Homeಮುಖಪುಟಕೋಟಾದಲ್ಲಿ ಮತ್ತೆ ಇಬ್ಬರು ನೀಟ್ ಆಕಾಂಕ್ಷಿ ವಿದ್ಯಾರ್ಥಿಗಳು ಆತ್ಮಹತ್ಯೆ

ಕೋಟಾದಲ್ಲಿ ಮತ್ತೆ ಇಬ್ಬರು ನೀಟ್ ಆಕಾಂಕ್ಷಿ ವಿದ್ಯಾರ್ಥಿಗಳು ಆತ್ಮಹತ್ಯೆ

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ ಮತ್ತೆ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ದೇಶದ ಮಹತ್ವಾಕಾಂಕ್ಷಿ ಕೋರ್ಸ್‌ಗಳಾದ ಎಂಜಿನಿಯರ್‌, ವೈದ್ಯಕೀಯ ಪ್ರವೇಶಾತಿ ಪರೀಕ್ಷೆ  ಮತ್ತು ನಾಗರಿಕ ಸೇವೆಗಳ ಪರೀಕ್ಷೆಗಳ ತರಬೇತಿಯ ಕೇಂದ್ರವಾದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ  ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ.

ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನೀಟ್‌ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದ ಅವಿಷ್ಕರ್ ಶುಭಾಂಗಿ ಮತ್ತು  ಬಿಹಾರದ ವಿದ್ಯಾರ್ಥಿ ಆದರ್ಶ್ ಆತ್ಮಹತ್ಯೆ ಮಾಡಿಕೊಂಡವರು.

ಅವಿಷ್ಕರ್ ಶುಭಾಂಗಿ ಮಹಾರಾಷ್ಟ್ರ ಮೂಲದವರಾಗಿದ್ದು, ಕೋಟಾದಲ್ಲಿ ತನ್ನ ಅಜ್ಜಿಯೊಂದಿಗೆ ನೆಲೆಸಿದ್ದರು. ಪರೀಕ್ಷೆ ಬರೆದ ಬಳಿಕ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಆರನೇ ಮಹಡಿಯಿಂದ ಜಿಗಿದಿದ್ದ ಅವಿಷ್ಕರ್  ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು  ಪೊಲೀಸರು ತಿಳಿಸಿದ್ದಾರೆ.

ಸಂಜೆ ಕೋಟಾದ ಕುಣಡ್ಡಿಯಲ್ಲಿ ಬಿಹಾರ ಮೂಲದ ವಿದ್ಯಾರ್ಥಿ ಆದರ್ಶ್ ನೇಣು ಬಿಗಿದು  ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರಿಂದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸಂಖ್ಯೆ ಈ ವರ್ಷ  23 ಕ್ಕೆ  ಏರಿಕೆಯಾಗಿದೆ. ಕಳೆದ ವಾರ  ಜ್ವರದ 15 ಮಾತ್ರೆಗಳನ್ನು ಸೇವಿಸಿದ ನಂತರ ವಿದ್ಯಾರ್ಥಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದನು. ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ನಂತರ ಅವರು ಖಿನ್ನತೆಗೆ ಒಳಗಾಗಿದ್ದ ಎಂದು ಅವರ ಸ್ನೇಹಿತ ಹೇಳಿದ್ದಾರೆ.

ಕೋಟಾದಲ್ಲಿನ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ  ಬಾಲ್ಕನಿಗಳಲ್ಲಿ  ಬಲೆಗಳನ್ನು ಅಳವಡಿಸಲಾಗುತ್ತಿದೆ.  ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇಡುವ ಜೊತೆಗೆ ಕೌನ್ಸಿಲಿಂಗ್ ಕೂಡ ಮಾಡಲಾಗುತ್ತಿದೆ.

ಕೋವಿಡ್ ಬಳಿಕ ಕೋಟಾದಲ್ಲಿ ಆತ್ಮಹತ್ಯೆಗಳು ಶೇಕಡಾ 60 ರಷ್ಟು ಹೆಚ್ಚಾಗಿದೆ ಎಂದು ಇತ್ತೀಚಿನ ಡೇಟಾ ತೋರಿಸುತ್ತಿದೆ ಎಂದು ಎನ್ ಡಿಟಿವಿ ವರದಿ  ಮಾಡಿದೆ.

 ಇದನ್ನು ಓದಿ: ಮಹಾರಾಷ್ಟ್ರ; ನಾಲ್ವರು ದಲಿತ ಯುವಕರನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಥಳಿತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...