Homeಮುಖಪುಟಹೈದರಾಬಾದ್‌: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ; ಇಬ್ಬರ ಬಂಧನ

ಹೈದರಾಬಾದ್‌: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ; ಇಬ್ಬರ ಬಂಧನ

- Advertisement -
- Advertisement -

ಹೈದರಾಬಾದ್​​ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಹೈದರಾಬಾದ್‌ನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಬಂಧಿತ ಆರೋಪಿಗಳು. ಇವರಿಂದ ನಕಲಿ ಉತ್ಪನ್ನ, ಪ್ಯಾಕಿಂಗ್​ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ, 2 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಮಲಕ್‌ಪೇಟ್‌ ಪೊಲೀಸ್ ಠಾಣೆಗೆ ಕೆಎಸ್‌ಡಿಎಲ್‌ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ದೂರು ನೀಡಿದ್ದಾರೆ.

ಸಚಿವ ಎಂ.ಬಿ ಪಾಟೀಲ್‌ಗೆ ಅನಾಮಧೇಯ ಕರೆ:

ಹೈದರಾಬಾದ್‌ನಲ್ಲಿ ನಕಲಿ ಮೈಸೂರು ಸ್ಯಾಂಡಲ್‌ ಸೋಪ್ ತಯಾರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಸಚಿವ ಎಂ.ಬಿ ಪಾಟೀಲ್ ಅವರಿಗೆ ಅನಾಮಧೇಯ ಕರೆ ಬಂದಿತ್ತು. ಸಚಿವರು ಸ್ಯಾಂಡಲ್‌ ಸೋಪ್ ಕಾರ್ಖಾನೆ ಎಂ.ಡಿ ಡಾ.ಪ್ರಶಾಂತ್​ಗೆ ನಿಗಾವಹಿಸಲು ಸೂಚಿಸಿದ್ದರು. ಪ್ರಶಾಂತ್ ಅವರ ಸೂಚನೆ ಮೇರೆಗೆ ಸಿಂಕದರಾಬಾದ್‌ನಲ್ಲಿರುವ ಕೆಎಸ್​ಡಿಎಲ್ ಅಧಿಕೃತ ಮಾರಾಟ ಕಚೇರಿ ಸಿಬ್ಬಂದಿ ಸ್ವತಃ 1ಲಕ್ಷ ರೂಪಾಯಿಯ ಸೋಪ್ ಖರೀದಿಸಿ ನಕಲಿ ಘಟಕದ ಮೂಲ ಪತ್ತೆ ಹಚ್ಚಿದ್ದರು. ಬಳಿಕ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂ. ಬೆಲೆಯ ಸೋಪ್ ಖರೀದಿಗೆ ಆರ್ಡರ್ ಕೊಟ್ಟಿದ್ದರು. ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಸೆರೆ ಹಿಡಿದು, ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ತಲಾ 150 ಗ್ರಾಂ ತೂಕದ 3 ಸಾಬೂನುಗಳಿರುವ 20 ಕಾರ್ಟನ್ ಬಾಕ್ಸ್‌ಗಳು (ಪ್ರತಿಯೊಂದು ಬಾಕ್ಸ್‌ನಲ್ಲಿ 90ರಂತೆ ಒಟ್ಟು 1,800 ಪೀಸ್ ಗಳು), ತಲಾ 75 ಗ್ರಾಂನ 47 ಕಾರ್ಟನ್ ಬಾಕ್ಸ್‌ಗಳು (9,400 ಪೀಸ್‌ಗಳು), 150 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಖಾಲಿ ಕಾರ್ಟನ್ ಬಾಕ್ಸ್‌ಗಳು ಮತ್ತು 75 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಕಾರ್ಟನ್ ಬಾಕ್ಸ್‌ಗಳು ನಕಲಿ ಘಟಕದಲ್ಲಿ ಪತ್ತೆಯಾಗಿವೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಕೆಎಸ್‌ಡಿಎಲ್‌ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ತಿಳಿಸಿದ್ದಾರೆ.

ಇದನ್ನೂ ಓದಿ: ಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...