ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಇಬ್ಬರು ಬಿಜೆಪಿ ನಾಯಕರ ಮೇಲೆ ಜನರಿಂದ ದಾಳಿ

ಬಿಜೆಪಿ ಸಂಸದ ಖಗೇನ್ ಮುರ್ಮು ಮತ್ತು ಶಾಸಕ ಶಂಕರ್ ಘೋಷ್ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾಗ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ನಾಗರಕಟದಲ್ಲಿ ಸೋಮವಾರ ನಡೆದಿದೆ. ಹಲ್ಲೆ ನಂತರ ಉದ್ವಿಗ್ನತೆ ಉಂಟಾಗಿದ್ದು, ಇಬ್ಬರೂ ನಾಯಕರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ನಂತರ ಪೊಲೀಸರು ಸ್ಥಳಕ್ಕೆ ತಲುಪಿದ್ದು, ಘಟನೆಯ ವೀಡಿಯೊಗಳಲ್ಲಿ ಬಿಜೆಪಿ ನಾಯಕರ ಕಾರಿನ ಗಾಜು ಒಡೆದು ಹೋಗಿದ್ದು, ಸಂಸದ ಖಗೇನ್ ಮುರ್ಮು ಮೂಗಿನಿಂದ ರಕ್ತ ಹರಿಯುತ್ತಿರುವುದನ್ನು … Continue reading ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಇಬ್ಬರು ಬಿಜೆಪಿ ನಾಯಕರ ಮೇಲೆ ಜನರಿಂದ ದಾಳಿ