ್ತಿರದಿಂದ ಅಭ್ಯಾಸ ಮಾಡಿದ್ದೇವೆ. ಮುಂದಿನ ಹಿಂಸಾತ್ಮಕ ಅಪಾಯಗಳನ್ನು ತಡೆಯಲು ಅವರ ಖಾತೆಯನ್ನು ಶಾಶ್ವತವಾಗಿ ಬ್ಯಾನ್ಯ ಮಾಡುತ್ತಿದ್ದೇವೆ ಎಂದು ಟ್ವಿಟರ್ ತಿಳಿಸಿದೆ.

ಟ್ರಂಪ್‌ ಆಡಳಿತವಧಿಯಲ್ಲಿ ತನ್ನ ವೈಯಕ್ತಿಕ ಖಾತೆಯ ಮೂಲಕ ಆಧಾರವಿಲ್ಲದ ಆರೋಪಗಳು, ಸುಳ್ಳು ಘೋಷಣೆಗಳು, ತಪ್ಪು ಮಾಹಿತಿಗಳನ್ನು ಹರಡಿದ್ದಾರೆ ಎಂದು ಟ್ವಿಟರ್ ಆರೋಪಿಸಿದೆ.

ಟ್ರಂಪ್ ಅಧಿಕಾರವಧಿ ಮುಗಿಯುತ್ತಿದ್ದು, ಬುಧವಾರ ನಡೆದ ಯುಸ್ ಸಂಸತ್ ಮೇಲಿನ ದಾಳಿಗೆ ಟ್ರಂಪ್‌ ಅನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಇದೇ ಸಮಯಕ್ಕೆ ಕಾಯುತ್ತಿದ್ದ ಟ್ವಿಟರ್ ಟ್ರಂಪ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ಎಚ್ಚರಿಕೆ ರವಾನಿಸಿದೆ.

ಬಹುದೊಡ್ಡ ಪ್ರಜಾಪ್ರಭುತ್ವ ಎಂದು ಹೇಳಿಕೊಳ್ಳುವ ದೇಶದ ಅಧ್ಯಕ್ಷರಾಗಿ ಟ್ರಂಪ್ ನಡೆದುಕೊಂಡಿದ್ದು, ಗಲಭೆಗೆ ಪ್ರಚೋದನೆ ನೀಡಿದ್ದು, ಅದರಿಂದಾಗಿ ಅವರ ಟ್ವಿಟರ್ ಖಾತೆ ಖಾಯಂ ಬ್ಯಾನ್‌ ಆಗಿದ್ದು ಎಲ್ಲವೂ ಅವರಿಗೆ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ.

ತದನಂತರ ಟ್ರಂಪ್ ಅಧ್ಯಕ್ಷರ ಅಧಿಕೃತ ಖಾತೆ @POTUS ಮೂಲಕ ಟ್ವಿಟರ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ತೀವ್ರ ಎಡಪಂಥೀಯರ ಜೊತೆ ಸೇರಿ ಟ್ವಿಟರ್ ನನ್ನ ಮೇಲೆ ಪಿತೂರಿ ನಡೆಸುತ್ತಿದೆ ಎಂದು ದೂರಿದ್ದಾರೆ. ಆ ಟ್ವೀಟ್ ಅನ್ನು ಸಹ ಟ್ವಿಟರ್ ಡಿಲೀಟ್ ಮಾಡಿದೆ.

ಮತ್ತೊಂದು ಖಾತೆಯನ್ನು ಬಳಸಿ ಟ್ವಿಟರ್ ಅನ್ನು ಹಣಿಯಲು ಮುಂದಾಗುವುದು ನಮ್ಮ ನಿಯಮಗಳ ಉಲ್ಲಂಘಟನೆ ಎಂದು ಟ್ವಿಟರ್ ತಿಳಿಸಿದೆ.

ಯುಎಸ್ ಕ್ಯಾಪಿಟಲ್ ಮೇಲೆ ದಾಳಿ ನಡೆದಾಗ ತಾತ್ಕಾಲಿಕವಾಗಿ ಟ್ರಂಪ್ ಖಾತೆಯನ್ನು ಸ್ಥಗಿತಗೊಳಿಸಿತ್ತು. ಅದಕ್ಕೂ ಮೊದಲು ಟ್ರಂಪ್ “ನಾನು ಜನವರಿ 20ರ ಜೋ ಬೈಡೆನ್ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ, ನನ್ನ ಅಭಿಮಾನಿಗಳು ನನ್ನ ಮಾತು ಮೀರುವುದಿಲ್ಲ” ಎಂದು ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...