Homeಕರ್ನಾಟಕರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಇಲ್ಲಿ ಸಮಸ್ಯೆ ಕಾಣಿಸಿಕೊಳ್ಳುವ ಬಗ್ಗೆ ತಜ್ಣರು ಎಚ್ಚರಿಸಿದ್ದರೂ ಸರ್ಕಾರ ನಿರ್ಲಕ್ಷ್ಯ ಮಾಡಿದೆ-ಎಚ್.ಡಿಕುಮಾರಸ್ವಾಮಿ

- Advertisement -
- Advertisement -

ಕೊರೊನಾ ಎರಡನೇ ಅಲೆ ನಡುವೆ ಬ್ಲಾಕ್​​ ಫಂಗಸ್​​ ಕೂಡ ದೇಶದ ಜನರನ್ನು ಹಿಂಸಿಸುತ್ತಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಬ್ಲಾಕ್ ಫಂಗಸ್ ರೋಗದ ಪ್ರಕರಣಗಳಿದ್ದರೂ ಇತರ ರಾಜ್ಯಗಳಲ್ಲೂ ಹಲವು ಕೇಸ್ ದಾಖಲಾಗುತ್ತಿವೆ. ರಾಜ್ಯದಲ್ಲಿ ಭಾನುವಾರ ಇಬ್ಬರು ಈ ರೋಗಕ್ಕೆ ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಹಲವಾರು ಬ್ಲಾಕ್​ ಫಂಗಸ್ ಕೇಸ್‌​ಗಳು ಕಂಡು ಬಂದ ಬೆನ್ನಲ್ಲೇ 64 ವರ್ಷದ ವೃದ್ಧ ಹಾಗೂ 57 ವರ್ಷದ ಮಹಿಳೆ ಬ್ಲಾಕ್​ ಫಂಗಸ್​ನಿಂದ ಮೃತಪಟ್ಟಿರುವುದು ರಾಜ್ಯದ ಜನರನ್ನು ಆತಂಕಕ್ಕೆ ದೂಡಿದೆ. ಚಿಕ್ಕಪೇಟೆ ಹಾಗೂ ಕೊಟಾಲಂ‌ ನಿವಾಸಿಗಳಾದ ಮೃತರು ಕೊರೊನಾ ಸೋಂಕಿಗೆ ಒಳಗಾಗಿ, ನಂತರ ಈ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 14 ಮಂದಿಯಲ್ಲಿ ಬ್ಲಾಕ್ ಫಂಗಸ್ ಕಾಣಿಸಿಕೊಂಡಿದೆ. ಇಬ್ಬರು ಮೃತಪಟ್ಟಿದ್ದು, 5 ಮಂದಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 7 ಮಂದಿಗೆ ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕಳೆದ ವಾರ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ 38 ಮಂದಿಯಲ್ಲಿ ಈ ರೋಗ ಪತ್ತೆಯಾಗಿದೆ.

ಇದನ್ನೂ ಓದಿ: ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ಈ ಬ್ಲಾಕ್​ ಫಂಗಸ್ ರೋಗಕ್ಕೆ ನೀಡುವ ಲಿಪೋಸೋಮಲ್ ಆಂಪೋಟೆರಿಸಿನ್ ಬಿ (Liposomal Amphotericin B) ಔಷಧದ ಕೊರತೆ ಹೆಚ್ಚಾಗಿದೆ ಎಂಬುದನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಒಪ್ಪಿಕೊಂಡಿದ್ದಾರೆ.

“ರಾಜ್ಯ ಸರ್ಕಾರ ಈಗಾಗಲೇ 20 ಸಾವಿರ ವಯಲ್​ಗಳಷ್ಟು ಬ್ಲಾಕ್ ಫಂಗಸ್ ಔಷಧ ಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದಗೌಡರ ಜೊತೆ ಸಂಪರ್ಕದಲ್ಲಿ ಇದ್ದೇನೆ. ಕೇಂದ್ರ ಆರೋಗ್ಯ ಸಚಿವರ ಜೊತೆಯೂ ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾರೂ ಆತ‌ಂಕ ಪಡೋ ಅಗತ್ಯ ಇಲ್ಲ” ಎಂದು ಆರೋಗ್ಯ ಸಚಿವ ಸುಧಾಕರ್‌ ತಿಳಿಸಿದ್ದಾರೆ.

“ರಾಜ್ಯದಲ್ಲಿ ಎಷ್ಟು ಜನ ಬ್ಲಾಕ್ ಫಂಗಸ್ ಪ್ರಕರಣ ದಾಖಲಾಗಿದೆ. ಎಷ್ಟು ಜನ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ನಿಖರ ಮಾಹಿತಿಯಿಲ್ಲ. ಖಾಸಗಿ ಆಸ್ಪತ್ರೆಯಲ್ಲಿಯೂ ಅನೇಕರು ದಾಖಲಾಗಿದ್ದಾರೆ, ಹೀಗಾಗಿ ಖಚಿತ ಮಾಹಿತಿ ಲಭ್ಯವಿಲ್ಲ. ಇದಕ್ಕಾಗಿ ನಾವು ತಜ್ಞರ ಸಮಿತಿ ರಚನೆ ಮಾಡ್ತಿದ್ದೇವೆ. ಅಂಕಿ ಅಂಶಗಳು, ಚಿಕಿತ್ಸೆ ವಿಧಾನದ ಬಗ್ಗೆ ಸಮಿತಿ ನಮಗೆ ಮಾರ್ಗದರ್ಶನ ಈ ಸಮಿತಿ ನೀಡುತ್ತೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ಪೋಸ್ಟ್ ವಿರುದ್ಧ ಬಿಜೆಪಿ ದೂರು: ಮಣಿಪುರದಲ್ಲಿ ಇಬ್ಬರ ಬಂಧನ

ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಇಲ್ಲಿಯೂ ಸಮಸ್ಯೆ ಕಾಣಿಸಿಕೊಳ್ಳುವ ಬಗ್ಗೆ ತಜ್ಣರು ಎಚ್ಚರಿಸಿದ್ದರೂ ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಪ್ಪು ಶಿಲೀಂಧ್ರ ಸಮಸ್ಯೆ ದೊಡ್ಡದಾಗುವ ಎಚ್ಚರಿಕೆಗಳಿದ್ದರೂ ಔಷಧದ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಔಷಧ ಸಂಗ್ರಹ ಈ ಹೊತ್ತಿನ ಅಗತ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಕಪ್ಪು ಶಿಲೀಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ 1,050 ವಾಯ್ಲ್‌ಗಳು (ಶೀಶೆ) ಮಾತ್ರ ಇವೆ ಎಂಬ ಆಘಾತಕಾರಿ ಅಂಶವು ಭಯ ಸೃಷ್ಟಿಸಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಚಿಕಿತ್ಸೆ, ಲಸಿಕೆ ಪಡೆಯಲು ಆಧಾರ್‌ ಕಾರ್ಡ್ ಕಡ್ಡಾಯವಲ್ಲ- UIDAI

“ಬ್ಲಾಕ್ ಫಂಗಸ್ ಸಮಸ್ಯೆ ರಾಜ್ಯದಲ್ಲಿ ಈಗಾಗಲೇ ಗಂಭೀರ ಸ್ವರೂಪದಲ್ಲೇ ಕಾಣಿಸಿಕೊಂಡಿದೆ. ಹಲವರು ಬಲಿಯಾಗಿದ್ದಾರೆ. ಕೋವಿಡ್‌ನಿಂದ ಗುಣವಾಗುವ 400 ಮಂದಿ ಪ್ರತಿ ವಾರ ಈ ಸಮಸ್ಯೆಗೆ ಸಿಲುಕುವ ಸಾಧ್ಯತೆಯನ್ನು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ತಿಳಿಸಿದೆ. ಹೀಗಿರುವಾಗ ಎದುರಾಗಿರುವ ಔಷಧ ಕೊರತೆ ದುರಂತದ ಮುನ್ಸೂಚನೆ ನೀಡುತ್ತಿದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

“Liposomal Amphotericin B ಔಷಧಿಯ 20,000 ವಯಲ್‌ಗಳನ್ನು ಶೀಘ್ರವೇ ಪೂರೈಕೆ ಮಾಡುವಂತೆ ರಾಜ್ಯ ಔಷಧ ಉಗ್ರಾಣ ಕೇಂದ್ರವು ಕೇಂದ್ರ ಸರ್ಕಾರವನ್ನು ಕೋರಿದೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮೇಲೆ ಒತ್ತಡ ತಂದು ಅಗತ್ಯ ಪ್ರಮಾಣದ ಔಷಧಗಳನ್ನು ತರಿಸಿಕೊಳ್ಳುವುದರತ್ತ ಗಮನಹರಿಸಬೇಕು. ಇಲ್ಲವಾದಲ್ಲಿ ಮತ್ತೊಂದು ಭೀಕರತೆಗೆ ಜನ ಸಿಲುಕುವ ಅಪಾಯವಿದೆ” ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಮೇ 24 ಬಳಿಕ ಲಾಕ್‌ಡೌನ್ ವಿಸ್ತರಣೆಯಾಗಬೇಕು- ಕಂದಾಯ ಸಚಿವ ಆರ್‌.ಅಶೋಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...