Homeಮುಖಪುಟಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

- Advertisement -
- Advertisement -

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ.

ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು. ಆರೋಪಿಗಳ ವಿರುದ್ಧ ಪುಣೆಯ ಅಂಬೇಗಾಂವ್ ಪೊಲೀಸ್ ಠಾಣೆಯಲ್ಲಿ ಭಾನುವಾರ (ಮಾ.8) ಎಫ್‌ಐಆರ್ ದಾಖಲಾಗಿತ್ತು.

“ನ್ಯಾಯಾಲಯ ಇಬ್ಬರನ್ನೂ ಮಾರ್ಚ್ 10ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳನ್ನು ಬಂಧಿಸಬೇಕಾಗಿದೆ” ಎಂದು ಅಂಬೇಗಾಂವ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಶರದ್ ಜೈನ್ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಸ್ವಯಂ ಘೋಷಿತ ಗೋರಕ್ಷಕರ ಗುಂಪೊಂದು ಮಾರ್ಚ್ 6ರಂದು ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ನೊಂದಿಗೆ ಚಾಲಕನನ್ನು ಅಂಬೇಗಾಂವ್ ಪೊಲೀಸ್ ಠಾಣೆಗೆ ಕರೆತಂದಿತ್ತು.

ಪರಿಶೀಲನೆಯ ನಂತರ, ಪೊಲೀಸರು ಟ್ರಕ್ ಚಾಲಕನ ವಿರುದ್ಧ ಎಮ್ಮೆಗಳನ್ನು ಹಿಂಸಾತ್ಮಕವಾಗಿ ಸಾಗಿಸಿದ ಆರೋಪದ ಮೇಲೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದರು. ಜೊತೆಗೆ, ಟ್ರಕ್ ಚಾಲಕ ಸಲ್ಲಿಸಿದ್ದ ದೂರಿನ ಮೇರೆಗೆ ಸ್ವಘೋಷಿತ ಗೋರಕ್ಷಕರ ವಿರುದ್ದ ಟ್ರಕ್ ಚಾಲಕನಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದರು.

ಸ್ವಘೋಷಿತ ಗೋರಕ್ಷಕರು ಟ್ರಕ್ ಚಾಲಕನ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾ, ಆತನನ್ನು ಥಳಿಸಿ, ಸೆಗಣಿ ತಿನ್ನಿಸಿದ ವಿಡಿಯೋವನ್ನು ಭಾನುವಾರ ನೋಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಆದರೆ, ಟ್ರಕ್ ಚಾಲಕ ತನ್ನ ದೂರಿನಲ್ಲಿ ಈ ಬಗ್ಗೆ ಉಲ್ಲೇಖಿಸಿಲ್ಲ ಎಂದು ಹೇಳಿದ್ದಾರೆ.

ಆದರೂ, ವಿಡಿಯೋ ಪರಿಗಣಿಸಿ ಸ್ವಘೋಷಿತ ಗೋರಕ್ಷಕರ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 196 (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 299 (ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು), 352 (ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಅವಮಾನಿಸುವುದು), 115 (2) (ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು), 3(5) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು indianexpress.com ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...