Homeಮುಖಪುಟಯಾವುದೇ ವ್ಯಕ್ತಿಯನ್ನು ಭಯೋತ್ಪಾದಕನೆಂದು ಕರೆಯಬಹುದಾದ ಯುಎಪಿಎ ತಿದ್ದುಪಡಿಗೆ ರಾಜ್ಯಸಭೆಯಲ್ಲಿಯೂ ಒಪ್ಪಿಗೆ

ಯಾವುದೇ ವ್ಯಕ್ತಿಯನ್ನು ಭಯೋತ್ಪಾದಕನೆಂದು ಕರೆಯಬಹುದಾದ ಯುಎಪಿಎ ತಿದ್ದುಪಡಿಗೆ ರಾಜ್ಯಸಭೆಯಲ್ಲಿಯೂ ಒಪ್ಪಿಗೆ

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ ತಡೆ (ತಿದ್ದುಪಡಿ) ಮಸೂದೆ (ಯುಎಪಿಎ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) (ತಿದ್ದುಪಡಿ) ಮಸೂದೆಗಳು ಇಂದು ರಾಜ್ಯಸಭೆಯಲ್ಲಿಯೂ ಸಹ ಪಾಸ್ ಆಗಿವೆ. ಮಸೂದೆಯ ತಿದ್ದುಪಡಿಯ ಪರವಾಗಿ 147 ಮತಗಳು ಬಿದ್ದರೆ ವಿರುದ್ಧವಾಗಿ ಕೇವಲ 42 ಮತಗಳು ಬಿದ್ದಿವೆ. ಈ ತಿದ್ದುಪಡಿಯಿಂದಾಗಿ ವ್ಯಕ್ತಿಗಳನ್ನು ಭಯೋತ್ಪಾದಕರೆಂದು ಪರಿಗಣಿಸುವ ಸ್ವಾತಂತ್ರವನ್ನು ಕೇಂದ್ರ ಸರ್ಕಾರ ಪಡೆದುಕೊಂಡಿದೆ.

ಮುಖ್ಯವಾಗಿ ತೃಣಮೂಲ ಕಾಂಗ್ರೆಸ್ಸಿನ ಮಹುವಾ ಮೋಯಿತ್ರಾ ಈ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲವೇ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು, ಈ ಕಾನೂನಿನ ಬಲ ಪಡೆದು ನಡೆಸುವ ತನಿಖೆಯು ಒಕ್ಕೂಟ ವ್ಯವಸ್ಥೆಗೆ ಮಾರಕ ಎಂದಿದ್ದಾರೆ. ಪ್ರತಿ ಪಕ್ಷಗಳು, ಅಲ್ಪಸಂಖ್ಯಾತರು, ಮಾನವ ಹಕ್ಕು ಹೋರಾಟಗಾರರನ್ನು ಈ ಮಸೂದೆ ಗುರಿಯಾಗಿಸಿಕೊಂಡಿದೆ. ಒಂದು ವೇಳೆ ಈ ಜನವಿರೋಧಿ ಮಸೂದೆಯನ್ನು ವಿರೋಧಿಸಿದರೆ ದೇಶದ್ರೋಹಿಗಳು ಎನ್ನುವ ಲೇಬಲ್ ಅಂಟಿಸಿಕೊಳ್ಳಬೇಕಾಗುತ್ತದೆ ಎಂಬ ಭಯದಿಂದ ಈ ಆಕ್ರಮಣವನ್ನು ಯಾರೂ ವಿರೋಧಿಸಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಯುಎಪಿಎ ಕಾಯಿದೆ ಜಾರಿಗೆ ಬಂದಲ್ಲಿ ಕೇಂದ್ರ ಸರಕಾರಕ್ಕೆ ಯಾವುದೇ ಒಬ್ಬ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸುವ ಅಧಿಕಾರ ಬರುತ್ತದೆ. ಬೇರೆ ಕೆಲವು ದೇಶಗಳಲ್ಲಿ ಸರಕಾರಗಳಿಗೆ ಇಂತಹ ಅಧಿಕಾರ ಇದೆಯೆಂದು ಹೇಳುವ ಮೂಲಕ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಈ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅವರ ಪ್ರಕಾರ “ಭಯೋತ್ಪಾದಕ ಸಾಹಿತ್ಯ”ವನ್ನು ಮತ್ತು “ಭಯೋತ್ಪಾದಕ ತತ್ವ”ಗಳನ್ನು ಪ್ರಚಾರ ಮಾಡುವ ವ್ಯಕ್ತಿಗಳನ್ನು ಭಯೋತ್ಪಾದಕರೆಂದು ಘೋಷಿಸಬೇಕು. ಈ ಎರಡು ಪದಗಳ ವ್ಯಾಖ್ಯಾನ ಸ್ಪಷ್ಟವಾಗಿಲ್ಲ.

ಈ ತಿದ್ದುಪಡಿಯು ಯಾವುದೇ ಸಾಕ್ಷ್ಯಾಧಾರ, ವಿಚಾರಣೆ ಅಥವಾ ನ್ಯಾಯಾಂಗದ ಕಣ್ಗಾವಲಿಲ್ಲದೆ ಒಬ್ಬ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸುವ ಅಧಿಕಾರವನ್ನು ಕೇಂದ್ರ ಸರಕಾರಕ್ಕೆ ನೀಡುತ್ತದೆ. ಈ ತಿದ್ದುಪಡಿ ಎಷ್ಟು ಅಸ್ಪಷ್ಟವಾಗಿದೆ ಎಂದರೆ ಯಾವುದೇ ಸಾಹಿತ್ಯವನ್ನು ಬರೆಯುವುದು, ಹೊಂದಿರುವುದು, ಯಾವುದೇ ಸಂಘಟನೆಗೆ ಸೇರುವುದು, ಒಟ್ಟಿನಲ್ಲಿ ಒಂದು ಚಿಂತನಾ ಪ್ರಕ್ರಿಯೆಯನ್ನೇ ಅಪರಾಧೀಕರಣಗೊಳಿಸಬಹುದು. ಇಂತಹ ಒಂದು ಹಣೆಪಟ್ಟಿ ಕಟ್ಟಲಾದರೆ, ಆ ಕಳಂಕವನ್ನು ಅಳಿಸುವುದು ಸಾಮಾನ್ಯ ವ್ಯಕ್ತಿಗೆ ಸಾಧ್ಯವೇ ಇಲ್ಲ. ಮೇಲ್ಮನವಿ ಪ್ರಕ್ರಿಯೆ ಅಷ್ಟು ಸಂಕೀರ್ಣವಾಗಿದೆ.

ಎನ್‍ಐಎ ತಿದ್ದುಪಡಿ ಮಸೂದೆಯು ಸೈಬರ್ ಅಪರಾಧಗಳೂ ಸೇರಿದಂತೆ ಯಾವುದೇ ಪ್ರಕರಣವು ಭಯೋತ್ಪಾದನೆಗೆ ಸಂಬಂಧಿಸಿದೆ ಎಂದು ನಿರ್ಧರಿಸುವ ಅಧಿಕಾರವನ್ನು ಕೇಂದ್ರ ಸರಕಾರಕ್ಕೆ ನೀಡುತ್ತದೆ. ಅದಲ್ಲದೆ ತಾನು ಭಯೋತ್ಪಾದಕ ಎಂದು ಪರಿಗಣಿಸುವ ಯಾವುದೇ ವ್ಯಕ್ತಿಯ ಬೆನ್ನುಹತ್ತಿಹೋಗುವ ಅಧಿಕಾರವನ್ನೂ ಅದು ನೀಡುತ್ತದೆ.

ಭಾರತೀಯ ಸಂವಿಧಾನವು ವಿಧಿ 19ರ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯ, ಸಭೆ ಸೇರುವ, ಸಂಘಟನೆಯ ಸ್ವಾತಂತ್ರ್ಯವನ್ನು ನೀಡಿದೆ. ವಿಧಿ 14 ಸಮಾನತೆಯ ಹಕ್ಕು ನೀಡುತ್ತದೆ. 19 ಮತ್ತು 21ನೇ ವಿಧಿಗಳು ಜೀವದ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕುಗಳನ್ನು ನೀಡುತ್ತದೆ. ಇದನ್ನೇ ಸಂವಿಧಾನತಜ್ಞರು ‘ಸುವರ್ಣ ತ್ರಿಭುಜ’ ಎಂದು ಕರೆದಿದ್ದಾರೆ. ಈ ಮೂಲಭೂತ ಹಕ್ಕುಗಳನ್ನೇ ಕಸಿಯುವ ದಿಕ್ಕಿನಲ್ಲಿ ಇಟ್ಟ ಹೆಜ್ಜೆಗಳೇ ಈ ತಿದ್ದುಪಡಿಗಳು.

ಇಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ಈ ಮಸೂದೆಯು ತಮ್ಮ ವಿರೋಧಿಗಳ ವಿರುದ್ಧ ದುರ್ಬಳಕೆಯಾಗುವ ಆತಂಕವನ್ನು ವ್ಯಕ್ತಪಡಿಸಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅಮಿತ್ ಶಾ ನಾಲ್ಕು ಹಂತದ ಪ್ರಕ್ರಿಯೆಯನ್ನು ಅಳವಡಿಸುತ್ತೇವೆ, ಮಾನವ ಹಕ್ಕು ಕಾರ್ಯಕರ್ತರಿಗೆ ತೊಂದರೆಯಾಗುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...