Homeದಲಿತ್ ಫೈಲ್ಸ್ತಮಿಳುನಾಡು: ದಲಿತ ಯುವಕರ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ, ದರೋಡೆ; 6 ಜನರ ಬಂಧನ

ತಮಿಳುನಾಡು: ದಲಿತ ಯುವಕರ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ, ದರೋಡೆ; 6 ಜನರ ಬಂಧನ

- Advertisement -
- Advertisement -

ಇಬ್ಬರು ದಲಿತ ಯುವಕರ ಮೇಲೆ ಹಲ್ಲೆ ನಡೆಸಿ, ದರೋಡೆ ಮಾಡಿದ್ದಲ್ಲದೇ ಅವರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಆರು ಜನರನ್ನು ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ಸಂಜೆ ಮಣಿಮೂರ್ತೇಶ್ವರದಲ್ಲಿರುವ ಮನೋಜ್ ಮತ್ತು ಆತನ ಸ್ನೇಹಿತ ಮರಿಯಪ್ಪನ್ ಸ್ನಾನ ಮಾಡಲು ಹೊಂಡಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಸ್ವಾನ ಮುಗಿಸಿ ಹಿಂದಿರುಗುವಾಗ ಕುಡಿದ ಮತ್ತಿನಲ್ಲಿದ್ದ ಒಂದು ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ.

ಕೃತ್ಯ ನಡೆಸಿದ ಗುಂಪು ಹಲ್ಲೆಗೂ ಮುನ್ನ ಆ ಯುವಕರನ್ನು ತಡೆದು ಯಾವ ಊರು ಮತ್ತು ಯಾವ ಜಾತಿ ಎಂದು ಕೇಳಿದ್ದಾರೆ. ಆಗ ಅವರು ದಲಿತರು ಎಂದು ತಿಳಿದ ತಂಡ ಇಬ್ಬರ ಮೇಲೂ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಿದೆ ಎಂದು ವರದಿಯಾಗಿದೆ.

ಆನಂತರ ಗ್ಯಾಂಗ್ ಅವರನ್ನು ರಾತ್ರಿಯವರೆಗೂ ಸ್ಥಳದಲ್ಲಿಯೇ ಕಟ್ಟಿಹಾಕಿದ್ದರು ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

”ನಮ್ಮ ಫೋನ್‌ಗಳು, ಎಟಿಎಂ ಕಾರ್ಡ್‌ಗಳನ್ನು ತೆಗೆದುಕೊಂಡು ಹೋಗಿ 5,000 ರೂ. ತೆಗೆದುಕೊಂಡಿದ್ದಾರೆ. ಈ ವೇಳೆ ನಾವು ತಪ್ಪಿಸಿಕೊಂಡು ಹತ್ತಿರದ ಸಂಬಂಧಿಕರ ಮನೆಗೆ ತಲುಪಿದೆವು. ಅಲ್ಲಿಂದ ನಮ್ಮ ಪೋಷಕರಿಗೆ ಕರೆ ಮಾಡಿದೆವು” ಎಂದು ಯುವಕರಿಬ್ಬರು ಪೊಲೀಸರಿಗೆ ತಿಳಿಸಿದ್ದಾರೆ.

ಆನಂತರ ಹಲ್ಯೆಗೊಳಗಾದ ದಲಿತ ಯುವಕರನ್ನು ತಿರುನೆಲ್ವೇಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬಂಧಿತ ಆರು ಜನರ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 302 ಮತ್ತು 397 ರ ಅಡಿಯಲ್ಲಿ ಎಫ್‌ಐಆರ್ ಮತ್ತು SC/ST ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯ 3 (1)(r), 3 (1)(s), 3 (2)(va)  ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆಯನ್ನೂ ಆರಂಭಿಸಲಾಗಿದೆ.

ಇದನ್ನೂ ಓದಿ: ತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...