Homeಮುಖಪುಟ‘ನ್ಯೂಸ್‌ಕ್ಲಿಕ್‌’ ವಿರುದ್ಧ ಯುಎಪಿಎ ಪ್ರಕರಣ: ದೆಹಲಿ ಪೊಲೀಸರಿಂದ ಪತ್ರಕರ್ತರ ಮೇಲೆ ದಿಢೀರ್‌ ದಾಳಿ

‘ನ್ಯೂಸ್‌ಕ್ಲಿಕ್‌’ ವಿರುದ್ಧ ಯುಎಪಿಎ ಪ್ರಕರಣ: ದೆಹಲಿ ಪೊಲೀಸರಿಂದ ಪತ್ರಕರ್ತರ ಮೇಲೆ ದಿಢೀರ್‌ ದಾಳಿ

- Advertisement -
- Advertisement -

ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್‌ ಸುದ್ದಿ ಪೋರ್ಟಲ್‌ಗೆ ಸೇರಿದ ಹಲವಾರು ಪತ್ರಕರ್ತರ ಮನೆಗಳಿಗೆ ದಿಲ್ಲಿ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ.

ಚೀನಾದ ಅಜೆಂಡಾವನ್ನು ಪ್ರಚಾರ ಮಾಡುವ ನೆಟ್‌ವರ್ಕ್‌ನಿಂದ ನ್ಯೂಸ್ ಕ್ಲಿಕ್ ಪೋರ್ಟಲ್ ಹಣವನ್ನು ಪಡೆದಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಆಧರಿಸಿ ದಿಲ್ಲಿ ಪೊಲೀಸರು ಆಗಸ್ಟ್ 17 ರಂದು ಪ್ರಕರಣ ದಾಖಲಿಸಿದ್ದರು.

ದೆಹಲಿ-ಎನ್‌ಸಿಆರ್‌ನ ಸುಮಾರು 20 ಕ್ಕೂ ಸ್ಥಳಗಳಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್‌ನ ಅಧಿಕಾರಿಗಳು ಇಂದು ಶೋಧ ನಡೆಸಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ, ಆದರೆ ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗಳಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ದಾಳಿಗೊಳಗಾದವರಲ್ಲಿ ನ್ಯೂಸ್‌ಕ್ಲಿಕ್ ವೆಬ್‌ಸೈಟ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ, ಪತ್ರಕರ್ತರಾದ ಅಭಿಸರ್ ಶರ್ಮಾ, ಔನಿಂದ್ಯೋ ಚಕ್ರವರ್ತಿ ಮತ್ತು ಭಾಷಾ ಸಿಂಗ್ ಮತ್ತು ವಿಡಂಬನಕಾರ ಸಂಜಯ್ ರಾಜೌರಾ ಸೇರಿದ್ದಾರೆ.

ಈ ಬಗ್ಗೆ ಶರ್ಮಾ ಟ್ವೀಟ್ ಮಾಡಿದ್ದು, ”ಪೊಲೀಸರು ಅವರ ಫೋನ್ ಮತ್ತು ಲ್ಯಾಪ್‌ಟಾಪ್‌ನ್ನು ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.

ಭಾಷಾ ಸಿಂಗ್ ಫೋನ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿರುವ ನ್ಯೂಸ್‌ಕ್ಲಿಕ್‌ನ ಕಚೇರಿಯಲ್ಲೂ ಹುಡುಕಾಟ ನಡೆಯುತ್ತಿದೆ ಎಂದು ವರದಿಯಾಗಿದೆ. ANI ಪ್ರಕಾರ, ಒಟ್ಟಾರೆಯಾಗಿ, 30 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಯುತ್ತಿದೆ.

ನ್ಯೂಸ್‌ಕ್ಲಿಕ್ ಅಮೆರಿಕದ ಮಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್‌ನ ಅವರ ಸುತ್ತ ಕೇಂದ್ರೀಕೃತವಾದ ನೆಟ್‌ವರ್ಕ್‌ನಿಂದ “ಚೀನೀ ಪ್ರಚಾರವನ್ನು” ಪ್ರಪಂಚದಾದ್ಯಂತ ಹರಡಲು ಹಣವನ್ನು ಪಡೆದಿದೆ ಆಗಸ್ಟ್ 5ರಂದು, ನ್ಯೂಯಾರ್ಕ್ ಟೈಮ್ಸ್ ವರದಿಯೊಂದನ್ನು ಪ್ರಕಟಿಸಿತ್ತು.

ಸಿಂಘಮ್ ಅವರು ”ಚೀನೀ ಸರ್ಕಾರಿ ಮಾಧ್ಯಮ ಸಂಸ್ಥೆ’ದೊಂದಿಗೆ ನಿಕಟವಾಗಿ ಕೆಲಸ ಮಾಡಿದರು ಮತ್ತು ವಿವಿಧ ದೇಶಗಳಲ್ಲಿ ಚೀನೀ ಪರವಾಗಿ ಪ್ರಚಾರ ಮಾಡಿದರು ಎಂದು ವರದಿ ಹೇಳಿದೆ.

ಆ ಸಮಯದಲ್ಲಿ, ನ್ಯೂಸ್‌ಕ್ಲಿಕ್ ವೆಬ್‌ಸೈಟ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರು ಚೀನಾದ ಕಮ್ಯುನಿಸ್ಟ್ ಪಕ್ಷದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಂಘಟನೆಯ ಕುರಿತಾದ ಆರೋಪಗಳು ಸುಳ್ಳು ಎಂದು ತಿಳಿಸಿದ್ದರು.

ಇದಕ್ಕೂ ಮುನ್ನ ಜಾರಿ ನಿರ್ದೇಶನಾಲಯವು ನ್ಯೂಸ್ ಪೋರ್ಟಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅದಕ್ಕೆ ಹಣ ನೀಡಿರುವ ಬಗ್ಗೆ ತನಿಖೆ ನಡೆಸಿತ್ತು. ನ್ಯೂಸ್ ಪೋರ್ಟಲ್‌ಗೆ ಸಂಬಂಧಿಸಿದ ಕೆಲವು ಆಸ್ತಿಗಳನ್ನು ಕೇಂದ್ರ ಸಂಸ್ಥೆ ಕೂಡ ಪಟ್ಟಿ ಮಾಡಿತ್ತು.

ಚೀನಾದೊಂದಿಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ನ್ಯೂಸ್ ಪೋರ್ಟಲ್ ಸುಮಾರು ₹ 38 ಕೋಟಿ ಮೊತ್ತವನ್ನು ಪಡೆದಿದೆ ಎಂದು ಇಡಿ ಈ ಹಿಂದೆ ಆರೋಪಿಸಿತ್ತು. ಈ ಮೊತ್ತವನ್ನು ಹೇಗೆ ಬಳಸಲಾಗಿದೆ ಎಂಬುದು ಪರಿಶೀಲನೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

NewsClick ನಿಂದ ಸಂಬಳ ಅಥವಾ ಸಂಭಾವನೆ ಪಡೆದ ಜನರು ಪರಿಶೀಲನೆ ಅಡಿಯಲ್ಲಿದ್ದಾರೆ. ಹೆಚ್ಚಿನ ತನಿಖೆಗಾಗಿ ಇಂದು ಮನೆಗಳನ್ನು ಶೋಧಿಸಿದ ಪತ್ರಕರ್ತರ ಲ್ಯಾಪ್‌ಟಾಪ್ ಮತ್ತು ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹುಡುಕಾಟದ ಕುರಿತು ಹೆಚ್ಚಿನ ಮಾಹಿತಿಯನ್ನು ನಂತರ ಹಂಚಿಕೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕೋವಿಡ್-19 ಲಸಿಕೆ: ಕ್ಯಾಟಲಿನ್ ಕಾರಿಕೊ, ಡ್ರ್ಯೂ ವೈಸ್‌ಮನ್‌​​ಗೆ ವೈದ್ಯಕೀಯ ನೊಬೆಲ್ ಪುರಸ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

0
ನಮೂನೆ 17ಸಿ ಅಡಿ ಮತಗಟ್ಟೆಗಳಲ್ಲಿ ಚಲಾವಣೆಯಾದ ಮತಗಳ ಅಂಕಿ ಅಂಶಗಳನ್ನು ಒದಗಿಸುವುದು ಕಷ್ಟವೇನಲ್ಲ. ಆದರೆ, ಅದನ್ನು ಮಾಡಲು ಸಮಯ ಹಿಡಿಯುತ್ತದೆ ಎಂದು ಭಾರತೀಯ ಚುನಾವಣಾ ಆಯೋಗವು ಮೇ 17ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. 'ಸಮಯ...