Homeಕರ್ನಾಟಕಬೆಂಗಳೂರು| ಮುಸ್ಲಿಂ ಯುವಕರ ಮೇಲೆ ಹಲ್ಲೆ, ಜೈ ಶ್ರೀರಾಮ್ ಹೇಳುವಂತೆ ಒತ್ತಾಯ: ಆರೋಪ

ಬೆಂಗಳೂರು| ಮುಸ್ಲಿಂ ಯುವಕರ ಮೇಲೆ ಹಲ್ಲೆ, ಜೈ ಶ್ರೀರಾಮ್ ಹೇಳುವಂತೆ ಒತ್ತಾಯ: ಆರೋಪ

- Advertisement -
- Advertisement -

ಬೆಂಗಳೂರಿನ ಸಂಪಿಗೆಹಳ್ಳಿ ಪ್ರದೇಶದಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಹಲ್ಲೆ ನಡೆಸಿದ ಗುಂಪೊಂದು, ‘ಜೈಶ್ರೀರಾಮ್’ ಹೇಳುವಂತೆ ಒತ್ತಾಯಿಸಿರುವ ಆರೋಪ ಕೇಳಿ ಬಂದಿದೆ.

ಉತ್ತರ ಬೆಂಗಳೂರಿನ ಸಂಪಿಗೆಹಳ್ಳಿ ಪ್ರದೇಶದಲ್ಲಿ ಜೂನ್ 22ರಂದು ಭಾನುವಾರ ಘಟನೆ ನಡೆದಿದೆ. ಸುಮಾರು ಏಳು ಮಂದಿಯ ಗುಂಪು ಹಲ್ಲೆ ನಡೆಸಿದೆ. ಇದರಿಂದ ಹೆಗ್ಡೆ ನಗರದ ಮೆಕ್ಯಾನಿಕ್ ವಸೀಮ್ ಅಹ್ಮದ್ ಎಂಬಾತ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು thenewsminute.com ವರದಿ ಮಾಡಿದೆ.

ವಸೀಮ್ ಜೊತೆಗಿದ್ದ ಸಹ ಮೆಕ್ಯಾನಿಕ್ ಝಮೀರ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಾಗಿದೆ. ಇಬ್ಬರು ಸಂಪಿಗೆಹಳ್ಳಿ ಮುಖ್ಯ ರಸ್ತೆ ಮೂಲಕ ಚೊಕ್ಕನಹಳ್ಳಿಗೆ ಪ್ರಯಾಣಿಸುತ್ತಿದ್ದಾಗ ಸಂಜೆ 4.30 ರಿಂದ 5.30 ರ ನಡುವೆ ಹಲ್ಲೆ ನಡೆದಿದೆ ಎಂದು ಝಮೀರ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

“ನಾವು ಆಟೋ ನಿಲ್ಲಿಸಿದ್ದಾಗ ಅಲ್ಲಿಗೆ ಬಂದ ಐದಾರು ಮಂದಿಯ ಗುಂಪು, ನೀವೇಕೆ ಇಲ್ಲಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ವಸೀಮ್ ಅವರಿಗೆ ಮರುಪ್ರಶ್ನೆ ಹಾಕಿದ್ದಾರೆ. ಈ ವೇಳೆ ಆ ಗುಂಪು ವಸೀಮ್‌ಗೆ ಥಳಿಸಲು ಪ್ರಾರಂಭಿಸಿದೆ. ವಸೀಮ್ ನೋವು ಮತ್ತು ಭಯದಿಂದ ‘ಅಲ್ಲಾಹ್’ ಎಂದಾಗ, ಅವರು ಬೆದರಿಸಿದರು. ಜೈಶ್ರೀರಾಮ್ ಕೂಗುವಂತೆ ಒತ್ತಾಯಿಸಿದರು. ನಾನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದೆ. ಆದರೆ, ಅವರು ವಸೀಮ್ ಮೇಲೆ ಕೋಲಿನಿಂದ ಹಲ್ಲೆ ನಡೆಸುತ್ತಿದ್ದರು” ಎಂದು ಝಮೀರ್ ದೂರಿನಲ್ಲಿ ತಿಳಿಸಿದ್ದಾಗಿ thenewsminute.com ವಿವರಿಸಿದೆ.

ಘಟನೆ ಸಂಬಂಧ ಸಂಪಿಗೆಹಳ್ಳಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115(2), 118(1), 299, 352 ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದಿದೆ.

ಆರೋಪ ಅಲ್ಲಗಳೆದ ಪೊಲೀಸರು

ಜೈಶ್ರೀರಾಮ್ ಕೂಗುವಂತೆ ಒತ್ತಾಯಿಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪವನ್ನು ಪೊಲೀಸರು ಅಲ್ಲಗಳೆದಿದ್ದಾರೆ ಎಂದು deccanherald.com ವರದಿ ಮಾಡಿದೆ.

ದೂರಿನಲ್ಲಿ ಜೈಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿರುವ ಬಗ್ಗೆ ಉಲ್ಲೇಖಿಸಿಲ್ಲ. ಘಟನಾ ಸ್ಥಳದ ಹತ್ತಿರದಲ್ಲಿ ಇದ್ದ ಭದ್ರತಾ ಸಿಬ್ಬಂದಿ ಸೇರಿದಂತೆ ಮೂವರು ಸಾಕ್ಷಿಗಳು ಹಲ್ಲೆ ನಡೆಸಿದವರು ಜೈಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿರುವ ಬಗ್ಗೆ ಖಚಿತಪಡಿಸಿಲ್ಲ ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಸಜೀತ್ ವಿ.ಜೆ ಹೇಳಿದ್ದಾಗಿ ವರದಿ ತಿಳಿಸಿದೆ.

“ನಾವು ಇನ್ನೂ ವಿವರಗಳನ್ನು ಖಚಿತಪಡಿಸಿಕೊಳ್ಳುತ್ತಿದ್ದೇವೆ. ಆದರೆ, ಪ್ರಾಥಮಿಕ ತನಿಖೆಯಲ್ಲಿ ವೈರಲ್ ವಿಡಿಯೋದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಮಾಡಿರುವ ಆರೋಪಗಳು ತಾಳೆಯಾಗಿಲ್ಲ.
ನಾವು ಅವರ ವಿಡಿಯೋ ಹೇಳಿಕೆಯನ್ನು ಕೂಡ ಪಡೆದುಕೊಂಡಿದ್ದೇವೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾಗಿ deccanherald.com ಹೇಳಿದೆ.

ಡಿಸಿಪಿ ಪ್ರಕಾರ, ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರೂ ಸ್ಥಳೀಯ ನಿವಾಸಿಗಳಾಗಿದ್ದು, ಘಟನೆಗೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದಿದೆ.

ಚಾಮರಾಜನಗರ | ಅಡುಗೆ ಸಿಬ್ಬಂದಿ ದಲಿತೆ ಎಂಬ ಕಾರಣಕ್ಕೆ ಮಕ್ಕಳನ್ನು ಶಾಲೆಗೆ ಕಳಿಸದ ಪೋಷಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...