Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ಕ್ಷಮಾಧಾನ ರದ್ದುಪಡಿಸಿದ ತೀರ್ಪು ಪ್ರಶ್ನಿಸಿ ಕೋರ್ಟ್‌ ಮೊರೆ ಹೋದ ಅಪರಾಧಿಗಳು

ಬಿಲ್ಕಿಸ್ ಬಾನು ಪ್ರಕರಣ: ಕ್ಷಮಾಧಾನ ರದ್ದುಪಡಿಸಿದ ತೀರ್ಪು ಪ್ರಶ್ನಿಸಿ ಕೋರ್ಟ್‌ ಮೊರೆ ಹೋದ ಅಪರಾಧಿಗಳು

- Advertisement -
- Advertisement -

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಇಬ್ಬರು ಅಪರಾಧಿಗಳು ತಮಗೆ ನೀಡಲಾದ ಕ್ಷಮಾಧಾನವನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್‌ ತೀರ್ಪಿನ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸಿದ್ದು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಒಪ್ಪಿಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ.

ಜನವರಿ 8 ರಂದು ಸುಪ್ರೀಂಕೋರ್ಟ್ ಬಿಲ್ಕಿಸ್ ಬಾನು ಪ್ರಕರಣದಲ್ಲಿ 11 ಅಪರಾಧಿಗಳ ಬಿಡುಗಡೆಯನ್ನು ರದ್ದುಗೊಳಿಸಿದೆ ಮತ್ತು ಆದೇಶದ ದಿನಾಂಕದಿಂದ ಎರಡು ವಾರಗಳಲ್ಲಿ ಶರಣಾಗುವಂತೆ ಸೂಚಿಸಿತ್ತು.

ಪ್ರಕರಣದ 11 ಅಪರಾಧಿಗಳ ಪೈಕಿ ಇಬ್ಬರು ಅಪರಾಧಿಗಳಾದ ರಾಧೇಶೈಮ್ ಭಗವಾನದಾಸ್ ಶಾ ಮತ್ತು ರಾಜುಭಾಯಿ ಬಾಬುಲಾಲ್ ಸೋನಿ ಅವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಸುಪ್ರೀಂನ ಎರಡು ವಿಭಿನ್ನ ಪೀಠಗಳು ಕ್ಷಮಾಧಾನ ನೀಡಿ ಬಿಡುಗಡೆಯ ವಿಷಯದ ಬಗ್ಗೆ ವಿಭಿನ್ನ ತೀರ್ಪನ್ನು ನೀಡಿರುವುದು ಅಸಂಗತವಾಗಿದೆ. ಕ್ಷಮಾದಾನ ರದ್ದುಪಡಿಸಿರುವ ತೀರ್ಪು, 2002ರ ಸಂವಿಧಾನ ಪೀಠ ನೀಡಿದ್ದ ಆದೇಶಕ್ಕೆ ವ್ಯತಿರಿಕ್ತವಾಗಿದೆ. ಆದ್ದರಿಂದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಒಪ್ಪಿಸಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದಾರೆ.

ತಮ್ಮ ಅರ್ಜಿಯಲ್ಲಿ, ಷಾ ಮತ್ತು ಸೋನಿ ನ್ಯಾಯಾಲಯದ ಆದೇಶವು ಕಾನೂನು ಮತ್ತು ನ್ಯಾಯಾಂಗ ಔಚಿತ್ಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಮೇ 2022ರ ಆದೇಶದ ವಿರುದ್ಧ ಬಿಲ್ಕಿಸ್ ಈಗಾಗಲೇ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದು ಅದನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದು, ಸಂತ್ರಸ್ತೆ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಬೇಕಿತ್ತು ಮತ್ತು ಮೇ 13ರ ಹಿಂದಿನ ಆದೇಶವನ್ನು ಪ್ರಶ್ನಿಸಿ ರಿಟ್ ಅರ್ಜಿಯನ್ನು ಸಲ್ಲಿಸಬೇಕಾಗಿತ್ತು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ವಕೀಲ ರಿಷಿ ಮಲ್ಹೋತ್ರಾ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, 2022ರ ಮೇ 13ರಂದು ಒಂದು ಪೀಠವು ಗುಜರಾತ್ ಸರ್ಕಾರಕ್ಕೆ ರಾಜ್ಯ ಸರ್ಕಾರದ ಕ್ಷಮಾಧಾನ ನೀತಿಯ ನಿಯಮಗಳಿಗೆ ಸಂಬಂಧಿಸಿದಂತೆ ಅವಧಿಪೂರ್ವ ಬಿಡುಗಡೆಗಾಗಿ ಷಾ ಅವರ ಅರ್ಜಿಯನ್ನು ಪರಿಗಣಿಸುವಂತೆ ಆದೇಶ ನೀಡಿತ್ತು. ಈ ತೀರ್ಪು ಪ್ರಕಟಿಸಿದ ಪೀಠ ಜನವರಿ 8, 2024ರಂದು ಮಹಾರಾಷ್ಟ್ರವು ಪ್ರಕರಣದಲ್ಲಿ ಕ್ಷಮಾಧಾನ ನೀಡಲು ಅರ್ಹತೆ ಹೊಂದಿದೆ ಹೊರತು ಗುಜರಾತ್ ಸರ್ಕಾರವಲ್ಲ ಎಂದು ಹೇಳಿದೆ.

ಜನವರಿ 8 ರಂದು, ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳಿಗೆ ನೀಡಲಾದ ಕ್ಷಮಾಧಾನವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ ಮತ್ತು ಎರಡು ವಾರಗಳಲ್ಲಿ ಅಪರಾಧಿಗಳಿಗೆ ಶರಣಾಗುವಂತೆ ನಿರ್ದೇಶನ ನೀಡಿತ್ತು. ಗುಜರಾತ್ ಸರ್ಕಾರವು ಖೈದಿಗಳೊಂದಿಗೆ ರಾಜಿ ಮಾಡಿಕೊಂಡಿದೆ ಮತ್ತು ಅವಧಿ ಪೂರ್ವ ಬಿಡುಗಡೆಗೆ ಆದೇಶ ನೀಡುವ ತನ್ನ ಅಧಿಕಾರವನ್ನು ತಪ್ಪಾಗಿ ಚಲಾಯಿಸಿದೆ ಎಂದು ಕೋರ್ಟ್‌ ಹೇಳಿತ್ತು.

2002ರಲ್ಲಿ ಗೋಧ್ರಾದಲ್ಲಿ ರೈಲು ಸುಟ್ಟ ಘಟನೆಯ ನಂತರ ನಡೆದಿದ್ದ ಕೋಮು ಗಲಭೆ ವೇಳೆ ಐದು ತಿಂಗಳ ಗರ್ಭಿಣಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಆದರೆ ಆಕೆಯ ಮೂರು ವರ್ಷದ ಮಗಳು ಮತ್ತು ಇತರ ಆರು ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು 11 ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ಸುಪ್ರೀಂಕೋರ್ಟ್ ಈ ಮೊದಲು ರದ್ದುಗೊಳಿಸಿತ್ತು. 2022ರ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ ಎಲ್ಲಾ ಅಪರಾಧಿಗಳನ್ನು ಎರಡು ವಾರಗಳಲ್ಲಿ ಶರಣಾಗುವಂತೆ ಹೇಳಿತ್ತು. ಶರಣಾದ ಆರೋಪಿಗಳಲ್ಲಿ ಇಬ್ಬರು ಕೆಲವೇ ದಿನಗಳಲ್ಲಿ ಪೆರೋಲ್‌ ಮೇಲೆ ಹೊರಗೆ ಬಂದಿದ್ದರು.

ಇದನ್ನು ಓದಿ: ಮೋದಿ ಚಿತ್ರವುಳ್ಳ ಚೀಲಗಳ ಖರೀದಿಗೆ ₹15 ಕೋಟಿ ವ್ಯಯಿಸಿದ ಕೇಂದ್ರ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...