Homeಮುಖಪುಟಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು 'ರಿಪಬ್ಲಿಕ್ ಟಿವಿ' ಪತ್ರಕರ್ತರ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

- Advertisement -
- Advertisement -

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ.

ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಇರಾನ್‌ನ ಐರಿಸ್ ದೇನಾ ಯುದ್ಧ ನೌಕೆ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿದ ಹಿನ್ನೆಲೆ, ಮತ್ತೊಂದು ನೌಕೆ ಐರಿಸ್ ಲಾವನ್‌ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿದೆ. ಈ ಪ್ರದೇಶ ಅತಿ ಭದ್ರತಾ ವಲಯವಾಗಿದ್ದು, ಹಾಗಾಗಿ ಅನಧಿಕೃತವಾಗಿ ಇಲ್ಲಿಗೆ ಪ್ರವೇಶಿಸಿದ ಇಬ್ಬರು ಪತ್ರಕರ್ತರು ಮತ್ತು ಅವರನ್ನು ಅಲ್ಲಿಗೆ ಕರೆದೊಯ್ದ ಬೋಟ್ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು onmanorama.com ವರದಿ ಉಲ್ಲೇಖಿಸಿದೆ.

ರಿಪಬ್ಲಿಕ್ ಟಿವಿಯ ವರದಿಗಾರ ಸಿಜಿ ಶಂಕರ್, ಕ್ಯಾಮಾರಾ ಮ್ಯಾನ್ ಎಸ್. ಮಣಿ ಮತ್ತು ಬೋಟ್ ನಡೆಸುವ ಪಿ. ವಿಜಯ್‌ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು thenewsminute.com ವರದಿ ಹೇಳಿದೆ.

ಬಂಧಿತರು ಕೊಚ್ಚಿ ಮೆರೈನ್ ಡ್ರೈವ್‌ನಿಂದ ಬೋಟ್ ಮೂಲಕ ಬಂದರು ಪ್ರದೇಶಕ್ಕೆ ತೆರಳಿ ಇರಾನ್‌ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿರುವುದಾಗಿ ವರದಿ ತಿಳಿಸಿದೆ.

ಬಂದರಿನ ಭದ್ರತೆ ನೋಡಿಕೊಳ್ಳುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ಅನಧಿಕೃತವಾಗಿ ಬೋಟ್ ಪ್ರವೇಶಿಸಿರುವುದನ್ನು ಗಮನಿಸಿ ತಡೆದಿದ್ದಾರೆ. ಬಳಿಕ ಮೂವರನ್ನು ವಿಚಾರಣೆ ನಡೆಸಿ ಹಾರ್ಬರ್ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಬಂದರು ವಲಯದಲ್ಲಿ ಭದ್ರತಾ ನಿರ್ಬಂಧಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪೊಲೀಸರು ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಔಪಚಾರಿಕ ಕಾರ್ಯವಿಧಾನಗಳು ಪೂರ್ಣಗೊಂಡ ನಂತರ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಹಡಗುಗಳು ಮತ್ತು ಕಾರ್ಯತಂತ್ರದ ಸಂಸ್ಥೆಗಳ ದೃಶ್ಯಗಳನ್ನು ಸೆರೆ ಹಿಡಿಯಲು ಅಥವಾ ಪ್ರಕಟಿಸಲು ಭದ್ರತಾ ಸಂಸ್ಥೆಗಳಿಂದ ಪೂರ್ವಾನುಮತಿ ಪಡೆಯಬೇಕು ಎಂದು ಅಧಿಕಾರಿಗಳು ಮಾಧ್ಯಮ ಸಂಸ್ಥೆಗಳಿಗೆ ಸೂಚಿಸಿದ್ದಾರೆ.

ಗೌಪ್ಯತಾ ಕಾಯ್ದೆಯ ಸೆಕ್ಷನ್ 3(1)(ಎ) ಮತ್ತು 5ರ ಅಡಿಯಲ್ಲಿ ಮತ್ತು ಬಿಎನ್‌ಎಸ್ ಕಾಯ್ದೆಯಡಿ ಕ್ರಿಮಿನಲ್ ಅತಿಕ್ರಮಣ ಸೆಕ್ಷನ್‌ ಅಡಿ ಬಂಧಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣ ಎಫ್‌ಐಆರ್ ಪ್ರತಿಯನ್ನು ಪೊಲೀಸರು ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದ್ದರು. ಬಳಿಕ, ಅದನ್ನು ತೆಗೆದು ಹಾಕಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕೊಚ್ಚಿ ನಗರ ಡಿಸಿಪಿ ಅಶ್ವತಿ ಜಿಜಿ, ಆಕಸ್ಮಿಕವಾಗಿ ಎಫ್‌ಐಆರ್ ಪ್ರತಿಯನ್ನು ವೆಬ್‌ಸೈಟ್‌ಗೆ ಅಪ್ಲೋಡ್ ಮಾಡಲಾಗಿತ್ತು. ಪ್ರಕರಣ ಸೂಕ್ಷ್ಮ ಸ್ವರೂಪದಿಂದ ಕೂಡಿರುವ ಹಿನ್ನೆಲೆ, ಅದನ್ನು ತೆಗೆದುಹಾಕಲಾಗಿದೆ ಎಂದು ಹೇಳಿರುವುದಾಗಿ ಆನ್ ಮನೋರಮಾ ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...

ಕುವೈತ್ ವಿದ್ಯುತ್ ಸ್ಥಾವರ, ಉಪ್ಪು ನಿವಾರಣಾ ಘಟಕದ ಮೇಲೆ ಇರಾನ್ ದಾಳಿ: ಭಾರತ ಮೂಲದ ಕಾರ್ಮಿಕ ಸಾವು

ದುಬೈ: ಕುವೈತ್‌ನಲ್ಲಿ ವಿದ್ಯುತ್ ಮತ್ತು ನೀರು ನಿವಾರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸುದ್ದಿ ಸಂಸ್ಥೆ ಕುನಾ ಸೋಮವಾರ ವರದಿ ಮಾಡಿದೆ. ದಾಳಿಯ ಸಮಯದಲ್ಲಿ...