Homeಮುಖಪುಟಉ.ಪ್ರದೇಶ: ಮುಸ್ಲಿಂ ವ್ಯಕ್ತಿಗೆ ಥಳಿಸಿ ಹತ್ಯೆ; ಇಬ್ಬರ ಬಂಧನ

ಉ.ಪ್ರದೇಶ: ಮುಸ್ಲಿಂ ವ್ಯಕ್ತಿಗೆ ಥಳಿಸಿ ಹತ್ಯೆ; ಇಬ್ಬರ ಬಂಧನ

- Advertisement -
- Advertisement -

ಕ್ಷುಲ್ಲಕ ಕಾರಣಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹಾಪುರ್ ಜಿಲ್ಲೆಯಲ್ಲಿ ಮಂಗಳವಾರ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಬುಧವಾರ ಇಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಲುಹಾರಿ ಗ್ರಾಮದ ಬಳಿ ದಸರಾ ಹಬ್ಬಕ್ಕೆ ತೆರಳುತ್ತಿದ್ದ ಗುಂಪಿನಲ್ಲಿರುವ ವ್ಯಕ್ತಿಗೆ ಇರ್ಷಾದ್ ಮೊಹಮ್ಮದ್ ಎಂಬ ವ್ಯಕ್ತಿಯು ಮೋಟಾರ್ ಬೈಕ್‌ನಿಂದ ಡಿಕ್ಕಿ ಹೊಡೆದಿದ್ದನು. ಈ ಅಪಘಾತವು ತೀವ್ರ ವಾಗ್ವಾದಕ್ಕೆ ಕಾರಣವಾಯಿತು, ನಂತರ ಹಿಂದೂತ್ವ ಗುಂಪು ವ್ಯಕ್ತಿಯ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ, ಥಳಿಸಿದ್ದರಿಂದ ಮುಸ್ಲಿ ವ್ಯಕ್ತಿ ಸಾವನ್ನಪ್ಪಿದ್ದಾನೆ.

”ಮೊಹಮ್ಮದ್‌ನನ್ನು ರಕ್ಷಿಸಲು ಯತ್ನಿಸಿದ ವಾಸಿಂ ಎಂಬ ಮತ್ತೊಬ್ಬ ವ್ಯಕ್ತಿಯೂ ಗಾಯಗೊಂಡಿದ್ದಾರೆ. ನಂತರ ಮೊಹಮ್ಮದ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು” ಎಂದು ಪೊಲೀಸರು ತಿಳಿಸಿದ್ದಾರೆ.

ಇರ್ಷಾದ್ ಮೊಹಮ್ಮದ್ ಅವರ ತಂದೆ ಇಮಾಮುದ್ದೀನ್ ಮೊಹಮ್ಮದ್ ಅವರ ದೂರಿನ ಆಧಾರದ ಮೇಲೆ ಪೊಲೀಸರು ಆರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ಸೂಪರಿಂಟೆಂಡೆಂಟ್ (ಹಾಪುರ್) ಅಭಿಷೇಕ್ ವರ್ಮಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 148 (ಮಾರಕ ಆಯುಧಗಳಿಂದ ಗಲಭೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನೂ ನಾಲ್ವರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ನಂತರ, ಹಿಂಸಾಚಾರವನ್ನು ತಡೆಗಟ್ಟಲು ಪ್ರಾಂತೀಯ ಸಶಸ್ತ್ರ ಕಾನ್‌ಸ್ಟೇಬಲ್‌ ಸಿಬ್ಬಂದಿಯನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜ್ ಕುಮಾರ್ ದಿ ಹಿಂದೂಗೆ ತಿಳಿಸಿದ್ದಾರೆ.

ಇದನ್ನೂ ಓದಿ: ದೇವಾಲಯದ ಆವರಣದಲ್ಲಿ RSS ಚಟುವಟಿಕೆಗೆ ನಿಷೇಧ: ಕೇರಳ ಸರ್ಕಾರದ ಸುತ್ತೋಲೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...