Homeಕರ್ನಾಟಕಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿ ಸೈಬರ್ ಅಪರಾಧ ದ್ವಿಗುಣ

ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿ ಸೈಬರ್ ಅಪರಾಧ ದ್ವಿಗುಣ

- Advertisement -
- Advertisement -

ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಸುಮಾರು ಎರಡು ಪಟ್ಟು ಹೆಚ್ಚಾಗಿ ದ್ವಿಗುಣಗೊಂಡಿದೆ ಎಂದು ವರದಿಯಾಗಿದೆ. 2022 ರಲ್ಲಿ, ಗ್ರಾಮೀಣ ಪ್ರದೇಶಗಳಿಂದ ಒಟ್ಟು 880 ಪ್ರಕರಣಗಳು ವರದಿಯಾಗಿದ್ದು, 2024 ರ ವೇಳೆಗೆ ಇಂತಹ ಪ್ರಕರಣಗಳ ಸಂಖ್ಯೆ 1,600 ಕ್ಕೆ ಏರಿಕೆಯಾಗಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಬುಡಕಟ್ಟು ಪ್ರದೇಶಗಳಲ್ಲಿ 2024 ರಲ್ಲಿ 12 ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿವೆ, 2023 ರಲ್ಲಿ ಒಂದೇ ಪ್ರಕರಣ ದಾಖಲಾಗಿತ್ತು ಮತ್ತು 2022 ರಲ್ಲಿ ಯಾವುದೇ ಪ್ರಕರಣವಿರಲಿಲ್ಲ ಎಂದು ವರದಿಯಾಗಿದೆ.

ಸೈಬರ್ ಅಪರಾಧಗಳ ಹೆಚ್ಚಳಕ್ಕೆ ಡಿಜಿಟಲ್ ಮಾಧ್ಯಮ ಬಳಕೆಯ ಹೆಚ್ಚಳ ಕಾರಣವೆಂದು ತಜ್ಞರು ಹೇಳಿದ್ದಾರೆ. “ಇಂಟರ್ನೆಟ್ ಸಂಪರ್ಕ ಇರುವಲ್ಲೆಲ್ಲಾ, ಸೈಬರ್ ಅಪರಾಧಗಳಿಗೆ ಸಂಭಾವ್ಯತೆ ಇರುತ್ತದೆ” ಎಂದು ಅಪರಾಧ ತನಿಖಾ ಇಲಾಖೆ (ಸಿಐಡಿ) ಡಿಜಿಪಿ ಎಂ ಎ ಸಲೀಮ್ ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಡಿಜಿಟಲ್ ಸೊಸೈಟಿ ಫೌಂಡೇಶನ್‌ನ ಸಂಸ್ಥಾಪಕ ಅಧ್ಯಕ್ಷ ಎನ್.ಎ. ವಿಜಯ್ ಶಂಕರ್ ಮಾತನಾಡಿ, ಸೈಬರ್ ಅಪರಾಧಿಗಳು ಹೆಚ್ಚಾಗಿ ತಮ್ಮ ಬಲಿಪಶುಗಳನ್ನು ಯಾದೃಚ್ಛಿಕವಾಗಿ ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.

“ಅವರು ಯಾದೃಚ್ಛಿಕವಾಗಿ ಸಂಖ್ಯೆಗಳಿಗೆ ಕರೆ ಮಾಡುತ್ತಾರೆ ಮತ್ತು ಯಾರು ಪ್ರತಿಕ್ರಿಯಿಸುತ್ತಾರೋ ಅವರು ಬಲಿಯಾಗುತ್ತಾರೆ. ಆದ್ದರಿಂದ, ಡಿಜಿಟಲ್ ಮಾಧ್ಯಮದ ಬಳಕೆಯು ಹೆಚ್ಚಿದ ಕಾರಣಕ್ಕೆ ಪ್ರಕರಣಗಳ ಹೆಚ್ಚಳವಾಗಿದೆ” ಎಂದು ಅವರು ಹೇಳಿದ್ದಾರೆ.

ಜೊತೆಗೆ ಜಾಗೃತಿ ಹೆಚ್ಚಳ ಮತ್ತು ದೂರುಗಳನ್ನು ದಾಖಲಿಸುವುದು ಸರಳವಾದ್ದರಿಂದ ವರದಿಯಾಗುವ ಪ್ರಕರಣಗಳ ಸಂಖ್ಯೆ ಕೂಡಾ ಇದರ ಹೆಚ್ಚಳಕ್ಕೆ ಕಾರಣವಾಗಿರಬಹುದು ಎಂದು ಅವರು ಹೇಳಿದ್ದಾರೆ.

“ಈಗ, ಬಲಿಪಶುಗಳು ನೇರವಾಗಿ 1930 ಗೆ ಕರೆ ಮಾಡಬಹುದು ಅಥವಾ ಆನ್‌ಲೈನ್‌ನಲ್ಲಿ ದೂರು ನೀಡಬಹುದು. ಈಗ ಇದು ಮೊದಲಿನಂತೆ ಕಷ್ಟಕರವಲ್ಲ. ಆದ್ದರಿಂದ, ಇವುಗಳ ಕಾರಣಕ್ಕೆ ಕೂಡಾ ದೂರುಗಳ ಸಂಖ್ಯೆ ಹೆಚ್ಚಾಗಿರಬಹುದು” ಎಂದು ಶಂಕರ್ ಹೇಳಿದ್ದಾರೆ.

ಅರೆಕಾಲಿಕ ಉದ್ಯೋಗ ವಂಚನೆಗಳು, ಮಾರ್ಫ್ ಮಾಡಿದ ಚಿತ್ರಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡುವುದು ಮತ್ತು ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡುವ ನೆಪದಲ್ಲಿ ಮೋಸ ಮಾಡುವಂತಹ ಸೈಬರ್ ಅಪರಾಧಗಳು ಗ್ರಾಮೀಣ ಪ್ರದೇಶಗಳಲ್ಲಿ ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ವಾಸ್ತವವಾಗಿ, ದೂರುಗಳ ಸ್ವರೂಪವು ನಗರ ಪ್ರದೇಶಗಳಲ್ಲಿರುವ ದೂರುಗಳಂತೆಯೇ ಇರುತ್ತದೆ. ಹೂಡಿಕೆ ಹಗರಣಗಳು, ಅರೆಕಾಲಿಕ ಉದ್ಯೋಗ ಹಗರಣಗಳು ಮತ್ತು ನಗರ ಪ್ರದೇಶಗಳಲ್ಲಿರುವ ದೂರುಗಳಿಗೆ ಹೋಲುವ ವಿಷಯಗಳು ಇವುಗಳಲ್ಲಿ ಇರುತ್ತವೆ” ಎಂದು ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಶಂಕರ್ ಗುಲೇದ್ ಹೇಳಿದ್ದಾರೆ.

ಇತ್ತೀಚೆಗಷ್ಟೆ, ಬೆಳಗಾವಿಯ ಖಾನಾಪುರದಲ್ಲಿ ವೃದ್ಧ ದಂಪತಿಗಳು ಡಿಜಿಟಲ್ ಬಂಧನಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮಾರ್ಚ್ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಈ ದತ್ತಾಂಶವನ್ನು ಮಂಡಿಸಲಾಗಿದೆ. ಜೊತೆಗೆ ಗೃಹ ಇಲಾಖೆಯು ತನ್ನ ಲಿಖಿತ ಉತ್ತರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲು ಹಲವಾರು ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದೆ.

ಶಾಲಾ ಮತ್ತು ಕಾಲೇಜುಗಳಲ್ಲಿ ಜಾಗೃತಿ ಶಿಬಿರಗಳಿಂದ ಹಿಡಿದು ಅಂತಹ ಅಪರಾಧಗಳ ಬಗ್ಗೆ ಮಾಹಿತಿಯೊಂದಿಗೆ ಕರಪತ್ರಗಳ ಹಂಚುವಿಕೆ ಸೇರಿದಂತೆ ಹಲವು ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಇಲಾಖೆ ತನ್ನ ಉತ್ತರದಲ್ಲಿ ಉಲ್ಲೇಖಿಸಿದೆ. ಕಳೆದ ಎರಡು ವರ್ಷಗಳಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...