Homeಮುಖಪುಟಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

- Advertisement -
- Advertisement -

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಖರಾತ್‌ನ ಮಾಜಿ ಉದ್ಯೋಗಿಯೊಬ್ಬರು ನೀಡಿದ ದೂರಿನ ಮೇರೆಗೆ ಒಂದು ಎಫ್‌ಐಆರ್ ದಾಖಲಾಗಿದ್ದು, ಆಧ್ಯಾತ್ಮಿಕ ಆಚರಣೆಗಳನ್ನು ಮಾಡುವ ನೆಪದಲ್ಲಿ ನವೆಂಬರ್ 2023ರಿಂದ ಡಿಸೆಂಬರ್ 2025ರ ಅವಧಿಯಲ್ಲಿ ನನ್ನ ಪತ್ನಿ ಮೇಲೆ ಖರಾತ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಪತ್ನಿ ಏಳು ತಿಂಗಳ ಗರ್ಭಿಣಿಯಾಗಿದ್ದಾಗಲೂ ಆಕೆಯ ದೌರ್ಜನ್ಯ ನಡೆದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

2019ರಲ್ಲಿ ನಾನು ನಾಸಿಕ್ ನಗರದಲ್ಲಿರುವ ಖರಾತ್‌ನ ಆಸ್ತಿ ಅಭಿವೃದ್ಧಿ ಕಚೇರಿಗೆ ಕೆಲಸಕ್ಕೆ ಸೇರಿದ್ದೆ. ನಾನು ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಆರೋಗ್ಯವಂತ ಮಗುವಿಗಾಗಿ ಆಶೀರ್ವದಿಸುವ ನೆಪದಲ್ಲಿ ಖರಾತ್ ನನ್ನ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪತ್ನಿಈ ವಿಷಯ ನನಗೆ ತಿಳಿಸಿದಾಗ ನಾನು ಆತನ ಚಟುವಟಿಕೆಗಳ ಬಗ್ಗೆ ಆಳವಾಗಿ ತನಿಖೆ ನಡೆಸಲು ನಿರ್ಧರಿಸಿದೆ. ಆತ ಮಹಿಳೆಯರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳ ವಿಡಿಯೋ ಸಾಕ್ಷ್ಯವನ್ನು ಸಂಗ್ರಹಿಸಲು ಕಚೇರಿ ಕ್ಯಾಬಿನ್‌ನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದೆ ಎಂದು ಮಾಜಿ ಉದ್ಯೋಗಿ ದೂರಿನಲ್ಲಿ ಹೇಳಿರುವುದಾಗಿ ವರದಿಯಾಗಿದೆ.

ತನ್ನ ಕಚೇರಿಗೆ ಭೇಟಿ ನೀಡುವ ಮಹಿಳೆಯರಿಗೆ ಅಘೋರಿ ಆಚರಣೆಯ ಭಾಗವೆಂದು ಅಮಲು ಪದಾರ್ಥ ಬೆರೆಸಿದ ಪಾನೀಯಗಳನ್ನು ಕುಡಿಯಲು ಖರಾತ್ ಬಲವಂತಪಡಿಸುತ್ತಿದ್ದ. ಅದನ್ನು ಕುಡಿದು ಮಹಿಳೆಯರು ಪ್ರಜ್ಞೆ ಕಳೆದುಕೊಂಡಾಗ ಅಥವಾ ಅಸಹಾಯಕರಾದಾಗ ಅವರ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂಬುವುದು ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ ಎಂದು ಮಾಜಿ ಉದ್ಯೋಗಿ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಬಗ್ಗೆ ನಾನು ಖರಾತ್‌ನನ್ನು ಪ್ರಶ್ನಿಸಿದಾಗ ಕೆಲಸದಿಂದ ವಜಾಗೊಳಿಸಿದ್ದ. ನನ್ನ ಬಳಿ ಆತನ ಅಪರಾಧ ಕೃತ್ಯಗಳ ವಿಡಿಯೋ ಸಾಕ್ಷ್ಯವಿರುವುದು ತಿಳಿದಾಗ, ನನಗೆ ಮತ್ತು ನನ್ನ ಕುಟುಂಬಕ್ಕೆ ಬೆದರಿಕೆ ಹಾಕಲು ಪ್ರಾರಂಭಿಸಿದ. ಆತನಿಗೆ ಹಿರಿಯ ರಾಜಕಾರಣಿಗಳೊಂದಿಗೆ ಇದ್ದ ಪ್ರಭಾವ ಮತ್ತು ಸಂಪರ್ಕದ ಕಾರಣದಿಂದ ನಾನು ಈ ಹಿಂದೆ ಪೊಲೀಸರಿಗೆ ದೂರು ನೀಡಿರಲಿಲ್ಲ. ಇತ್ತೀಚೆಗೆ ನಾಸಿಕ್ ಪೊಲೀಸರು ಆತನನ್ನು ಬಂಧಿಸಿದ ವಿಷಯ ಗೊತ್ತಾಗಿ ನಾನೂ ದೂರು ದಾಖಲಿಸಲು ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.

ಎರಡನೇ ಎಫ್‌ಐಆರ್‌ ಮಹಿಳೆಯೊಬ್ಬರ ದೂರಿನ ಮೇರೆಗೆ ದಾಖಲಾಗಿದೆ. ವಿಚ್ಛೇದನದ ನಂತರ ನನ್ನ ಭವಿಷ್ಯವನ್ನು ಉಜ್ವಲಗೊಳಿಸುವ ಭರವಸೆಯ ನೆಪದಲ್ಲಿ ಫೆಬ್ರವರಿ 2020ರಿಂದ ಈ ವರ್ಷದ ಮಾರ್ಚ್‌ವರೆಗೆ ಖರಾತ್ ನನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಖರಾತ್‌ಗೆ ಮಹಿಳೆಗೆ ಅಮಲು ಪದಾರ್ಥ ನೀಡಿ ದೌರ್ಜನ್ಯವೆಸಗುತ್ತಿದ್ದ. ಆಕೆ ಗರ್ಭಿಣಿಯಾದ ವಿಷಯ ತಿಳಿಸಿದಾಗ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂದು ಎಂದು ವರದಿಯಾಗಿದೆ.

ಸರ್ಕಾರವಾಡ ಪೊಲೀಸರು ಅತ್ಯಾಚಾರದ ಆರೋಪದ ಜೊತೆಗೆ, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 74 (ಮಹಿಳೆಯ ನಮ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ) ಮತ್ತು ಸೆಕ್ಷನ್ 351(2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ, ಮಹಾರಾಷ್ಟ್ರದ ನರಬಲಿ ಮತ್ತು ಇತರ ಅಮಾನವೀಯ, ದುಷ್ಟ ಮತ್ತು ಅಘೋರಿ ಆಚರಣೆಗಳು ಹಾಗೂ ಮಾಟಮಂತ್ರ ತಡೆಗಟ್ಟುವಿಕೆ ಮತ್ತು ನಿರ್ಮೂಲನೆ ಕಾಯ್ದೆಯ ಸೆಕ್ಷನ್ 3(1) ಮತ್ತು 3(2) ಅನ್ನು ಸಹ ಈ ಪ್ರಕರಣದಲ್ಲಿ ಅನ್ವಯಿಸಲಾಗಿದೆ.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...