Homeಮುಖಪುಟಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು...

ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ

- Advertisement -
- Advertisement -

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಈ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಡಾಕ್ಯುಮೆಂಟರಿ ಎಂಬ ಖ್ಯಾತಿಗೂ ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಾತ್ರವಾಗಿದೆ.  ಮತ್ತೊಂದು, ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಾಣದಲ್ಲಿ ಈ ಕಿರು ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ಎರಡು ಆನೆಗಳು ಮತ್ತು ಅವುಗಳ ಪಾಲಕರ ನಡುವಿನ ಅವಿನಾಭಾವ ಸಂಬಂಧವನ್ನು ಅಮೋಘವಾಗಿ ಚಿತ್ರಿಸಲಾಗಿದೆ.

 

ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ನಿರ್ಮಿಸಲಾದ ಈ ಸಾಕ್ಷ್ಯಚಿತ್ರದಲ್ಲಿ ಸ್ಥಳೀಯ ದಂಪತಿಗಳಾದ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ. ಈ ಸಾಕ್ಷ್ಯಚಿತ್ರವು ಆನೆ ಮತ್ತು ಆ ದಂಪತಿ ನಡುವೆ ಬೆಳೆಯುವ ಬಾಂಧವ್ಯವನ್ನು ಮಾತ್ರವಲ್ಲದೆ ಅವರ ಸುತ್ತಮುತ್ತಲಿನ ನೈಸರ್ಗಿಕ ಸೌಂದರ್ಯ ವರ್ಣಿಸುವ ಕಥೆಯಾಗಿದೆ. ಇದು ನೆಟ್‌ಫ್ಲಿಕ್ಸ್ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಜೊತೆಗೆ ‘ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್’ ಫಿಲ್ಮ್’ ವಿಭಾಗದಲ್ಲಿ ‘ಹಾಲ್‌ ಔಟ್’, ‘ಹೌ ಡು ಯು ಮೆಷರ್‌ ಎ ಈಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’, ‘ಸ್ಟ್ರೇಂಜರ್ ಅಟ್ ದಿ ಗೇಟ್’ ಸಾಕ್ಷ್ಯಚಿತ್ರಗಳು ನಾಮನಿರ್ದೇಶನಗೊಂಡಿದ್ದವು. ಅಂತಿಮವಾಗಿ ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಿಚಿತ್ರವು ಪ್ರಶಸ್ತಿ ಪಡೆಯುವಲ್ಲಿ ಸಫಲವಾಗಿದೆ.

ಇದನ್ನೂ ಓದಿ: ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

‘ಹೌಲೌಟ್’, ‘ಹೌ ಡು ಯು ಮೆಷರ್ ಎ ಇಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’ ಮತ್ತು ‘ಸ್ಟ್ರೇಂಜರ್ ಅಟ್ ದಿ ಗೇಟ್’ ಕಿರು ಚಿತ್ರಗಳೊಡನೆ ಸ್ಪರ್ಧಿಸಿ, ‘ದಿ ಎಲಿಫೆಂಟ್ ವಿಸ್ಪರರ್ಸ್’ ಪ್ರಶಸ್ತಿ ಪಡೆದುಕೊಂಡಿದೆ.

‘ದಿ ಎಲಿಫೆಂಟ್ ವಿಸ್ಪರರ್ಸ್’ ಡಾಕ್ಯುಮೆಂಟರಿಗೆ ನಿರ್ದೇಶನ ಮಾಡಿರುವ ಕಾರ್ತಿಕಿ ಗೊನ್ಸಾಲ್ವೆಸ್ ಅವರು ಮೂಲತಃ ತಮಿಳುನಾಡಿನ ಊಟಿಯವರು. ಡಾಕ್ಯುಮೆಂಟರಿ ಫಿಲ್ಮ್‌ ಮೇಕರ್ ಆಗಿರುವ ಕಾರ್ತಿಕಿ, ಉತ್ತಮ ಫೋಟೋಗ್ರಾಫರ್ ಕೂಡ ಹೌದು. ಈ ಹಿಂದೆ ಕ್ಯಾಮೆರಾ ಅಪರೇಟರ್ ಆಗಿ ಅನಿಮಲ್ ಪ್ಲಾನೆಟ್ ಮತ್ತು ಡಿಸ್ಕವರಿ ಚಾನೆಲ್‌ಗಳಿಗೆ ಕಾರ್ತಿಕಿ ಕೆಲಸ ಮಾಡಿದ್ದಾರೆ. ಇದೀಗ 41 ನಿಮಿಷಗಳ ‘ದಿ ಎಲಿಫೆಂಟ್ ವಿಸ್ಪರರ್ಸ್’ ಮೂಲಕ ಆಸ್ಕರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಆ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ.

RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ

ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಸಿಕ್ಕಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’,’ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು  ಪ್ರಶಸ್ತಿಗೆ ಪೈಪೋಟಿ ನಡೆಸಿದ್ದವು, ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

ಸಮಾರಂಭದಲ್ಲಿ ಈ ನಾಟು ನಾಟು ಹಾಡಿಗೆ ಪ್ರಶಸ್ತಿ ಸಿಕ್ಕಿದೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯ ಸದ್ದು ಜೋರಾಗಿತ್ತು. ಭಾರತದಲ್ಲೂ ರಾಮ್ ಚರಣ್ ಮತ್ತು ಜ್ಯೂನಿಯರ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ಕೋರುತ್ತಿದ್ದಾರೆ.

ಈ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ  ಈ ಕಾರ್ಯಕ್ರಮದ ನಿರೂಪಣೆ ಮಾಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...