ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಪ್ರತಿಭಟನೆ ವೇಳೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಬುಧವಾರ (ಡಿ.18) ಸಾವನ್ನಪ್ಪಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಪೊಲೀಸ್ ದೌರ್ಜನ್ಯದಿಂದ ನಮ್ಮ ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ, ಅಧಿಕಾರಿಗಳು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.
“ಬಿಜೆಪಿ ಆಡಳಿತದ ಅಸ್ಸಾಂ ಮತ್ತು ಉತ್ತರ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಮತ್ತೆ ಕೊಲೆ ಮಾಡಲಾಗಿದೆ. ಪೊಲೀಸ್ ದೌರ್ಜನ್ಯದಿಂದ ನಮ್ಮ ಪಕ್ಷದ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
भाजपा शासित असम और उत्तरप्रदेश में लोकतंत्र और संविधान की फिर से हत्या हुई है।
देश भर में कांग्रेस पार्टी बाबासाहेब और संविधान के समर्थन में सत्याग्रह कर रही है। इस दौरान अत्यधिक पुलिस बल के कारण गुवाहाटी में मृदुल इस्लाम और लखनऊ में प्रभात पांडे, हमारे कांग्रेस कार्यकर्ताओं की… pic.twitter.com/gbqpEJ09s3
— Rahul Gandhi (@RahulGandhi) December 18, 2024
ನಿರಂಕುಶ ಆಡಳಿತ ಪ್ರತಿಭಟನೆಗಳನ್ನು ಹತ್ತಿಕ್ಕಲು ಕ್ರೂರ ಪೊಲೀಸ್ ಬಲವನ್ನು ಬಳಸಿರುವುದು ನಮ್ಮ ದೇಶಭಕ್ತ ಕಾರ್ಯಕರ್ತರ ದುರಂತ ಸಾವಿಗೆ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
Deeply anguished by the loss of lives of our Congress workers — Shri Prabhat Pandey in Lucknow and Adv. Mridul Islam in Guwahati during the nationwide Congress protest today against the anti-people policies of the Modi Govt.
A despotic regime hell bent to stifle protests used… pic.twitter.com/kedSXcmTtW
— Mallikarjun Kharge (@kharge) December 18, 2024
ಅಸ್ಸಾಂನ ಗುವಾಹಟಿಯಲ್ಲಿ ಸಾವನ್ನಪ್ಪಿದ ಕಾಂಗ್ರೆಸ್ ಸದಸ್ಯನನ್ನು ಮೃದುಲ್ ಇಸ್ಲಾಂ ಮತ್ತು ಉತ್ತರ ಪ್ರದೇಶದ ಲಕ್ನೋದಲ್ಲಿ ಸಾವನ್ನಪ್ಪಿದವರನ್ನು ಪ್ರಭಾತ್ ಪಾಂಡೆ ಎಂದು ಗುರುತಿಸಲಾಗಿದೆ.
ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿಗೆ ಪರ ಒಲವು ತೋರುತ್ತಿದೆ ಎಂದು ಆರೋಪಿಸಿ ಮತ್ತು ಮಣಿಪುರದ ಜನಾಂಗೀಯ ಹಿಂಸಾಚಾರದ ವಿರುದ್ಧ ಅಸ್ಸಾಂ ಗುವಾಹಟಿಯಲ್ಲಿ ಬುಧವಾರ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ರಾಜ್ಯಪಾಲರ ಅಧಿಕೃತ ನಿವಾಸವಾದ ಗುವಾಹಟಿ ರಾಜಭವನದ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ಸುಮಾರು 1,000 ಪ್ರತಿಭಟನಾಕಾರರಲ್ಲಿ ಮೃದುಲ್ ಇಸ್ಲಾಂ ಕೂಡ ಇದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದು, ಇದು ಪಕ್ಷದ ಕಾರ್ಯಕರ್ತನ ಸಾವಿಗೆ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.
“ಒಂದಲ್ಲ, ಎರಡಲ್ಲ ಮೂರು ಅಶ್ರುವಾಯು ಸೆಲ್‌ಗಳನ್ನು ಒಂದೇ ಸಮನೆ ಪೊಲೀಸರು ಪ್ರತಿಭಟನಾನಿರತ ಜನರ ಮುಖದತ್ತ ಎಸೆದಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾಹ್” ಹೇಳಿದ್ದಾರೆ.
ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, “ನಾವು ಈ ಮೊದಲು ಅಶ್ರುವಾಯು ಸೆಲ್‌ಗಳನ್ನು ನೋಡಿದ್ದೇವೆ. ಆದರೆ, ಅದನ್ನು ಜನರ ಮುಖದತ್ತ ಎಸೆದಿರುವುದು ಕಂಡಿಲ್ಲ. ನಾವು ಹೆದರಿಕೊಂಡಿಲ್ಲ. ಮೃದುಲ್ ಇಸ್ಲಾಂ ಅವರ ಸಾವು ವ್ಯರ್ಥವಾಗಲು ಬಿಡುವುದಿಲ್ಲ” ಎಂದು ಭೂಪೇನ್ ಬೋರಾಹ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾಕಾರರ ಗುಂಪನ್ನು ಚದುರಿಸಲು ಪೊಲೀಸರು ಮೂರು ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದಾರೆ ಎಂದು ಗುವಾಹಟಿ ಪೊಲೀಸ್ ಆಯುಕ್ತ ದಿಗಂತ ಬಾರಾಹ್ ಖಚಿತಪಡಿಸಿದ್ದಾರೆ. ಇಸ್ಲಾಂ ಸಾವಿನ ಕಾರಣವನ್ನು ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆದರೆ, ಮ್ಯಾಜಿಸ್ಟ್ರಿಯಲ್ ವಿಚಾರಣೆಯಲ್ಲಿ ಅವರ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಹೇಳಿದ್ದಾರೆ.
ಪ್ರತಿಭಟನೆಗೆ ಕಾಂಗ್ರೆಸ್ ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ. ಆದರೆ, ಪಕ್ಷವು ಈ ಆರೋಪವನ್ನು ನಿರಾಕರಿಸಿದೆ.
ಲಕ್ನೋದಲ್ಲಿ, ಗೋರಖ್‌ಪುರ ಜಿಲ್ಲೆಯ 28 ವರ್ಷದ ಕಾಂಗ್ರೆಸ್ ಕಾರ್ಯಕರ್ತ ಪ್ರಭಾತ್ ಪಾಂಡೆ ಕೂಡ ಬುಧವಾರ ಪ್ರತಿಭಟನೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಹಣದುಬ್ಬರ, ನಿರುದ್ಯೋಗ ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳ ವಿರುದ್ಧ ಪ್ರತಿಭಟಿನೆ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ವಿಧಾನಸಭೆಯತ್ತ ಮೆರವಣಿಗೆ ನಡೆಸುತ್ತಿದ್ದರು. ವಿಧಾನಸಭೆಯ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಘರ್ಷಣೆ ಉಂಟಾಗಿದೆ.
ಪ್ರತಿಭಟನೆಯ ವೇಳೆ ಪೊಲೀಸ್ ದೌರ್ಜನ್ಯದಿಂದ ಪಾಂಡೆ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಆರೋಪಿಸಿದ್ದು, ರಾಜ್ಯ ಸರ್ಕಾರ ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಮೃತ ಪ್ರಭಾತ್ ಪಾಂಡೆ ಅವರ ಚಿಕ್ಕಪ್ಪ ಲಕ್ನೋದ ಹುಸೈನ್‌ಗಂಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103 ರ ಅಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ.
ಪಾಂಡೆ ಅವರು ನಗರದ ಸಿವಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವೈದ್ಯರ ಪ್ರಕಾರ, ಅವರ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡು ಬಂದಿಲ್ಲ. ವಿಡಿಯೋ ಚಿತ್ರೀಕರಣದೊಂದಿಗೆ ಪಾಂಡೆ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅದನ್ನು ಅನುಸರಿಸಿ ತನಿಖೆ ಕೈಗೊಳ್ಳುತ್ತೇವೆ ಎಂದು ಲಕ್ನೋ ನಗರದ ಉಪ ಪೊಲೀಸ್ ಆಯುಕ್ತೆ ರವೀನಾ ತ್ಯಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : ಅಮಿತ್ ಶಾ ಭಾಷಣದ ವಿಡಿಯೋ ಡಿಲಿಟ್ ಮಾಡುವಂತೆ ಎಕ್ಸ್‌ಗೆ ಸೂಚಿಸಿದ ಕೇಂದ್ರ ಸರ್ಕಾರ : ಕಾಂಗ್ರೆಸ್ ಆರೋಪ


