Homeಮುಖಪುಟಪ್ರತಿಭಟನೆ ವೇಳೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಸಾವು : ಪೊಲೀಸ್ ದೌರ್ಜನ್ಯ ಆರೋಪ

ಪ್ರತಿಭಟನೆ ವೇಳೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಸಾವು : ಪೊಲೀಸ್ ದೌರ್ಜನ್ಯ ಆರೋಪ

- Advertisement -
- Advertisement -

ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಪ್ರತಿಭಟನೆ ವೇಳೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಬುಧವಾರ (ಡಿ.18) ಸಾವನ್ನಪ್ಪಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಪೊಲೀಸ್ ದೌರ್ಜನ್ಯದಿಂದ ನಮ್ಮ ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ, ಅಧಿಕಾರಿಗಳು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

“ಬಿಜೆಪಿ ಆಡಳಿತದ ಅಸ್ಸಾಂ ಮತ್ತು ಉತ್ತರ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಮತ್ತೆ ಕೊಲೆ ಮಾಡಲಾಗಿದೆ. ಪೊಲೀಸ್ ದೌರ್ಜನ್ಯದಿಂದ ನಮ್ಮ ಪಕ್ಷದ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ನಿರಂಕುಶ ಆಡಳಿತ ಪ್ರತಿಭಟನೆಗಳನ್ನು ಹತ್ತಿಕ್ಕಲು ಕ್ರೂರ ಪೊಲೀಸ್ ಬಲವನ್ನು ಬಳಸಿರುವುದು ನಮ್ಮ ದೇಶಭಕ್ತ ಕಾರ್ಯಕರ್ತರ ದುರಂತ ಸಾವಿಗೆ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಅಸ್ಸಾಂನ ಗುವಾಹಟಿಯಲ್ಲಿ ಸಾವನ್ನಪ್ಪಿದ ಕಾಂಗ್ರೆಸ್ ಸದಸ್ಯನನ್ನು ಮೃದುಲ್ ಇಸ್ಲಾಂ ಮತ್ತು ಉತ್ತರ ಪ್ರದೇಶದ ಲಕ್ನೋದಲ್ಲಿ ಸಾವನ್ನಪ್ಪಿದವರನ್ನು ಪ್ರಭಾತ್ ಪಾಂಡೆ ಎಂದು ಗುರುತಿಸಲಾಗಿದೆ.

ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿಗೆ ಪರ ಒಲವು ತೋರುತ್ತಿದೆ ಎಂದು ಆರೋಪಿಸಿ ಮತ್ತು ಮಣಿಪುರದ ಜನಾಂಗೀಯ ಹಿಂಸಾಚಾರದ ವಿರುದ್ಧ ಅಸ್ಸಾಂ ಗುವಾಹಟಿಯಲ್ಲಿ ಬುಧವಾರ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ರಾಜ್ಯಪಾಲರ ಅಧಿಕೃತ ನಿವಾಸವಾದ ಗುವಾಹಟಿ ರಾಜಭವನದ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ಸುಮಾರು 1,000 ಪ್ರತಿಭಟನಾಕಾರರಲ್ಲಿ ಮೃದುಲ್ ಇಸ್ಲಾಂ ಕೂಡ ಇದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದು, ಇದು ಪಕ್ಷದ ಕಾರ್ಯಕರ್ತನ ಸಾವಿಗೆ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.

“ಒಂದಲ್ಲ, ಎರಡಲ್ಲ ಮೂರು ಅಶ್ರುವಾಯು ಸೆಲ್‌ಗಳನ್ನು ಒಂದೇ ಸಮನೆ ಪೊಲೀಸರು ಪ್ರತಿಭಟನಾನಿರತ ಜನರ ಮುಖದತ್ತ ಎಸೆದಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾಹ್” ಹೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, “ನಾವು ಈ ಮೊದಲು ಅಶ್ರುವಾಯು ಸೆಲ್‌ಗಳನ್ನು ನೋಡಿದ್ದೇವೆ. ಆದರೆ, ಅದನ್ನು ಜನರ ಮುಖದತ್ತ ಎಸೆದಿರುವುದು ಕಂಡಿಲ್ಲ. ನಾವು ಹೆದರಿಕೊಂಡಿಲ್ಲ. ಮೃದುಲ್ ಇಸ್ಲಾಂ ಅವರ ಸಾವು ವ್ಯರ್ಥವಾಗಲು ಬಿಡುವುದಿಲ್ಲ” ಎಂದು ಭೂಪೇನ್ ಬೋರಾಹ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾಕಾರರ ಗುಂಪನ್ನು ಚದುರಿಸಲು ಪೊಲೀಸರು ಮೂರು ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದಾರೆ ಎಂದು ಗುವಾಹಟಿ ಪೊಲೀಸ್ ಆಯುಕ್ತ ದಿಗಂತ ಬಾರಾಹ್ ಖಚಿತಪಡಿಸಿದ್ದಾರೆ. ಇಸ್ಲಾಂ ಸಾವಿನ ಕಾರಣವನ್ನು ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆದರೆ, ಮ್ಯಾಜಿಸ್ಟ್ರಿಯಲ್ ವಿಚಾರಣೆಯಲ್ಲಿ ಅವರ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಹೇಳಿದ್ದಾರೆ.

ಪ್ರತಿಭಟನೆಗೆ ಕಾಂಗ್ರೆಸ್ ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ. ಆದರೆ, ಪಕ್ಷವು ಈ ಆರೋಪವನ್ನು ನಿರಾಕರಿಸಿದೆ.

ಲಕ್ನೋದಲ್ಲಿ, ಗೋರಖ್‌ಪುರ ಜಿಲ್ಲೆಯ 28 ವರ್ಷದ ಕಾಂಗ್ರೆಸ್ ಕಾರ್ಯಕರ್ತ ಪ್ರಭಾತ್ ಪಾಂಡೆ ಕೂಡ ಬುಧವಾರ ಪ್ರತಿಭಟನೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಹಣದುಬ್ಬರ, ನಿರುದ್ಯೋಗ ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳ ವಿರುದ್ಧ ಪ್ರತಿಭಟಿನೆ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ವಿಧಾನಸಭೆಯತ್ತ ಮೆರವಣಿಗೆ ನಡೆಸುತ್ತಿದ್ದರು. ವಿಧಾನಸಭೆಯ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಘರ್ಷಣೆ ಉಂಟಾಗಿದೆ.

ಪ್ರತಿಭಟನೆಯ ವೇಳೆ ಪೊಲೀಸ್ ದೌರ್ಜನ್ಯದಿಂದ ಪಾಂಡೆ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಆರೋಪಿಸಿದ್ದು, ರಾಜ್ಯ ಸರ್ಕಾರ ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮೃತ ಪ್ರಭಾತ್ ಪಾಂಡೆ ಅವರ ಚಿಕ್ಕಪ್ಪ ಲಕ್ನೋದ ಹುಸೈನ್‌ಗಂಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103 ರ ಅಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ.

ಪಾಂಡೆ ಅವರು ನಗರದ ಸಿವಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವೈದ್ಯರ ಪ್ರಕಾರ, ಅವರ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡು ಬಂದಿಲ್ಲ. ವಿಡಿಯೋ ಚಿತ್ರೀಕರಣದೊಂದಿಗೆ ಪಾಂಡೆ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅದನ್ನು ಅನುಸರಿಸಿ ತನಿಖೆ ಕೈಗೊಳ್ಳುತ್ತೇವೆ ಎಂದು ಲಕ್ನೋ ನಗರದ ಉಪ ಪೊಲೀಸ್ ಆಯುಕ್ತೆ ರವೀನಾ ತ್ಯಾಗಿ ತಿಳಿಸಿದ್ದಾರೆ.

ಇದನ್ನೂ ಓದಿ : ಅಮಿತ್ ಶಾ ಭಾಷಣದ ವಿಡಿಯೋ ಡಿಲಿಟ್ ಮಾಡುವಂತೆ ಎಕ್ಸ್‌ಗೆ ಸೂಚಿಸಿದ ಕೇಂದ್ರ ಸರ್ಕಾರ : ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...