Homeಮುಖಪುಟಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಆರೋಪ: ಇಬ್ಬರನ್ನು ಬಂಧಿಸಿದ ಎನ್‌ಐಎ

ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಆರೋಪ: ಇಬ್ಬರನ್ನು ಬಂಧಿಸಿದ ಎನ್‌ಐಎ

- Advertisement -
- Advertisement -

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಬ್ಬರು ಸ್ಥಳೀಯ ನಿವಾಸಿಗಳನ್ನು ಬಂಧಿಸಿದೆ ಎಂದು ವರದಿಯಾಗಿದೆ.

“ಪಹಲ್ಗಾಮ್‌ನ ಬಟ್ಕೋಟ್‌ನ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಹಿಲ್ ಪಾರ್ಕ್‌ನ ಬಶೀರ್ ಅಹ್ಮದ್ ಜೋಥರ್ ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ದಾಳಿಯಲ್ಲಿ ಭಾಗಿಯಾಗಿರುವ ಮೂವರು ಸಶಸ್ತ್ರ ಭಯೋತ್ಪಾದಕರ ಗುರುತನ್ನು ಬಹಿರಂಗಪಡಿಸಿದ್ದಾರೆ. ಅವರು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಗೆ ಸಂಬಂಧಿಸಿದ ಪಾಕಿಸ್ತಾನಿ ಪ್ರಜೆಗಳು ಎಂದು ದೃಢಪಡಿಸಿದ್ದಾರೆ” ಎಂದು ಎನ್‌ಐಎ ವಕ್ತಾರರು ತಿಳಿಸಿದ್ದಾಗಿ indianexpress.com ವರದಿ ಮಾಡಿದೆ.

ತನಿಖೆಯ ಪ್ರಕಾರ, ಪರ್ವೈಜ್ ಮತ್ತು ಬಶೀರ್ ದಾಳಿಗೆ ಮೊದಲು ಮೂವರು ಶಸ್ತ್ರಸಜ್ಜಿತ ಭಯೋತ್ಪಾದಕರಿಗೆ ಅವರ ಬಗ್ಗೆ ಗೊತ್ತಿದ್ದೇ ಹಿಲ್ ಪಾರ್ಕ್‌ನಲ್ಲಿರುವ ಗುಡಿಸಲಿನಲ್ಲಿ ಆಶ್ರಯ ಕೊಟ್ಟಿದ್ದರು ಎಂದು ತಿಳಿದು ಬಂದಿದೆ. “ಇಬ್ಬರು ವ್ಯಕ್ತಿಗಳು ಭಯೋತ್ಪಾದಕರಿಗೆ ಆಹಾರ, ಆಶ್ರಯ ಮತ್ತು ಇತರ ಬೆಂಬಲವನ್ನು ಒದಗಿಸಿದ್ದರು. ಆ ಬಳಿಕ ಭಯೋತ್ಪಾದಕರು ಪ್ರವಾಸಿಗರನ್ನು ಹತ್ಯೆಗೈದಿದ್ದಾರೆ. ಇದು ಈವರೆಗಿನ ಅತ್ಯಂತ ಭೀಕರ ಭಯೋತ್ಪಾದಕ ದಾಳಿಗಳಲ್ಲಿ ಒಂದಾಗಿದೆ” ಎಂದು ಎನ್‌ಐಎ ವಕ್ತಾರರು ಹೇಳಿದ್ದಾಗಿ ವರದಿ ತಿಳಿಸಿದೆ.

ಇಬ್ಬರನ್ನು 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 19ರ ಅಡಿಯಲ್ಲಿ ಬಂಧಿಸಿರುವ ಎನ್‌ಐಎ, ತನಿಖೆ ಮುಂದುವರೆಸಿದೆ ಎಂದು ಎನ್‌ಐಎ ವಕ್ತಾರರು ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಇಪ್ಪತ್ತಾರು ಜನರು ಸಾವನ್ನಪ್ಪಿದ್ದರು ಮತ್ತು 16 ಜನರು ಗಾಯಗೊಂಡಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಮೇ 7ರಂದು ಭಾರತವು ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತ್ತು. ಇದರ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಮೂರು ದಿನಗಳ ಮಿಲಿಟರಿ ಸಂಘರ್ಷ ನಡೆದಿತ್ತು.

Match is fixed: ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ; ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...