Homeಮುಖಪುಟದಲಿತ ವಾಚ್‌ಮನ್‌ಗೆ ಬೂಟ್‌ ಕಾಲಿನಿಂದ ಒದ್ದು ಅಮಾನವೀಯವಾಗಿ ಥಳಿಸಿದ ಗೃಹ ರಕ್ಷಕ ದಳದ ಸಿಬ್ಬಂದಿಗಳು

ದಲಿತ ವಾಚ್‌ಮನ್‌ಗೆ ಬೂಟ್‌ ಕಾಲಿನಿಂದ ಒದ್ದು ಅಮಾನವೀಯವಾಗಿ ಥಳಿಸಿದ ಗೃಹ ರಕ್ಷಕ ದಳದ ಸಿಬ್ಬಂದಿಗಳು

- Advertisement -
- Advertisement -

ದಲಿತ ವಾಚ್‌ಮನ್‌ಗೆ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಗಳು ಅಮಾನವೀಯವಾಗಿ ಥಳಿಸಿರುವ ಘಟನೆ  ಉತ್ತರಪ್ರದೇಶದ ಬರೇಲಿಯ ನವಾಬ್‌ಗಂಜ್ ತಹಸಿಲ್‌ನಲ್ಲಿ ನಡೆದಿದೆ.

ಉತ್ತರಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಸಾರ್ವಜನಿಕರ ಸಮ್ಮುಖದಲ್ಲೇ ಘಟನೆ ನಡೆದಿದ್ದು, ವಾಚ್‌ ಮ್ಯಾನ್‌ಗೆ ಬೂಟು ಕಾಲಿನಿಂದ ಒದ್ದು, ಲಾಠೀ ಚಾರ್ಜ್‌ ಮಾಡುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಕಾವಲುಗಾರನ ಬಗ್ಗೆ ಹೋಮ್ ಗಾರ್ಡ್ ಅಸಭ್ಯವಾಗಿ ಕಾಮೆಂಟ್ ಮಾಡಿದ್ದಾನೆ. ಇದರಿಂದಾಗಿ ತಹಸಿಲ್ ಗೇಟ್‌ನಲ್ಲಿದ್ದ ಗೃಹರಕ್ಷಕ ಮತ್ತು ವಾಚ್‌ಮನ್ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಮತ್ತೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿ ಕೂಡ ಸ್ಥಳಕ್ಕೆ ಬಂದಿದ್ದಾನೆ. ಇಬ್ಬರು ಸೇರಿ ವಾಚ್‌ಮನ್‌ನನ್ನು ನೆಲಕ್ಕೆ ತಳ್ಳಿ  ಬೂಟು ಕಾಲಿನಿಂದ ಥಳಿಸಿದ್ದಾರೆ ಹಾಗೂ ರೈಫಲ್‌ನಿಂದ ಮತ್ತು ಕೈಯಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ಇದರ ಬೆನ್ನಲ್ಲಿ ಆರೋಪಿತ ಹೋಮ್ ಗಾರ್ಡ್ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ವಾಚ್‌ಮನ್ ನವಾಬ್‌ಗಂಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಯುಪಿ ಸಿಎಂಗೆ ಕೂಡ ಪತ್ರ ಬರೆದಿದ್ದಾರೆ.

ನವಾಬ್‌ಗಂಜ್ ನಗರಕ್ಕೆ ಹೊಂದಿಕೊಂಡಿರುವ ಬಹೋರಂಗಲ ಗ್ರಾಮದ ಪರಿಶಿಷ್ಟ ಜಾತಿಯ ವೀರೇಂದ್ರ ಕುಮಾರ್ ಮೇಲೆ ಹಲ್ಲೆ ನಡೆದಿದೆ. ಗೃಹ ರಕ್ಷಕರಾದ ವೀರ್ ಬಹದ್ದೂರ್ ಮತ್ತು ರಾಂಪಾಲ್ ಅವರು ಸರ್ಕಾರದಿಂದ ಉಚಿತ ರೇಷನ್ ತೆಗೆದುಕೊಳ್ಳುತ್ತಾರೆ ಮತ್ತು ಮತ ಹಾಕುವುದಿಲ್ಲ ಎಂದು ವೀರೇಂದ್ರ ಕುಮಾರ್‌ಗೆ ಟೀಕಿಸಿದ್ದಾರೆ ಮತ್ತು ರಾಂಪಾಲ್ ಜಾತಿ ಉಲ್ಲೇಖಿಸಿ ನಿಂದನೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ.

ತಹಸೀಲ್ದಾರ್ ರಜನೀಶ್ ಸಕ್ಸೇನಾ ಈ ಬಗ್ಗೆ ಮಾತನಾಡಿದ್ದು, ಈ ವಿಷಯ ತಮ್ಮ ಗಮನಕ್ಕೆ ಬಂದಿಲ್ಲ. ಇಡೀ ದಿನ ತಹಸಿಲ್‌ನಲ್ಲಿ ಇದ್ದೇವೆ. ಗೃಹ ರಕ್ಷಕರು ಯಾರಿಗಾದರೂ ಥಳಿಸಿದ್ದರೆ, ತನಿಖೆ ನಡೆಸಲಾಗುವುದು. ತನಿಖೆಯ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ವಿಚಾರ ನಮ್ಮ ಗಮನಕ್ಕೆ ಬಂದಿದೆ, ಕಾವಲುಗಾರ ದೂರು ನೀಡಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ತನಿಖೆಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ಕಾಲೇಜು ಲೈಬ್ರೆರಿಯಲ್ಲಿ ‘ಹಿಂದೂಫೋಬಿಕ್’ ಪುಸ್ತಕ ಇದೆ ಎಂದು ಪ್ರಾಂಶುಪಾಲರ ವಿರುದ್ಧ ಕೇಸ್: ‘ಅಸಂಬದ್ಧ’ ಎಂದು ಎಫ್‌ಐಆರ್‌ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Why u ppl identify victim in caste basis victim is victim no caste should come here and did police started beating after they know that he is dalit or what

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...