Homeಮುಖಪುಟಕೇರಳದಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು: ಕೇಂದ್ರದ ತಂಡ ರವಾನೆ

ಕೇರಳದಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು: ಕೇಂದ್ರದ ತಂಡ ರವಾನೆ

- Advertisement -
- Advertisement -

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಇಬ್ಬರು ನಿಫಾ ವೈರಸ್‌ನಿಂದ ಮೃತಪಟ್ಟಿರುವುದು ದೃಡಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವೀಯ ದೃಢಪಡಿಸಿದ್ದಾರೆ. ನಿನ್ನೆ ಸೋಮವಾರ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರ ಅಸಹಜ ಸಾವಿನ ನಂತರ ಜಿಲ್ಲೆಯಾದ್ಯಂತ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ndtv ವರದಿ ಮಾಡಿದೆ.

ಕೇಂದ್ರದಿಂದ ಕೇರಳಕ್ಕೆ ತಂಡವನ್ನು ಕಳುಹಿಸಲಾಗಿದೆ. ನಿಫಾ ಕುರಿತು ರಾಜ್ಯಕ್ಕೆ ತಂಡ ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ಆಗಸ್ಟ್ 30 ರಂದು ಮೊದಲ ಪ್ರಕರಣ ದಾಖಲಾಗಿತ್ತು. ಎರಡನೇ ಪ್ರಕರಣ ನಿನ್ನೆ ವರದಿಯಾಗಿದೆ. ಕೋಝಿಕ್ಕೋಡ್ನಲ್ಲಿ ಈಗಾಗಲೇ ಕೇರಳ ಸರ್ಕಾರ ಕಂಟ್ರೋಲ್ ರೂಂ ಸ್ಥಾಪಿಸಿದೆ. ಜನರು ಮಾಸ್ಕ್ ಬಳಸುವಂತೆ ಸೂಚನೆ ನೀಡಿದೆ.

ನಿಫಾ ವೈರಸ್ ಕುರಿತು ಈಗಾಗಲೇ ಹೇಳಿಕೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜನರು ಗಾಬರಿ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ಅಗತ್ಯ. ಮೃತ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಲಾಗಿದೆ. ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕು ಎಂದಿದ್ದಾರೆ.

ನಿಫಾ ವೈರಸ್ ಮೊದಲ ಬಾರಿಗೆ ಕೇರಳದ ಮಲ್ಲಪುರಂ ಜಿಲ್ಲೆಯಲ್ಲಿ 2018 ರಲ್ಲಿ ಪತ್ತೆಯಾಗಿತ್ತು. ಬಳಿಕ 2021ರಲ್ಲಿ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಕಂಡು ಬಂದಿತ್ತು.

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ನಿಪಾಹ್ ವೈರಸ್ ಹಣ್ಣುಗಳನ್ನು ಕಚ್ಚುವ ಬಾವಲಿಗಳಿಂದ ಉಂಟಾಗುತ್ತದೆ. ಅದನ್ನು ಸೇವಿಸುವ ಮನುಷ್ಯರಿಗೆ ಮತ್ತು ಪ್ರಾಣಿಗಳಿಗೆ ಮಾರಕವಾಗಿದೆ. ಉಸಿರಾಟದ ತೊಂದರೆಯ ಜೊತೆಗೆ, ಇದು ಜ್ವರ, ಸ್ನಾಯು ನೋವು, ತಲೆನೋವು, ಜ್ವರ, ತಲೆತಿರುಗುವಿಕೆ ಮತ್ತು ವಾಕರಿಕೆ ನಿಫಾದ ಪ್ರಮುಖ ಲಕ್ಷಣವಾಗಿದೆ.

ಮೃತಪಟ್ಟ ಇಬ್ಬರಿಗೆ ನಿಫಾ ಲಕ್ಷಣಗಳಿದ್ದವು ಎಂದು ತಿಳಿದುಬಂದಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ಕುರಿತು ಮಾತನಾಡಿದ ವೀಣಾ ಜಾರ್ಜ್, ಮೃತಪಟ್ಟ ಇಬ್ಬರಿಗೂ ನಿಫಾ ಲಕ್ಷಣಗಳಿದ್ದವು. ಇದರಲ್ಲಿ ಒಬ್ಬರು ಆಗಸ್ಟ್ 30ರಂದು ಸಾವನ್ನಪ್ಪಿದ್ದಾರೆ. ಅವರು ಸ್ಯಾಂಪಲ್ ಕಳುಹಿಸಿರಲಿಲ್ಲ. ಇನ್ನೊಬ್ಬರು ಸೋಮವಾರ ಮೃತಪಟ್ಟಿದ್ದು, ಅವರ ಸ್ಯಾಂಪಲ್ ಅನ್ನು ಪುಣೆಗೆ ಕಳುಹಿಸಿರುವ ಬಗ್ಗೆ ತಿಳಿಸಿದ್ದರು.

ಮೃತಪಟ್ಟವರಲ್ಲಿ ಒಬ್ಬರ ಕುಟುಂಬದ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 9 ವರ್ಷದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. 10 ತಿಂಗಳ ಮಗುವಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ 75 ಜನರ ಸಂಪರ್ಕ ಪಟ್ಟಿ ಸಿದ್ಧಪಡಿಸಲಾಗಿದೆ.

ಕ್ವಾರಂಟೈನ್‌ಗೆ ಸಿದ್ಧತೆಗಳನ್ನು ನಡೆಸಿದ್ದು, ಕೋಯಿಕೋಡ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ಮಾಸ್ಕ್, ಪಿಪಿಇ ಬಳಸಲು ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು. ಅಲ್ಲದೇ ಅನಿವಾರ್ಯತೆ ಇದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ. ಅನಗತ್ಯವಾಗಿ ಆಸ್ಪತ್ರೆಗೆ ಭೇಟಿ ನೀಡುವುದು ಬೇಡ ಎಂದು ಜನರಿಗೆ ಮನವಿ ಮಾಡಿದರು.

ನಿಫಾ ವೈರಸ್ ಎಂದರೇನು?: 1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

ವೈರಸ್ ಹೇಗೆ ಹರಡುತ್ತದೆ?

* ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನೋದ್ರಿಂದ ಹರಡುತ್ತೆ.
* ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತೆ.
* ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.

ನಿಫಾ ವೈರಸ್ ಲಕ್ಷಣಗಳೇನು?

* ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ
* ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ
* ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ
* ಬಳಿಕ ಪ್ರಜ್ಞಾಹೀನರಾಗುತ್ತಾರೆ
* ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ
* ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...