Homeಮುಖಪುಟಪತ್ರಕರ್ತೆ ರಾಣಾ ಆಯೂಬ್ ವಿರುದ್ಧ ಸುಳ್ಳು ಸುದ್ದಿ ಹರಡಿದ ಆರೋಪ: ಇಬ್ಬರು ಪತ್ರಕರ್ತರ ಬಂಧನ

ಪತ್ರಕರ್ತೆ ರಾಣಾ ಆಯೂಬ್ ವಿರುದ್ಧ ಸುಳ್ಳು ಸುದ್ದಿ ಹರಡಿದ ಆರೋಪ: ಇಬ್ಬರು ಪತ್ರಕರ್ತರ ಬಂಧನ

- Advertisement -
- Advertisement -

ಪತ್ರಕರ್ತೆ ರಾಣಾ ಆಯೂಬ್ ವಿರುದ್ಧ ವಿಡಿಯೋ ಮೂಲಕ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ನ್ಯೂಸ್ ಪೋರ್ಟಲ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಪತ್ರಕರ್ತರನ್ನು ಮುಂಬೈ ಪೊಲೀಸರ ಸೈಬರ್ ಸೆಲ್ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ (ಮಾ.6) ತಿಳಿಸಿದ್ದಾರೆ.

ಇಬ್ಬರು ಆರೋಪಿಗಳು ಉತ್ತರ ಪ್ರದೇಶದ ನಿವಾಸಿಗಳಾಗಿದ್ದು, ಪಶ್ಚಿಮ ವಲಯ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 354(ಎ) (ಲೈಂಗಿಕ ಕಿರುಕುಳ), 506(2) (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), 509 (ಮಹಿಳೆಯರ ಘಟನತೆಗೆ ಅವಮಾನ ಮಾಡುವ ಉದ್ದೇಶದಿಂದ ಮಾಡಿದ ಕೃತ್ಯ) ಮತ್ತು ಭಾರತೀಯ ದಂಡ ಸಂಹಿತೆಯ 500 (ಮಾನನಷ್ಟಕ್ಕೆ ಶಿಕ್ಷೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸೈಬರ್ ಪೊಲೀಸರು ಭೋಪಾಲ್ ನಿವಾಸಿ ಸಿದ್ಧಾರ್ಥ್ ಜೈ ಪ್ರಕಾಶ್ ಶ್ರೀವಾಸ್ತವ್ (24) ಎಂಬಾತನನ್ನು ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಮುಂಬೈ ಸೈಬರ್ ಕ್ರೈಮ್ ಪೊಲೀಸರು ನನ್ನ ವಿರುದ್ಧ ಅತ್ಯಂತ ಕೆಟ್ಟ ಸುಳ್ಳು ಸುದ್ದಿಗಳನ್ನು ಹರಡಿದ ಸ್ಕೂಪ್‌ಬೀಟ್ಸ್‌ನ ಇಬ್ಬರು ಪತ್ರಕರ್ತರನ್ನು ಬಂಧಿಸಿದ್ದಾರೆ. ಇದು ನ್ಯಾಯದ ದಿಕ್ಕಿನಲ್ಲಿ ಒಂದು ದೊಡ್ಡ ಹೆಜ್ಜೆಯಾಗಿದೆ. ಮುಂಬೈ ಪೊಲೀಸರಿಗೆ ಧನ್ಯವಾದಗಳು ಎಂದು ರಾಣಾ ಆಯೂಬ್ ಟ್ವೀಟ್ ಮಾಡಿದ್ದರು.

“ಇಬ್ಬರು ಯುವ ಪತ್ರಕರ್ತರು ನನಗೆ ಪಾಕಿಸ್ತಾನ ಸಹಾಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಸೌದಿ ಅರೇಬಿಯಾಕ್ಕೆ ನನ್ನ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಘೋಷಿಸಿದ್ದಾರೆ. ಜೊತೆಗೆ ತಿರುಚಿದ ದೇಶ ವಿರೋಧಿ ಟ್ವೀಟ್‌ಗಳು ನನ್ನವು ಎಂದು ಆರೋಪಿಸಿದ್ದಾರೆ” ಎಂದು ಟ್ವೀಟ್‌ನಲ್ಲಿ ಹೇಳಿಕೊಂಡಿದ್ದರು.


ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ನನ್ನ ಘನತೆಗಾಗಿ ಹೋರಾಟ ಮುಂದುವರೆಸುತ್ತೇನೆ- ನಟಿ ಭಾವನಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...