Homeಮುಖಪುಟಲೈಂಗಿಕ ದೌರ್ಜನ್ಯದ ಆರೋಪಿ ಬ್ರಿಜ್‌ಭೂಷಣ್‌ಗೆ ಎರಡು ದಿನಗಳ ಮಧ್ಯಂತರ ಜಾಮೀನು

ಲೈಂಗಿಕ ದೌರ್ಜನ್ಯದ ಆರೋಪಿ ಬ್ರಿಜ್‌ಭೂಷಣ್‌ಗೆ ಎರಡು ದಿನಗಳ ಮಧ್ಯಂತರ ಜಾಮೀನು

- Advertisement -
- Advertisement -

ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಎರಡು ದಿನಗಳ ಮಧ್ಯಂತರ ಜಾಮೀನು ನೀಡಿದೆ ಎಂದು ಪಿಟಿಐ ವರದಿ ಮಾಡಿದೆ.

ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಆರು ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ದೆಹಲಿ ಪೊಲೀಸರು ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು.

ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರು ಸಿಂಗ್ ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ.

ಸಿಂಗ್ ಜೊತೆಗೆ, ಫೆಡರೇಶನ್‌ನ ಅಮಾನತುಗೊಂಡ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್‌ಗೆ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಸಿಂಗ್ ಅವರನ್ನು ಬಂಧಿಸುವಂತೆ ಏಪ್ರಿಲ್‌ನಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಜೂನ್ 15ರಂದು, ದೆಹಲಿ ಪೊಲೀಸರು ಬ್ರಿಜ್‌ಭೂಷಣ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದರು. ಆದಾಗ್ಯೂ, ಪೊಲೀಸರು ಅಪ್ರಾಪ್ತರನ್ನು ಒಳಗೊಂಡ ಆರೋಪಗಳನ್ನು ಕೈಬಿಡುವಂತೆ ಸೂಚಿಸಿದ್ದರು. ಬಾಲಕಿ ಮತ್ತು ಆಕೆಯ ತಂದೆಯ ಹೇಳಿಕೆಗಳ ಆಧಾರದ ಮೇಲೆ ನಾವು ಶಿಫಾರಸು ಮಾಡಿದ್ದೇವೆ ಎಂದು ಪೊಲೀಸರು ಹೇಳಿದ್ದರು. ಆದರೆ ಸಾಕ್ಷಿ ಮಲಿಕ್ ಅವರು, ಬಾಲಕಿಯ ಕುಟುಂಬಕ್ಕೆ ಬೆದರಿಕೆ ಹಾಕಿದ್ದರಿಂದ ಆ ಬಾಲಕಿ ತನ್ನ ಹೇಳಿಕೆಯನ್ನು ಬದಲಾಯಿಸಿದೆ ಎಂದು ಆರೋಪ ಮಾಡಿದ್ದರು.

ಜೂನ್ 25ರಂದು ಪ್ರತಿಭಟನೆ ನಿರತ ಕುಸ್ತಿಪಟುಗಳು ನ್ಯಾಯಕ್ಕಾಗಿ ಬೀದಿಗಿಳಿಯದೆ ನ್ಯಾಯಾಲಯದಲ್ಲಿ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದರು.

ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ಏಪ್ರಿಲ್ 28 ರಂದು ದಾಖಲಿಸಲಾಗಿತ್ತು.

ಇದನ್ನೂ ಓದಿ: WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ಧ ‘ತಾಂತ್ರಿಕ ಸಾಕ್ಷ್ಯ’ವಾಗಿ ಫೋಟೋ, ಮೊಬೈಲ್ ಲೊಕೇಶನ್ ಸಲ್ಲಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...