Homeಕರ್ನಾಟಕಆಪರೇಷನ್ ಕಮಲ ಬಿಜೆಪಿ ಆಟ, ಶೋಭಾ ಕರಂದ್ಲಾಚೆಗೆ ಗಣಿತ ಗೊತ್ತಿಲ್ಲ: ಸಿದ್ದರಾಮಯ್ಯ

ಆಪರೇಷನ್ ಕಮಲ ಬಿಜೆಪಿ ಆಟ, ಶೋಭಾ ಕರಂದ್ಲಾಚೆಗೆ ಗಣಿತ ಗೊತ್ತಿಲ್ಲ: ಸಿದ್ದರಾಮಯ್ಯ

- Advertisement -
- Advertisement -

ಒಂದು ಕಡೆ ಇಬ್ಬರು ಕಾಂಗ್ರೆಸ್ ಶಾಸಕರ ರಾಜಿನಾಮೆ ಹಿನ್ನೆಲೆಯಲ್ಲಿ ಮತ್ತೆ ಆಪರೇಷನ್ ಕಮಲ ಮುನ್ನೆಲೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವೆ ಟ್ವೀಟ್ ಸಮರ ಕೂಡ ನಡೆಯುತ್ತಿದೆ.

ಮೊದಲಿಗೆ ಇಬ್ಬರು ಶಾಸಕರು ರಾಜಿನಾಮೆ ಪ್ರಹಸನ ಶುರುವಾದಗ ಸಿದ್ದರಾಮಯ್ಯನವರು “ ಇತ್ತೀಚಿನ ರಾಜಕೀಯ ನಾಟಕಗಳು ಬಿಜೆಪಿಯವರ ಕೊಳಕು ರಾಜಕೀಯವನ್ನು ತೋರಿಸುತ್ತದೆ. ಅಸೆಂಬ್ಲಿಯಲ್ಲಿ ಬಿಜೆಪಿಗೆ ಜನತೆ ಬಹುಮತ ನೀಡದಿದ್ದರೂ ಸಹ ಅವರು ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಹವಣಿಸುತ್ತಿದ್ದಾರೆ. ನರೇಂದ್ರ ಮೋದಿಯವರಿಗೆ ಸ್ವಲ್ಪವಾದರೂ ಆತ್ಮಗೌರವವಿದ್ದಲ್ಲಿ ಅವರ ಪಕ್ಷದವರು ನಡೆಸುತ್ತಿರುವ ಅಸಾಂವಿಧಾನಿಕ ಕೃತ್ಯವನ್ನು ತಡೆಯಬೇಕು” ಎಂದು ಖಾರವಾಗಿ ಟ್ವೀಟ್ ಮಾಡಿದ್ದರು.

ಇದಕ್ಕೆ ಬಿಜೆಪಿಯ ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಚೆಯವರು ಮರು ಉತ್ತರ ನೀಡಿದ್ದರು. ಅವರು “ಪ್ರೀತಿಯ ಸಿದ್ದರಾಮಯ್ಯನವರೆ, 105>78- (ಬಿಜೆಪಿಯ 105ಕ್ಕಿಂತ ಕಾಂಗ್ರೆಸ್‍ನ 78 ಕಡಿಮೆ). ಆದರೂ ಕಾಂಗ್ರೆಸ್ ಜೆಡಿಎಸ್ ಸೇರಿ ಜನಾಭಿಪ್ರಾಯವನ್ನು ಕಡೆಗಣಿಸಿ ಅನೈತಿಕ ಸರ್ಕಾರ ರಚಿಸಿದ್ದೀರಿ. ಜನ ಬಿಜೆಪಿಗೆ ಬಹುಮತ ಕೊಟ್ಟಿದ್ದಾರೆ. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿನ ಸೋಲಿನಿಂದ ನಿಮ್ಮ ಕಾಮನ್ ಸೆನ್ಸ್ ಅನ್ನು ಕಳೆದುಕೊಂಡಿದ್ದೀರಾ” ಎಂದು ಖಾರವಾಗಿ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯನವರು “ನನ್ನ ತಿಳುವಳಿಕೆ 113>105 (ಬಹುಮತಕ್ಕಿಂತ ಬಿಜೆಪಿ ಕಡಿಮೆ ಇದೆ) ಮತ್ತು 113 ಅನ್ನುವುದು ಕರ್ನಾಟಕ ವಿಧಾನಸಭೆಯಲ್ಲಿ ಯಾರಾದರೂ ಸರ್ಕಾರ ರಚಿಸಲು ಬೇಕಿರುವ ಅತ್ಯಮೂಲ್ಯ ಬಹುಮತವಾಗಿದೆ.

ಹಾಗಾಗಿ “ಏಕೀ ಮಿನಿಟ್” ತೆಗೆದುಕೊಂಡು ರಾಜಕೀಯದ ನಿಮ್ಮ ಸಣ್ಣತನವನ್ನು ಬಿಟ್ಟು ಪ್ರಜಾಪ್ರಭುತ್ವದ ಗಣಿತ ಶಾಸ್ತ್ರವನ್ನು ಕಲಿಯಿರಿ ಎಂದು ಹೇಳಿದ್ದಾರೆ. ಅವರ ಟ್ವೀಟ್‍ನಲ್ಲಿ ಇತ್ತೀಚೆಗೆ ಐಎಂಎ ಹಗರಣ ಕುರಿತು ಸಂಸತ್ತಿನಲ್ಲಿ ಹಿಂದಿಯಲ್ಲಿ ಭಾಷಣ ಮಾಡಲು ಹೋಗಿ ಮುಜುಗರಕ್ಕೊಳಗಾಗಿದ್ದ ಶೋಭಾ ಕರಂದ್ಲಾಚೆಯವರ ಏಕೀ ಮಿನಿಟ್ ಉಲ್ಲೇಖಿಸಿ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಕೋಪಗೊಂಡ ಶೋಭಾ ಕರಂದ್ಲಾಚೆಯವರು ಬಿಜೆಪಿಯ ವಿರುದ್ಧದ ನಿಮ್ಮ ನೀಚ ರಾಜಕಾರನವನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದರು.

ಮುಂದುವರಿದು ನಿಮ್ಮ 105 ಸಂಖ್ಯೆಯೊಂದಿಗೆ ಸರ್ಕಾರ ರಚಿಸಬಹುದೆಂಬ ವಿಶ್ವಾಸ ನಿಮಗಿದ್ದರೆ ರಾಜ್ಯಪಾಲರಿಗೆ ನಿಮ್ಮ ಬಹುಮತವನ್ನು ಸಾಬೀತು ಪಡಿಸಿ ಸರ್ಕಾರ ರಚಿಸಲು ಹಕ್ಕು ಮಂಡಿಸಿ. ಒಂದು ವೇಳೆ ರಾಜ್ಯಪಾಲರು ನಿಮ್ಮ ಹಕ್ಕನ್ನು ಒಪ್ಪಿಕೊಂಡಲ್ಲಿ ನಾವು ಸಂತೋಷದಿಂದ ಸರ್ಕಾರದಿಂದ ನಿರ್ಗಮಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...