Homeಮುಖಪುಟಒಳಚರಂಡಿ ಸ್ವಚ್ಛಗೊಳಿಸುವಾಗ ಇಬ್ಬರು ದಲಿತ ಕಾರ್ಮಿಕರು ಉಸಿರುಗಟ್ಟಿ ಸಾವು

ಒಳಚರಂಡಿ ಸ್ವಚ್ಛಗೊಳಿಸುವಾಗ ಇಬ್ಬರು ದಲಿತ ಕಾರ್ಮಿಕರು ಉಸಿರುಗಟ್ಟಿ ಸಾವು

- Advertisement -
- Advertisement -

ತಮಿಳುನಾಡಿನ ಅವದಿಯಲ್ಲಿ ಬಟ್ಟೆ ಕಾರ್ಖಾನೆಯ ಸಿಬ್ಬಂದಿಗಳ ಕ್ವಾರ್ಟರ್ಸ್‌ನಲ್ಲಿ ಒಳಚರಂಡಿಯನ್ನು ಸ್ವಚ್ಛಗೊಳಿಸುತ್ತಿದ್ದಾಗ ಇಬ್ಬರು ದಲಿತ ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಕೆ ಮೋಸೆಸ್ (40) ಮತ್ತು ಸಿ ದೇವನ್ (50) ಎಂಬವರು ಮೃತರು. ಖಾಸಗಿ ಗುತ್ತಿಗೆದಾರರು ಕ್ವಾರ್ಟರ್ಸ್‌ನಲ್ಲಿನ ಒಳಚರಂಡಿಯನ್ನು ಸ್ವಚ್ಛಗೊಳಿಸಲು ಅವರನ್ನು ನೇಮಿಸಿದ್ದರು. ಅವರಿಗೆ ಯಾವುದೇ ಸುರಕ್ಷತಾ ಸಾಧನಗಳನ್ನು ಒದಗಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಒಳಚರಂಡಿಯನ್ನು ಪ್ರವೇಶಿಸಿದ ಕೂಡಲೇ ವಿಷಾನಿಲ ಸೇವಿಸಿರುವ ಮೋಸಸ್ ಪ್ರಜ್ಞೆ ಕಳೆದುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಕೆಳಗಿಳಿದಿರುವ ದೇವನ್ ಕೂಡಾ ವಿಷಾನಿಲವನ್ನು ಸೇವಿಸಿ ಒಳಚರಂಡಿಯಲ್ಲಿ ಪ್ರಜ್ಞಾಹೀನರಾಗಿದ್ದಾರೆ. ಅಲ್ಲಿದ್ದ ಇತರ ಕಾರ್ಮಿಕರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಇಬ್ಬರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಇಬ್ಬರು ಕೂಡ ಈ  ವೇಳೆ ಮೃತಪಟ್ಟಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಗುತ್ತಿಗೆದಾರ ಹಾಗೂ ಮೇಲ್ವಿಚಾರಕನನ್ನು ಬಂಧಿಸಲಾಗಿದೆ. ನರಹತ್ಯೆಯ ಆರೋಪ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಮೇಲೆ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

1993ರಿಂದ ಇಲ್ಲಿಯವರೆಗೆ ಭಾರತದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ಒಟ್ಟು 1,035 ಮಂದಿ ಮೃತಪಟ್ಟಿದ್ದಾರೆ ಎಂದು ಈ ವರ್ಷದ ಮಾರ್ಚ್ ತಿಂಗಳಲ್ಲಿ ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು.

ಆದರೆ ನೈರ್ಮಲ್ಯ ಕಾರ್ಮಿಕರಿಗೆ ಸುರಕ್ಷತಾ ಸಾಧನಗಳನ್ನು ಒದಗಿಸದ ಗುತ್ತಿಗೆದಾರರ ವಿರುದ್ಧ ಮ್ಯಾನುಯಲ್ ಸ್ಕಾವೆಂಜಿಂಗ್ ಕಾಯ್ದೆಯಡಿ ದಾಖಲಾಗಿರುವ 616 ಪ್ರಕರಣಗಳಲ್ಲಿ ಕೇವಲ ಒಂದು ಪ್ರಕರಣದಲ್ಲಿ ಮಾತ್ರ ಶಿಕ್ಷೆಯಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...