Homeಮುಖಪುಟಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಇಬ್ಬರು ಬಿಜೆಪಿ ನಾಯಕರ ಮೇಲೆ ಜನರಿಂದ ದಾಳಿ

ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಇಬ್ಬರು ಬಿಜೆಪಿ ನಾಯಕರ ಮೇಲೆ ಜನರಿಂದ ದಾಳಿ

- Advertisement -
- Advertisement -

ಬಿಜೆಪಿ ಸಂಸದ ಖಗೇನ್ ಮುರ್ಮು ಮತ್ತು ಶಾಸಕ ಶಂಕರ್ ಘೋಷ್ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾಗ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ನಾಗರಕಟದಲ್ಲಿ ಸೋಮವಾರ ನಡೆದಿದೆ. ಹಲ್ಲೆ ನಂತರ ಉದ್ವಿಗ್ನತೆ ಉಂಟಾಗಿದ್ದು, ಇಬ್ಬರೂ ನಾಯಕರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ನಂತರ ಪೊಲೀಸರು ಸ್ಥಳಕ್ಕೆ ತಲುಪಿದ್ದು, ಘಟನೆಯ ವೀಡಿಯೊಗಳಲ್ಲಿ ಬಿಜೆಪಿ ನಾಯಕರ ಕಾರಿನ ಗಾಜು ಒಡೆದು ಹೋಗಿದ್ದು, ಸಂಸದ ಖಗೇನ್ ಮುರ್ಮು ಮೂಗಿನಿಂದ ರಕ್ತ ಹರಿಯುತ್ತಿರುವುದನ್ನು ಕಾಣಬಹುದು. ಶಾಸಕ ಶಂಕರ್ ಘೋಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ಬಟ್ಟೆಗಳು ಹರಿದು ಹೋಗಿವೆ.

ಈ ದಾಳಿ ರಾಜಕೀಯ ಕೋಲಾಹಲಕ್ಕೆ ಕಾರಣವಾಯಿತು, ಬಿಜೆಪಿ ನಾಯಕರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪರಿಹಾರ ಕಾರ್ಯಕ್ಕೆ ಅಡ್ಡಿಪಡಿಸಲು ಹಿಂಸಾಚಾರವನ್ನು ಸಂಘಟಿಸುತ್ತಿದೆ ಎಂದು ಆರೋಪಿಸಿದರು.

ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತರಾಟೆಗೆ ತೆಗೆದುಕೊಂಡರು, ಉತ್ತರ ಬಂಗಾಳದಲ್ಲಿ ಪ್ರವಾಹ ಮತ್ತು ಭೂಕುಸಿತದ ನಬಳಿಕ ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರು ಕೋಪಗೊಂಡಿದ್ದು, ಮಮತಾ ಬ್ಯಾನರ್ಜಿ ಭಯಭೀತರಾಗಿದ್ದಾರೆ ಎಂದು ಹೇಳಿದರು.

“ಉತ್ತರ ಬಂಗಾಳ ಪ್ರವಾಹದಲ್ಲಿ ತತ್ತರಿಸುತ್ತಿರುವಾಗ, ಪಶ್ಚಿಮ ಬಂಗಾಳದ ಜನರು ಸೆಲೆಬ್ರಿಟಿಗಳೊಂದಿಗೆ ಕಾರ್ನೀವಲ್‌ನಲ್ಲಿ ನೃತ್ಯ ಮಾಡಿದ ಅಮಾನವೀಯ ಕೃತ್ಯವನ್ನು ಮಮತಾ ಬ್ಯಾನರ್ಜಿ ಸಾಕಷ್ಟು ತಡವಾಗಿ ಅರಿತುಕೊಂಡಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿ ಶಾಸಕರು ಮತ್ತು ಸಂಸದರು ಸಂತ್ರಸ್ತ ಜನರಿಗೆ ಸಹಾಯ ಮಾಡಲು ಸ್ಥಳದಲ್ಲಿದ್ದರು. ಆದ್ದರಿಂದ, ಅವರು ಈಗ ಪ್ಯಾನಿಕ್ ಬಟನ್ ಒತ್ತಿ ‘ವಿಶೇಷ ಸಮುದಾಯ’ಕ್ಕೆ ಸೇರಿದ ತಮ್ಮ ಗೂಂಡಾಗಳನ್ನು ಬಿಡುಗಡೆ ಮಾಡಿದ್ದಾರೆ. ಬಿಜೆಪಿ ಸಂಸದರು ಮತ್ತು ಶಾಸಕರು ಪರಿಹಾರ ಕಾರ್ಯಗಳಲ್ಲಿ ತೊಡಗುವುದನ್ನು ತಡೆಯಲು ಅವರ ಮೇಲೆ ದಾಳಿ ಮಾಡಲು ಅವರನ್ನು ಪ್ರಚೋದಿಸಿದ್ದಾರೆ” ಎಂದು ಅಧಿಕಾರಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ತೃಣಮೂಲ ಕಾಂಗ್ರೆಸ್ ಇನ್ನೂ ಆರೋಪಗಳಿಗೆ ಪ್ರತಿಕ್ರಿಯಿಸಿಲ್ಲ. ಪಶ್ಚಿಮ ಬಂಗಾಳದ ಕೆಲವೆಡೆ ಕಳೆದ 48 ಗಂಟೆಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಡಾರ್ಜಿಲಿಂಗ್, ಕಾಲಿಂಪಾಂಗ್, ಜಲ್ಪೈಗುರಿ, ಅಲಿಪುರ್ದೂರ್ ಮತ್ತು ಕೂಚ್ ಬೆಹಾರ್ ಜಿಲ್ಲೆಗಳಲ್ಲಿ ತೀವ್ರ ಪ್ರವಾಹ ಉಂಟಾಗಿದೆ. ಡಾರ್ಜಿಲಿಂಗ್‌ನ ಡೂರ್ಸ್‌ನ ನಾಗರಕಟ, ಮಿರಿಕ್‌ನಲ್ಲಿ ಭೂಕುಸಿತದಿಂದ ಮನೆಗಳು ಕೊಚ್ಚಿಹೋಗಿವೆ. ಈ ವಿನಾಶವು ಇಲ್ಲಿಯವರೆಗೆ 24 ಜನರನ್ನು ಬಲಿ ತೆಗೆದುಕೊಂಡಿದೆ.

ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಪ್ರಯತ್ನ! ‘ಸನಾತನ ಧರ್ಮದ ಅವಮಾನ ಸಹಿಸುವುದಿಲ್ಲ’ ಎಂದು ಕಿರುಚಾಡಿದ ವಕೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...