Homeಮುಖಪುಟ ಇಸ್ರೋ ನೇಮಕಾತಿ ಪರೀಕ್ಷೆಯಲ್ಲಿ ವಂಚನೆ: ಇಬ್ಬರು ಅಭ್ಯರ್ಥಿಗಳು ಅರೆಸ್ಟ್

 ಇಸ್ರೋ ನೇಮಕಾತಿ ಪರೀಕ್ಷೆಯಲ್ಲಿ ವಂಚನೆ: ಇಬ್ಬರು ಅಭ್ಯರ್ಥಿಗಳು ಅರೆಸ್ಟ್

- Advertisement -
- Advertisement -

ಇಸ್ರೋ ನೇಮಕಾತಿಗಾಗಿ ನಡೆದ ಪರೀಕ್ಷೆಯಲ್ಲಿ ವಂಚನೆ ಮಾಡಿದ್ದಕ್ಕಾಗಿ ಹರಿಯಾಣದ ಇಬ್ಬರು ಅಭ್ಯರ್ಥಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ.

ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ತಾಂತ್ರಿಕ ಸಿಬ್ಬಂದಿ ನೇಮಕಾತಿಗಾಗಿ ಇಸ್ರೋ ನಡೆಸಿದ ಪರೀಕ್ಷೆಯಲ್ಲಿ ವಂಚನೆ ಮಾಡಿದ ಆರೋಪದ ಮೇಲೆ  ಇಬ್ಬರು ಅಭ್ಯರ್ಥಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂದು FREE PRESS  JOURNAL ವರದಿ ಮಾಡಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆಗಳಿಗೆ ಉತ್ತರಿಸುವಾಗ ಡಿಜಿಟಲ್ ಸಾಧನಗಳನ್ನು ಬಳಸಿಕೊಂಡು ನಕಲು ಮಾಡಿದ್ದಾರೆ ಎಂದು ಅಭ್ಯರ್ಥಿಗಳ ಮೇಲೆ ಆರೋಪಿಸಲಾಗಿದೆ. ಬಂಧಿತ ಇಬ್ಬರು ಅಭ್ಯರ್ಥಿಗಳನ್ನು ಕೂಡ ಬೇರೆ ಬೇರೆ ಪರೀಕ್ಷಾ ಕೇಂದ್ರಗಳಿಂದ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣಕ್ಕೆ  ಸಂಬಂಧಿಸಿದಂತೆ  ಇತರ ನಾಲ್ವರನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಅಕ್ರಮದಲ್ಲಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ.

ಬಂಧಿತ ಇಬ್ಬರ ವಿರುದ್ಧ ವಂಚನೆ ಪ್ರಕರಣ ದಾಖಲಿಸಲಾಗಿದೆ ಮತ್ತು ಕೋಚಿಂಗ್ ಸೆಂಟರ್‌ಗಳು ಸೇರಿದಂತೆ ಇತರರ ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬಂಧಿತ ಅಭ್ಯರ್ಥಿಗಳು ಮೊಬೈಲ್ ಫೋನ್ ಕ್ಯಾಮೆರಾಗಳನ್ನು ಬಳಸಿ ಪ್ರಶ್ನೆಗಳ ಫೋಟೋಗಳನ್ನು ತೆಗೆದು ಬೇರೆಡೆಗೆ ಕಳುಹಿಸುತ್ತಿದ್ದರು. ಬಳಿಕ ಅವರು ತಮ್ಮ ಕಿವಿಯಲ್ಲಿರುವ ಬ್ಲೂಟೂತ್ ಸಾಧನಗಳಲ್ಲಿ ಉತ್ತರಗಳನ್ನು ಕೇಳಿಸಿಕೊಂಡು ಬರೆಯುತ್ತಿದ್ದರು. ಈ ಕುರಿತು ಪೊಲೀಸರಿಗೆ ಅನಾಮಧೇಯ ಕರೆ ಬಂದಿತ್ತು. ಅದರ ಆಧಾರದಲ್ಲಿ ಇದೀಗ ಆರೋಪಿ ಅಭ್ಯರ್ಥಿಗಳಿಗೆ ಬಂಧಿಸಲಾಗಿದೆ  ಎಂದು ಪೊಲೀಸರು ಹೇಳಿದ್ದಾರೆ.

 ಇದನ್ನು ಓದಿ: ಶಿವಮೊಗ್ಗ: ಗಾಂಧಿ ಪ್ರತಿಮೆ ಧ್ವಂಸ; ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ ಸಿಎಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...