Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡವನ್ನು ಖಂಡಿಸಿ ಇಸ್ರೇಲ್‌ ರಾಯಭಾರ ಕಚೇರಿಯೆದುರು ಬೆಂಕಿ ಹಚ್ಚಿಕೊಂಡ ಅಮೆರಿಕದ ಅಧಿಕಾರಿ

ಗಾಝಾ ಹತ್ಯಾಕಾಂಡವನ್ನು ಖಂಡಿಸಿ ಇಸ್ರೇಲ್‌ ರಾಯಭಾರ ಕಚೇರಿಯೆದುರು ಬೆಂಕಿ ಹಚ್ಚಿಕೊಂಡ ಅಮೆರಿಕದ ಅಧಿಕಾರಿ

- Advertisement -
- Advertisement -

ಗಾಝಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ನರಹತ್ಯೆಯನ್ನು ಖಂಡಿಸಿ ಅಮೆರಿಕದ ವಾಷಿಂಗ್ಟನ್‌ನಲ್ಲಿರುವ ಇಸ್ರೇಲ್‌ ರಾಯಭಾರ ಕಚೇರಿಯ ಹೊರಗೆ ಅಮೆರಿಕದ ವಾಯು ಪಡೆಯ ಅಧಿಕಾರಿಯೋರ್ವರು ಬೆಂಕಿ ಹಚ್ಚಿಕೊಂಡ ಬಗ್ಗೆ ವರದಿಯಾಗಿದೆ.

ಯುಎಸ್ ಅಧಿಕಾರಿಗಳು ವಾಯುವ್ಯ ವಾಷಿಂಗ್ಟನ್‌ನಲ್ಲಿರುವ ರಾಯಭಾರ ಕಚೇರಿಯ ಹೊರಗೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆಂಕಿಯನ್ನು ನಂದಿಸಿದ್ದಾರೆ ಎಂದು ನಗರದ ಅಗ್ನಿಶಾಮಕ ಇಲಾಖೆಯ ವಕ್ತಾರ ವಿಟೊ ಮ್ಯಾಗಿಯೊಲೊ ಹೇಳಿದ್ದಾರೆ. ಗಂಭೀರ ಗಾಯಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಪ್ರತಿಭನಾಕಾರನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಮತ್ತು ಬೆಂಕಿ ಹಂಚಿಕೊಂಡ ಅಧಿಕಾರಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಅಮೆರಿಕದ ಮಾದ್ಯಮ ವರದಿ ಪ್ರಕಾರ, ಜನಾಂಗೀಯ ಹತ್ಯೆಯಲ್ಲಿ ಭಾಗಿಯಾಗುವುದಿಲ್ಲ, ಪ್ಯಾಲೆಸ್ತೀನ್‌ನ್ನು ಸ್ವತಂತ್ರಗೊಳಿಸಿ ಎಂದು ಘೋಷಣೆ ಕೂಗುತ್ತಾ ಪ್ರತಿಭಟನಾಕಾರ ಬೆಂಕಿಯನ್ನು ಹಚ್ಚಿಕೊಂಡಿದ್ದಾರೆ.  ಆತ್ಮಾಹುತಿಗೆ ಯತ್ನಿಸಿದ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸಲಾಗಿಲ್ಲ, ಅವರು ಟೆಕ್ಸಾಸ್‌ ಮೂಲದ ವಾಯುಪಡೆ ಅಧಿಕಾರಿ ಎಂದು ತಿಳಿದು ಬಂದಿದೆ.

ಪೊಲೀಸರು ಘಟನೆ ಹಿನ್ನೆಲೆ ಇಸ್ರೇಲ್‌ ರಾಯಭಾರಿ ಕಚೇರಿ ಬಳಿ ಅನುಮಾನಾಸ್ಪದ ವಾಹನವನ್ನು ತನಿಖೆ ಮಾಡಿದ್ದಾರೆ. 4 ಗಂಟೆಗೆ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಪೂರ್ಣಗೊಳಿಸಲಾಗಿದೆ ಎಂದು ಪೊಲೀಸ್ ವಕ್ತಾರ ಸೀನ್ ಹಿಕ್ಮನ್ ಹೇಳಿದ್ದಾರೆ. ವಾಷಿಂಗ್ಟನ್‌ನಲ್ಲಿರುವ ಇಸ್ರೇಲ್‌ ರಾಯಭಾರ ಕಚೇರಿಯ ವಕ್ತಾರರಾದ ತಾಲ್ ನೈಮ್ ಪ್ರಕಾರ, ರಾಯಭಾರ ಕಚೇರಿಯ ಯಾವುದೇ ಸಿಬ್ಬಂದಿಗೆ ಗಾಯಗಳಾಗಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.

ಗಾಝಾದ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿಯನ್ನು ನಡೆಸುತ್ತಿದೆ. ಈವೆರೆಗೆ ಇಸ್ರೇಲ್‌ ದಾಳಿಗೆ ಗಾಝಾದಲ್ಲಿ 30,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದ್ದಾರೆ. ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಕ್ರೌರ್ಯವನ್ನು ಇಡೀ ವಿಶ್ವವೇ ಖಂಡಿಸುತ್ತಿದೆ. ಗಾಝಾದಲ್ಲಿ ಕದನ ವಿರಾಮವನ್ನು ಒತ್ತಾಯಿಸುವ ಯುಎನ್‌ಎಸ್‌ಸಿ ಮಂಡಿಸಿದ ಮೂರನೇ ನಿರ್ಣಯವನ್ನು ಕೂಡ ಅಮೆರಿಕ ವಿಟೋ ಅಧಿಕಾರವನ್ನು ಬಳಸಿ ಇತ್ತೀಚೆಗೆ ತಡೆದಿದೆ. ಇದು ಅಮೆರಿಕಾದ ಅಮಾನವೀಯ ಕೃತ್ಯ, ಇಸ್ರೇಲ್‌ ನಡೆಸುತ್ತಿರುವ ನರಮೇಧಕ್ಕೆ ಅಮೆರಿಕ ಪಾಲುದಾರವಾಗಿದೆ ಎಂದು ವಿಶ್ವದ ಬಹುತೇಖ ರಾಷ್ಟ್ರಗಳು ಖಂಡನೆಯನ್ನು ವ್ಯಕ್ತಪಡಿಸಿತ್ತು. ಗಾಝಾದಲ್ಲಿ ನಾಗರಿಕರ ಸಾವಿನ ಸಂಖ್ಯೆ ಏರುತ್ತಲೇ ಇರುವುದರಿಂದ  ವಾಷಿಂಗ್ಟನ್‌ನಲ್ಲಿರುವ ಇಸ್ರೇಲ್‌ ರಾಯಭಾರ ಕಚೇರಿಯ ಮುಂದೆ ನಿರಂತವಾಗಿ ಪ್ರತಿಭಟನೆಗಳು ನಡೆಯುತ್ತಿದೆ.

ಇದನ್ನು ಓದಿ: ಕದನ ವಿರಾಮ ನಿರ್ಣಯ: ಉಲ್ಟಾ ಹೊಡೆದ ಯುಎಸ್‌: ಅಮೆರಿಕದ ಯುದ್ಧ ದಾಹಕ್ಕೆ ಜಗತ್ತಿನ ಹಲವು ರಾಷ್ಟ್ರಗಳು ಖಂಡನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...