Homeಕರ್ನಾಟಕಇಬ್ಬರು ಶಾಸಕರಿಗೆ ಜೈಲು ಶಿಕ್ಷೆ; ‘BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ’ ಎಂದ ಕಾಂಗ್ರೆಸ್

ಇಬ್ಬರು ಶಾಸಕರಿಗೆ ಜೈಲು ಶಿಕ್ಷೆ; ‘BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ’ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯದ ಇಬ್ಬರು ಬಿಜೆಪಿಯ ಶಾಸಕರಿಗೆ ಜೈಲು ಶಿಕ್ಷೆಯಾಗಿದೆ. ಒಬ್ಬರು ಚೆಕ್‌ಬೌನ್ಸ್ ಪ್ರಕರಣದಲ್ಲಿ, ಮತ್ತೊಬ್ಬರು ನಕಲಿ ಬಿಲ್ ಸಷ್ಟಿಸಿ ಅಕ್ರಮ ಎಸಗಿದ ಆರೋಪದಲ್ಲಿ ಜೈಲು ಸೇರಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, “BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ ಎಂದು ಮತ್ತೊಮ್ಮೆ ಸಾಬೀತಾಗಿದೆ” ಎಂದು ಕುಟುಕಿದೆ.

ಬಿಜೆಪಿಯ ಇಬ್ಬರು ಶಾಸಕರು ಜೈಲು ಸೇರಿರುವದರ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, “BJP ಎಂಬುದು ಕ್ರಿಮಿನಲ್‍ಗಳ ತೊಟ್ಟಿ ಎಂದು ಮತ್ತೊಮ್ಮೆ ಸಾಬೀತಾಗಿದೆ! ಒಬ್ಬ ಶಾಸಕ ಚೆಕ್‍ಬೌನ್ಸ್ ಕೇಸಲ್ಲಿ 4 ವರ್ಷ ಶಿಕ್ಷೆಗೆ ಗುರಿಯಾದರೆ, ಮತ್ತೊಬ್ಬ ವಂಚನೆ ಕೇಸಲ್ಲಿ 2 ವರ್ಷ ಶಿಕ್ಷೆಗೆ ಗುರಿಯಾಗಿದ್ದಾರೆ! ಸ್ವಯಂಘೋಷಿತ ಸುಸಂಸ್ಕೃತ ಪಕ್ಷ ಬಿಜೆಪಿಯ ತುಂಬಾ ಭ್ರಷ್ಟಾಚಾರಿಗಳು & ಕ್ರಿಮಿನಲ್‍ಗಳೇ ತುಂಬಿರುವುದು ನಾಚಿಕೆಗೇಡಿನ ಸಂಗತಿ” ಎಂದು ತಿಳಿಸಿದೆ.

ಚೆಕ್‌ಬೌನ್ಸ್ ಕೇಸ್‌ನಲ್ಲಿ ಮೂಡಿಗೆರೆ ಶಾಸಕನಿಗೆ 4 ವರ್ಷ ಜೈಲು

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಚೆಕ್‌ಬೌನ್ಸ್‌ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಚೆಕ್‌ಬೌನ್ಸ್‌ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಒಟ್ಟು ಎಂಟು ಚೆಕ್‌ಬೌನ್ಸ್‌ ಪ್ರಕರಣದಲ್ಲಿ 1.38 ಕೋಟಿ ರು. ಹಣ ಪಾವತಿಸಬೇಕು ಎಂದು ನ್ಯಾಯಾಲಯವು ತಿಳಿಸಿದೆ.

ಚಿಕ್ಕಮಗಳೂರು ನಗರದ ನಿವಾಸಿಯಾಗಿರುವ ಹೂವಪ್ಪಗೌಡ ಎಂಬುವರಿಂದ 1.35 ಕೋಟಿ ರೂ.ಗಳನ್ನು ಎಂ.ಪಿ.ಕುಮಾರಸ್ವಾಮಿ ಸಾಲ ಪಡೆದಿದ್ದರು. ಸಾಲ ಮರುಪಾವತಿಗೆ ಎಂಟು ಚೆಕ್‌ಗಳನ್ನು ನೀಡಿದ್ದರು. ಆದರೆ, ಎಲ್ಲ ಚೆಕ್‌ಗಳು ಬೌನ್ಸ್‌ ಆಗಿದ್ದವು. ಹೀಗಾಗಿ ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ ಹೂವಪ್ಪಗೌಡ ಎಂಟು ಪ್ರಕರಣಗಳನ್ನು ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಎಂಟು ತಲಾ ಪ್ರಕರಣಗಳಿಗೆ ಆರು ತಿಂಗಳಂತೆ ಕುಮಾರಸ್ವಾಮಿ ಅವರಿಗೆ ನಾಲ್ಕು ವರ್ಷ ಶಿಕ್ಷೆ ವಿಧಿಸಿದೆ.

ಶಾಸಕ ಕುಮಾರಸ್ವಾಮಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ತಮ್ಮದೇಯಾದ ರೀತಿಯಲ್ಲಿ ಸುಳ್ಳಿನ ಸರಮಾಲೆಯನ್ನೇ ಸೃಷ್ಟಿಸಿದ್ದರು. ದೂರುದಾರನ ಆರ್ಥಿಕ ಸಾಮರ್ಥ್ಯವನ್ನು ಪ್ರಶ್ನಿಸಿದ್ದು, ಚುನಾವಣಾ ಸಂದರ್ಭದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳಿಂದ ಮುಕ್ತಿ ಪಡೆಯಲು ದೂರುದಾರರಿಗೆ 1.40 ಕೋಟಿ ರೂಪಾಯಿಗಳನ್ನು ನೀಡಿದ್ದೆ ಎಂದು ಹೇಳುವ ಮಟ್ಟಕ್ಕೆ ಹೋಗಿದ್ದಾರೆ.

ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಇಷ್ಟೊಂದು ಹಣವನ್ನು ಕೊಡಲು ಹೇಗೆ ಸಾಧ್ಯ ಎಂದು ನ್ಯಾಯಾಲಯದಲ್ಲಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಇದು ಆರೋಪಿಯು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಹೆಣೆಯುವ ಕಥೆ ಎಂದು ನ್ಯಾಯಾಲಯದ ಗಮನಕ್ಕೆ ಬಂದಿದೆ.

ಆರೋಪಿ ಕುಮಾರಸ್ವಾಮಿ ವಿರುದ್ಧ 2021ರಲ್ಲಿ ಎಚ್‌ಆರ್‌ ಹೂವಪ್ಪಗೌಡ ಅವರು ದೂರು ದಾಖಲಿಸಿದ್ದರು. ದೂರುದಾರರು ಮತ್ತು ಆರೋಪಿಗಳಿಬ್ಬರೂ ಪರಸ್ಪರ ಪರಿಚಿತರಾಗಿದ್ದಾರೆ. ದೂರುದಾರರಿಗೆ ಶಾಸಕ 1.38 ಕೋಟಿ ರೂಪಾಯಿ ಹಣ ನೀಡಬೇಕಿತ್ತು. ಇದೀಗ ಚೆಕ್‌ಬೌನ್ಸ್ ಪ್ರಕರಣದಲ್ಲಿ ಶಾಸಕ ಕುಮಾರಸ್ವಾಮಿಗೆ ನ್ಯಾಯಾಲಯ ಆದೇಶ ನೀಡಿದೆ.

ನಕಲಿ ಬಿಲ್ ಸಷ್ಟಿಸಿ ಅಕ್ರಮ ಎಸಗಿದ ಆರೋಪದಲ್ಲಿ ಹಾವೇರಿ ಶಾಸಕನಿಗೆ 2ವ‍ರ್ಷ ಜೈಲು

ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ನೆಹರೂ ಓಲೆಕಾರ್ ಅವರಿಗೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕರಣದಲ್ಲಿ 2 ವರ್ಷ ಜೈಲು‌ ಶಿಕ್ಷೆಯನ್ನು ವಿಧಿಸಿ ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್ ಆದೇಶವನ್ನು ಹೊರಡಿಸಿದೆ.

ಶಾಸಕ ನೆಹರೂ ಓಲೆಕಾರ್ ಜೊತೆ ಅವರ ಇಬ್ಬರು ಮಕ್ಕಳಿಗೂ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಲಾಗಿದೆ. ನೆಹರೂ ಓಲೆಕಾರ್ ಮಕ್ಕಳಾದ‌ ದೇವರಾಜ್ ಓಲೆಕಾರ್ ಹಾಗೂ ಮಂಜುನಾಥ್ ಓಲೆಕಾರ್ ಅವರೂ ಜೈಲು ಸೇರಲಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ, 2 ವರ್ಷ ಜೈಲು ಜೊತೆಗೆ 2 ಸಾವಿರ ರೂ. ದಂಡವನ್ನು ವಿಧಿಸಿ ಶಿಕ್ಷೆ ಪ್ರಕಟ ಮಾಡಲಾಗಿದೆ.

ಆರೋಪ ಏನು? 

ಶಾಸಕರ ಅನುದಾನದಲ್ಲಿ 1 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ. ಶಾಸಕರ ಅನುದಾನವನ್ನು ಕಬಳಿಸುವ ಉದ್ದೇಶದಿಂದ 2010ರಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ತಮ್ಮ ಕ್ಷೇತ್ರದಲ್ಲಿ 50 ಲಕ್ಷ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಅದರಂತೆ ಜಿಲ್ಲಾಧಿಕಾರಿ ಹಣವನ್ನು ಬಿಡುಗಡೆ ಮಾಡಿದ್ದಾರೆ. 10 ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಶಿಫಾರಸ್ಸು ಪತ್ರದಲ್ಲಿ ಪಟ್ಟಿ ಮಾಡಲಾಗಿದ್ದು, ಈ ಪೈಕಿ ನಾಲ್ಕು ಕಾಮಗಾರಿಗಳ ಗುತ್ತಿಗೆಗಳನ್ನು ಹಿರಿಯ ಮಗನಿಗೆ ಹಂಚಿಕೆ ಮಾಡಲಾಗಿತ್ತು. ಟೆಂಡರ್‌ ನೀಡುವ ವೇಳೆ ಶಾಸಕರು ಶಿಫಾರಸ್ಸಿನೊಂದಿಗೆ ತಮ್ಮ ಪ್ರಭಾವ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಹಲವು ಲೋಕೋಪಯೋಗಿ ಗುತ್ತಿಗೆಗಳನ್ನು ಶಾಸಕರ ಕುಟುಂಬದವರೇ ಪಡೆದುಕೊಂಡಿದ್ದಾರೆ. ಎಂ.ಜಿ.ತಿಮ್ಮಾಪುರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ 5 ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ಗುತ್ತಿಗೆ ಪಡೆದಿದ್ದಾರೆ ಮತ್ತು ನೆಲೋಗಲ್ ಗ್ರಾಮ ಮತ್ತು ತೋಟದ ಯಲ್ಲಾಪುರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಗುತ್ತಿಗೆಯನ್ನು ಸಹ ಪಡೆದುಕೊಂಡಿದ್ದಾರೆ. ಹಾವೇರಿ ತಾಲೂಕಿನ ಗ್ರಾಮ ಹಾಗೂ ಸವಣೂರು ತಾಲೂಕಿನ ಹೊನ್ನಿಕೊಪ್ಪ ಗ್ರಾಮಗಳಲ್ಲಿ ಪ್ರತಿ ಗುತ್ತಿಗೆ ಅಂದಾಜು 5 ಲಕ್ಷ ರೂ.ನಂತೆ ಗುತ್ತಿಗೆ ಪಡೆದಿದ್ದಾರೆ. ಜೊತೆಗೆ, ಬೇರೊಬ್ಬರು ಯಾರೂ ಟೆಂಡರ್‌ನಲ್ಲಿ ಭಾಗವಹಿಸದಂತೆ ಬೆದರಿಕೆ ಹಾಕಿದ್ದಾರೆ. ಕಾನೂನಿಗೆ ತಿಳಿದಿಲ್ಲದ ಇತರ ಯಾವುದೇ ವ್ಯಕ್ತಿಗೆ ಗುತ್ತಿಗೆಗಳನ್ನು ಪಡೆಯಲು ಅವಕಾಶ ನೀಡದೆ ಎಲ್ಲಾ ಸರ್ಕಾರಿ ಗುತ್ತಿಗೆಗಳನ್ನು ತಮ್ಮ ಮನೆಯವರೇ ಪಡೆದುಕೊಂಡು ನಿರ್ವಹಣೆ ಮಾಡಿದ್ದರು. ಇದರಲ್ಲಿ ಭಾರಿ ಪ್ರಮಾಣದ ಅಕ್ರಮ ಎಸಗಿದ್ದು, ಭ್ರಷ್ಟಾಚಾರದ ಆರೋಪ ಕೂಡ ಎದುರಾಗಿತ್ತು.

ಶಾಸಕರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆ ಹಾವೇರಿ ಜಿಲ್ಲಾ ಪೊಲೀಸರು ತನಿಖೆ ಕೈಗೊಂಡು ಆರೋಪ ಪಟ್ಟಿಯನ್ನು ಸಿದ್ಧಪಡಿಸಿದ್ದರು. ಇದಕ್ಕೆ ಸಂಬಂಧಿಸದಂತೆ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದಾಗ ಭ್ರಷ್ಟಾಚಾರದ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಣದ ದುರುಪಯೋಗ ಹಾಗೂ ಅಧಿಕಾರ ದುರ್ಬಳಕೆ ಹಿನ್ನೆಲೆಯಲ್ಲಿ ಅವರಿಗೆ 2ವ‍ರ್ಷ ಜೈಲು ಶಿಕ್ಷೆ ವಿಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...