Homeಕರ್ನಾಟಕಪೋಜು ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ: ಸಚಿವ ಸುಧಾಕರ್‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಸವಾಲು

ಪೋಜು ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ: ಸಚಿವ ಸುಧಾಕರ್‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಸವಾಲು

ಕರೋನಾ ಸೋಂಕಿತರು ಬೆಡ್ ಗಳಿಲ್ಲದೆ, ಅಂಬುಲೆನ್ಸ್ ದಕ್ಕದೆ, ಸೂಕ್ತ ವೈದ್ಯಕೀಯ ಚಿಕಿತ್ಸೆಗಾಗಿ ಪರದಾಡುವಾಗ ನಿಮ್ಮ ಸಶಕ್ತತೆ ಎಲ್ಲಿ ಅಡಗಿತ್ತು? ಕರೋನಾ ನಿಯಂತ್ರಣಕ್ಕೆ ಎಷ್ಟೊಂದು ಸಚಿವರು? ಕಮೀಷನ್ ದಂಧೆ, ಸಮನ್ವಯದ ಕೊರತೆಯಿಂದ ಬಳಲಿ ಹೈರಾಣಾದಿರಿ ಎಂದು ಎಚ್‌ಡಿಕೆ ಟೀಕಿಸಿದ್ದಾರೆ.

- Advertisement -
- Advertisement -

ಸರ್ಕಾರಿ ಅಸ್ಪತ್ರೆಗಳಲ್ಲಿ ಆಮ್ಲಜನಕ ಕೊರೆತೆ ವಿಚಾರ ವಿವಾದ ಉಂಟು ಮಾಡಿದ್ದು, ಸಚಿವ ಕೆ ಸುಧಾಕರ್ ಮತ್ತು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ನಡುವೆ ವಾದ-ವಿವಾದಕ್ಕೆ ಕಾರಣವಾಗಿದೆ.

ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮಾಡುವ ಮೂಲಕ ಇಂದು ಬೆಳಿಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿಯವರು ಒತ್ತಾಯಿಸಿದ್ದಾರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು “ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್‌.ಡಿ.ಕುಮಾರಸ್ವಾಮಿ ಅವರೇ, ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ರೈತರಿಗೂ ಯೂರಿಯಾ ಗೊಬ್ಬರ ಪೂರೈಸುವಲ್ಲಿ ಸಶಕ್ತವಾಗಿದೆ. ಆಡಿದ ಮಾತು ಬಿಟ್ಟ ಬಾಣ ಕಳೆದ ಸಮಯ ಮತ್ತು ಕೈತಪ್ಪಿ ಹೋದ ಅವಕಾಶ ಇವು ಎಂದಿಗೂ ಮರಳಿ ಬಾರವು” ಎಂದು ಸಮರ್ಥಿಸಿಕೊಂಡಿದ್ದರು.

“ಮಾಧ್ಯಮಗಳ ವರದಿಗಳನ್ನು ಗಮನಿಸುವಷ್ಟು ವ್ಯವಧಾನವಿರದ ನೀವು ಮಾಧ್ಯಮಗಳ ಮುಂದೆ ಕುಳಿತು ‘ಪೋಜು’ ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ. ಕರೋನಾ ಸೋಂಕಿನ ವಿಷಯದಲ್ಲಿ ಆರು ತಿಂಗಳಿಂದ ಮಾತಿನ ಮಂಟಪ ಕಟ್ಟಿದರೆ ಹೊರತು ಅನುಷ್ಠಾನದಲ್ಲಿ ಮಕಾಡೆ ಮಲಗಿದ್ದು ರಾಜ್ಯದ ಜನತೆಗೆ ಗೊತ್ತಿದೆ” ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟೀಕಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ರೈತರೊಬ್ಬರು ವಾರದಿಂದ ಅಲೆದರೂ ಒಂದು ಚೀಲ ಗೊಬ್ಬರ ಸಿಕ್ಕಿಲ್ಲ ಎಂದು ಅಳುತ್ತಿದ್ದರೆ, ಆಸ್ಪತ್ರೆಗಳಲ್ಲಿ ಆಕ್ಸಿಜನ್ ಇಲ್ಲದೇ ರೋಗಿಗಳು ನರಳಾಡುತ್ತಿರುವುದು ಸರ್ಕಾರ ಸಶಕ್ತವಾಗಿರುವ ಲಕ್ಷಣವೋ? ನಿಶಕ್ತವಾಗಿರುವ ಲಕ್ಷಣವೋ? ಎಂದು ಅವರು ಪ್ರಶ್ನಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ರೈತರೊಬ್ಬರು ವಾರದಿಂದ ಅಲೆದರೂ ಒಂದು ಚೀಲ ಗೊಬ್ಬರ ಸಿಕ್ಕಿಲ್ಲ ಎಂದು ಅಳುತ್ತಿದ್ದರೆ, ಆಸ್ಪತ್ರೆಗಳಲ್ಲಿ ಆಕ್ಸಿಜನ್ ಇಲ್ಲದೇ ರೋಗಿಗಳು ನರಳಾಡುತ್ತಿರುವುದು ಸರ್ಕಾರ ಸಶಕ್ತವಾಗಿರುವ ಲಕ್ಷಣವೋ? ನಿಶಕ್ತವಾಗಿರುವ ಲಕ್ಷಣವೋ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕರೋನಾ ಸೋಂಕಿತರು ಬೆಡ್ ಗಳಿಲ್ಲದೆ, ಅಂಬುಲೆನ್ಸ್ ದಕ್ಕದೆ, ಸೂಕ್ತ ವೈದ್ಯಕೀಯ ಚಿಕಿತ್ಸೆಗಾಗಿ ಪರದಾಡುವಾಗ ನಿಮ್ಮ ಸಶಕ್ತತೆ ಎಲ್ಲಿ ಅಡಗಿತ್ತು? ಕರೋನಾ ನಿಯಂತ್ರಣಕ್ಕೆ ಎಷ್ಟೊಂದು ಸಚಿವರು? ಕಮೀಷನ್ ದಂಧೆ, ಸಮನ್ವಯದ ಕೊರತೆಯಿಂದ ಬಳಲಿ ಹೈರಾಣಾದಿರಿ ಎಂದು ಟೀಕಿಸಿದ್ದಾರೆ.

ಅಧಿಕಾರ ಇದ್ದಾಗಲೂ ಕೊಟ್ಟ ಮಾತು ಉಳಿಸಿ ಕೊಳ್ಳಲಾಗದವರ ಹಾಗೂ ರೋಗಗ್ರಸ್ತ ಮನಸ್ಸಿನವರ ಬಗ್ಗೆ ನನಗೆ ಮರುಕವಿದೆ. ಪತ್ರಿಕಾಗೋಷ್ಠಿ ಕರೆಯದೆ “ಈ ದಿನ ಪತ್ರಿಕಾಗೋಷ್ಠಿ ಇರುವುದಿಲ್ಲ” ಎಂದು ಸ್ಪಷ್ಟನೆ ನೀಡುವ ಬೌದ್ಧಿಕ ದಾರಿದ್ರ್ಯ ನಿಮ್ಮಂತೆ ನನಗೆ ಬಂದೊದಗಿಲ್ಲ ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಕೃಷಿ ನಾಶ: ಮಾಜಿ ಪ್ರಧಾನಿ ದೇವೇಗೌಡ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...