Homeಕರ್ನಾಟಕಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ: ಯಾವ ಜಿಲ್ಲೆಗಳಲ್ಲಿ ಯಾವಾಗ ಚುನಾವಣೆ ಇಲ್ಲಿದೆ ಮಾಹಿತಿ...

ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ: ಯಾವ ಜಿಲ್ಲೆಗಳಲ್ಲಿ ಯಾವಾಗ ಚುನಾವಣೆ ಇಲ್ಲಿದೆ ಮಾಹಿತಿ…

- Advertisement -
- Advertisement -

ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ದೇಶದಾದ್ಯಂತ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್‌4 ರಂದು ಫಲಿತಾಂಶ ಪ್ರಕಟವಾಗಲಿದೆ.

ಇಂದಿನಿಂದಲೇ ಅಂದರೆ ಮಾ.16ರಿಂದ ದೇಶದಾದ್ಯಂತ ನೀತಿ ಸಂಹಿತೆ ಜಾರಿಯಾಗಲಿದ್ದು, ಏಪ್ರಿಲ್ 26ರಂದು ಮೊದಲ ಹಂತದ ಮತದಾನ ಮತ್ತು ಮೇ 7ರಂದು ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತ್ತು ಇನ್ನುಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಜಿಲ್ಲೆಗಳು: 

ಮೊದಲ ಹಂತದಲ್ಲಿ ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರ ಉತ್ತರ, ಬೆಂಗಳೂರು ದಕ್ಷಿಣ, ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ಕೇಂದ್ರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಕೋಲಾರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದ ಚುನಾವಣೆ ನಡೆಯಲಿರುವ ಜಿಲ್ಲೆಗಳು:

ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರ್ಗಿ, ಬೀದರ್‌, ಧಾರವಾಡ, ಕೊಪ್ಪಳ

ರಾಯಚೂರು, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ 2ನೇ ಹಂತದ ಮತದಾನ ನಡೆಯಲಿದೆ.

ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ಅವರು ಪತ್ರಿಕಾಗೋಷ್ಟಿಯನ್ನು ನಡೆಸಿದ್ದು, ಪತ್ರಿಕಾಗೋಷ್ಟಿಯಲ್ಲಿ ಚುನಾವಣಾ ಆಯುಕ್ತರಾದ ಜ್ಞಾನೇಶ್‌ ಕುಮಾರ್‌ ಮತ್ತು ಸುಖಬೀರ್‌ ಸಂಧು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್‌, ಪ್ರತಿಯೊಂದು ಚುನಾವಣೆ ನಮಗೆ ಪರೀಕ್ಷೆ ಇದ್ದಂತೆ, ನ್ಯಾಯ ಸಮ್ಮತ, ಮುಕ್ತ ಪಾರದರ್ರಶಕ ಚುನಾವಣೆ ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ನಾವು ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ಬದ್ಧರಾಗಿದ್ದೇವೆ. 17ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರ ಪ್ರದೇಶ, ಒಡಿಶಾ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಯ ಅವಧಿ ಕೂಡ ಜೂನ್ 2024 ರಲ್ಲಿ ಅವಧಿ ಮುಗಿಯಲಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದು ಹೇಳಿದ್ದಾರೆ.

10 ಲಕ್ಷದ 5 ಸಾವಿರ ಮತಗಟ್ಟೆಗಳ ರ್ಸತಾಪನೆ ಮಾಡಲಾಗಿದೆ. ದೇಶದಲ್ಲಿ 97 ಕೋಟಿ ಮತದಾರರಿದ್ದಾರೆ. ಮತದಾನಕ್ಕೆ 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗಿದೆ. 1.5ಕೋಟಿ ಅಧಿಕಾರಿಗಳು ಭದ್ರತಾ ಸಿಬ್ಬಂದಿಗಳ ನಿಯೋಜನೆ ಮಾಡಲಾಗುವುದು. 49.7ಕೋಟಿ ಪುರುಷ ಮತದಾರರಿದ್ದಾರೆ. 1.8 ಕೋಟಿ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 47.1ಕೋಟಿ ಮಹಿಳಾ ಮತದಾರರಿದ್ದಾರೆ.  85 ವರ್ಷಕ್ಕಿಂತ ಮೇಲ್ಪಟ್ಟ 82 ಲಕ್ಷ  ಮತದಾರರಿದ್ದಾರೆ. 19.74 ಯುವ ಮತದಾರರಿದ್ದಾರೆ. 12 ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. 2.18 ಲಕ್ಷ ಶತಾಯುಷಿಗಳು ಮತ ಚಲಾಯಿಸಲಿದ್ದಾರೆ. 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪುರುಷ ಮತದಾರರಿಗಿಂತ ಹೆಚ್ಚಿನ ಮಹಿಳೆಯರನ್ನು ಹೊಂದಿವೆ ಎಂದು ಹೇಳಿದ್ದಾರೆ.

ಮತಗಟ್ಟೆಗಳಲ್ಲಿ ವ್ಜೀಲ್ ಚೇರ್‌, ಹೆಲ್ಪ್‌ ಡೆಸ್ಕ್‌ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು,  40%ಕ್ಕೂ ಅಧಿಕ ವಿಕಲಚೇತನ ಮತದಾರರು ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುವುದು. ಅಭ್ಯರ್ಥಿಗಳ ಕ್ರಿಮಿನಲ್ ಕೇಸ್‌ಗಳ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಅಕ್ರಮವಾಗಿ ಹಣ ಸಾಗಿಸಿದರೆ, ಮತದಾರರಿಗೆ ಹಣ ಹಂಚಿಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ಪೊಲೀಸರಿಂದ ಚೆಕ್‌ ಪೋಸ್ಟ್‌ಗಳಲ್ಲಿ ಪರಿಶೀಲನೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಸಿ-ವಿಜಿಲ್ ಆ್ಯಪ್‌ನಲ್ಲಿ ನಾಗರಿಕರು ಯಾವುದೇ ಮತದಾನ ಸಂಬಂಧಿತ ದೂರುಗಳನ್ನು ನೋಂದಾಯಿಸಿಕೊಳ್ಳಬಹುದು. ಪರಿಸ್ಥಿತಿಯನ್ನು ಅವಲೋಕಿಸಲು 100 ನಿಮಿಷಗಳಲ್ಲಿ ಚುನಾವಣಾ ಆಯೋಗ ತಂಡವನ್ನು ಕಳುಹಿಸಲಿದೆ. ಚುನಾವಣಾ ಸಮಯದಲ್ಲಿ ಯಾವುದೇ ಹಿಂಸಾಚಾರ ಸಂಭವಿಸದಂತೆ ಚುನಾವಣಾ ಆಯೋಗವು ಕಾರ್ಯನಿರ್ವಹಿಸುತ್ತಿದೆ, ಪಕ್ಷಗಳು ನೀತಿ ಸಂಹಿತೆಯನ್ನು ಪಾಲಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಸೂರ್ಯಾಸ್ತದ ಬಳಿಕ ಎಟಿಎಂ ವಾಹನ ಸಂಚಾರಕ್ಕೆ ಅನುಮತಿ ಇಲ್ಲ,  ಸುಳ್ಳು ಮಾಹಿತಿಯನ್ನು ರವಾನೆ ಮಾಡುವಂತಿಲ್ಲ, 24 ಗಂಟೆ ಪೊಲೀಸ್‌ ಕಂಟ್ರೋಲ್‌ ರೂಂ ಕಾರ್ಯಾಚರಣೆ ಇರಲಿದೆ, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲಿದ್ದೇವೆ, ಜನರನ್ನು ಪ್ರಚೋದನೆ, ಇಬ್ಬಾಗ ಮಾಡುವಂತಿಲ್ಲ, ದ್ವೇಷ ಭಾಷಣ ಮಾಡುವಂತಿಲ್ಲ, ಸುಳ್ಳು ಜಾಹೀರಾತನ್ನು ಪ್ರಸಾರ ಮಾಡುವಂತಿಲ್ಲ, ವೈಯಕ್ತಿಕ ಟೀಕೆ ಮಾಡುವಂತಿಲ್ಲ ಎಂದು ಹೇಳಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...