Homeಕರ್ನಾಟಕಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯನವರನ್ನು ಕೆಣಕಿ ಸರಿಯಾಗಿ ಗುದ್ದಿಸಿಕೊಂಡ ಸಿ.ಟಿ ರವಿ...

ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯನವರನ್ನು ಕೆಣಕಿ ಸರಿಯಾಗಿ ಗುದ್ದಿಸಿಕೊಂಡ ಸಿ.ಟಿ ರವಿ…

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಬಿಜೆಪಿ ಪ್ರಣಾಳಿಕೆಯಲ್ಲಿ ಸಾವರ್ಕರ್‌ಗೆ ಭಾರತ ರತ್ನ ನೀಡುವುದಾಗಿ ಘೋಷಿಸಿದೆ. ಬ್ರಿಟಿಷರಿಗೆ ಕ್ಷಮಾಪಣಾ ಪತ್ರಬರೆದು, ಸ್ವಾತಂತ್ರ್ಯ ಹೊರಾಟಕ್ಕೆ ದ್ರೋಹ ಬಗೆದ ಹೇಡಿ ಸಾವರ್ಕರ್‌ಗೆ ಭಾರತ ರತ್ನ ನೀಡಬಾರದೆಂದು ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹ “ಗಾಂಧಿ ಕೊಲೆಗೆ ಪ್ರಯತ್ನಿಸಿದ್ದ ಸಾವರ್ಕರ್‌ಗೆ ಭಾರತ ರತ್ನ ನೀಡಬಾರದು” ಎಂದು ಆಗ್ರಹಿಸಿದ್ದರು.

ಇದಕ್ಕೆ ಸಿ.ಟಿ ರವಿಯವರು ಸುಮ್ಮನಿರದೇ ತಿರುಗೇಟು ನೀಡಲು ಹೋಗಿ ಸರಿಯಾಗಿ ಪೆಟ್ಟು ತಿಂದಿದ್ದಾರೆ.

“ಮಹಾತ್ಮ ಗಾಂಧಿಯವರ ಹತ್ಯೆಯಲ್ಲಿ ರಾಷ್ಟ್ರೀಯವಾದಿ ವೀರ್ ಸಾವರ್ಕರ್ ಅವರನ್ನು ಸಂಚುಕೋರ ಎಂದು ಆರೋಪಿಸಿದ್ದೀರಿ. ಮುಖ್ಯಮಂತ್ರಿ ಹುದ್ದೆಯನ್ನು ಕಳೆದುಕೊಂಡ ನಂತರ ನೀವು ಮಾನಸಿಕವಾಗಿ ಅಂಗವಿಕಲರಾಗಿದ್ದೀರಾ? ನಿಮಗೆ ಇತಿಹಾಸದ ಬಗ್ಗೆ ಏನಾದರೂ ಕಲ್ಪನೆ ಇದೆಯೇ? ನೀವು ಸೆಲ್ಯುಲಾರ್ ಜೈಲಿಗೆ ಏಕೆ ಭೇಟಿ ನೀಡಬಾರದು! ನಿಮ್ಮ ಪ್ರವಾಸಕ್ಕೆ ನಾನು ಪ್ರಾಯೋಜಕತ್ವ ನೀಡುತ್ತೇನೆ” ಎಂದು ಸಿ.ಟಿ ರವಿ ಸಿದ್ದರಾಮಯ್ಯನವರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು.

ಇದರಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯನವರು “ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ.
ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತಾಡುತ್ತೇವೆ.” ಎಂದು ತಿರುಗೇಟು ನೀಡಿದ್ದಾರೆ.

ಮುಂದುವರಿದು ಸಿದ್ದರಾಮಯ್ಯನವರು “ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ!” ಎಂದು ಸಿ.ಟಿ ರವಿಯವರು ಮಾಡಿದ ಅಪಘಾತವನ್ನು ಉಲ್ಲೇಖಿಸಿ ಟ್ರೋಲ್ ಮಾಡಿದ್ದಾರೆ.

ಅಲ್ಲಿವರೆಗೂ ಇಂಗ್ಲಿಷ್‌ನಲ್ಲಿ ಟ್ವೀಟ್‌ ಮಾಡುತ್ತಿದ್ದ ಸಿ.ಟಿ ರವಿಯವರು “ಹಿಂದೂ ವಿರೋಧಿ ಹಾಗೂ ಮಹಾ ಕ್ರೂರಿಯಾಗಿದ್ದ ಟಿಪ್ಪು ಜಯಂತಿ ಆಚರಿಸಿ ಅಮಾಯಕರನ್ನು ಕೊಂದವರಿಗೆ ಒಬ್ಬ ದೇಶಭಕ್ತ ಮಹಾತ್ಮ ಗಾಂಧಿಯವರ ಹತ್ಯೆಯ ಆರೋಪಿಯಾಗಿ ಕಾಣುವುದು ಸಹಜ. ತಮ್ಮ ಅಧಿಕಾರ ಅವಧಿಯಲ್ಲಿ ಹಲವು ಅಧಿಕಾರಿಗಳು ಮತ್ತು ಮುಗ್ದರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾಗ ರಾಜ್ಯವನ್ನಾಳುತ್ತಿದ್ದವರು ಏನು ಕುಡಿಯುತ್ತಿದ್ದರೋ?” ಎಂದು ವಿಷಯಾಂತರ ಮಾಡಲು ಪ್ರಯತ್ನಿಸಿದ್ದಾರೆ.

“ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿ ಕೊಲೆ ಮಾಡಿದವರ ಕುರಿತು ನೀವು ಇಷ್ಟೊಂದು ಮಾತನಾಡುತ್ತಿರುವುದು ನೋಡಿದರೆ ಅವರು ನಿಮ್ಮ ಆಪ್ತ ಬಳಗವೇ ಇರಬೇಕು. ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅಂತ ಮಹಾ ಕ್ರೂರಿಗಳ ಇತಿಹಾಸ ಓದುವ ನಡುವೆ ವಿದೇಶದಲ್ಲಿ ಕುಡಿದು ಸತ್ತವರ ಕುರಿತ ಸತ್ಯವನ್ನು ಸಹ ನೀವು ತಿಳಿದು ಮಾತನಾಡುತ್ತೀರಿ ಎಂದು ನಂಬಿದ್ದೇನೆ.” ಎಂತಲೂ ಸಿ.ಟಿ ರವಿಯವರು, ತೀರಿಕೊಂಡಿರುವ ಸಿದ್ದರಾಮಯ್ಯನವರ ಮಗನ ವಿಚಾರವನ್ನು ಮುನ್ನಲೆಗೆ ತಂದಿದ್ದಾರೆ.

ಈ ರೀತಿ ವಿಷಯಾಂತರ ಮಾಡುತ್ತಿರುವ, ಸತ್ತವರ ಬಗ್ಗೆಯು ಕೆಟ್ಟದಾಗಿ ಮಾತನಾಡುತ್ತಿರುವ ಸಿ.ಟಿ ರವಿಗೆ ಸಿದ್ದರಾಮಯ್ಯನವರು ಹೇಗೆ ಜಾಡಿಸುತ್ತಾರೋ ಕಾದು ನೋಡಬೇಕಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...