Homeಮುಖಪುಟಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

- Advertisement -
- Advertisement -

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ ಬುಧವಾರ (ಜು.06) ಶೋಧ ನಡೆಸಿದ್ದಾರೆ.

ಆಂಧ್ರಪ್ರದೇಶದ ಗನ್ನವರಂ ಪೊಲೀಸ್ ಠಾಣೆಯ ಅಧಿಕಾರಿಗಳು ಬುಧವಾರ ಸಂಜೆ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ತಂಡದ ಪ್ರಕಾರ, ದಾಳಿಯ ಸಮಯದಲ್ಲಿ ರಾವಣ್ ಅವರ ಪತ್ನಿ ಬಿ. ಅನುಷಾ ಹಾಜರಿದ್ದರು. ದಾಳಿ ಬುಧವಾರ ತಡರಾತ್ರಿಯವರೆಗೆ ನಡೆಯಿತು.

ಲ್ಯಾಪ್‌ಟಾಪ್‌ಗಳು ಮತ್ತು ಹಾರ್ಡ್ಡ್ರೈವ್‌ಗಳಂತಹ ಎಲೆಕ್ಟ್ರಾನಿಕ್ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಜುಲೈ 5 ರಂದು, ರಾವಣ್ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಿ ಜೋಸೆಫ್ ಎಂಬ ನಿಜವಾದ ಹೆಸರು ಹೊಂದಿರುವ ರಾವಣ್, ಪ್ರಸ್ತುತ ಚಂದ್ರಬಾಬು ನಾಯ್ಡು-ಪವನ್ ಕಲ್ಯಾಣ್ ನೇತೃತ್ವದ ಸರ್ಕಾರದ ತೀವ್ರ ಟೀಕಾಕಾರರಾಗಿದ್ದಾರೆ. ನಾಲ್ಕು ದಿನಗಳಲ್ಲಿ ಯೂಟ್ಯೂಬರ್‌ನ ಐದನೇ ಬಂಧನ ಇದು. ಹೈದರಾಬಾದ್ ಮೂಲದ ಯೂಟ್ಯೂಬ್ ಹಾಗೂ ರಾಜಕೀಯ ನಿರೂಪಕ ಕೆ. ವೆಂಕಟರಾಮಿ ರೆಡ್ಡಿ ಅವರೊಂದಿಗೆ ರಾವಣ್‌ ಅವರನ್ನು ಬಂಧಿಸಲಾಯಿತು.

ಜೂನ್ 30 ರಿಂದ, ರಾವಣ್ ಮತ್ತು ಆಂಧ್ರ ಪೊಲೀಸರ ನಡುವೆ ಬೆಕ್ಕು-ಇಲಿಯ ಆಟ ನಡೆಯುತ್ತಿದೆ. ಯೂಟ್ಯೂಬರ್ ಅನ್ನು ಪದೇ ಪದೇ ಬಂಧಿಸಲಾಗುತ್ತಿದೆ, ಅವರು ಜಾಮೀನು ಪಡೆಯುತ್ತಿದ್ದಾರೆ. ಜಾಮೀನಿನ ಬಳಿಕ ಅವರನ್ನು ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗುತ್ತದೆ. ಹೆಚ್ಚಿನ ಪ್ರಕರಣಗಳು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ವಿರುದ್ಧದ ಅವರ ಹೇಳಿಕೆಗಳಿಗೆ ಸಂಬಂಧಿಸಿವೆ.

ರಾವಣ್‌ ಅವರನ್ನು ಮೊದಲು ಪಿಠಾಪುರಂ ಪೊಲೀಸರು ಬಂಧಿಸಿದರು. ಮ್ಯಾಜಿಸ್ಟ್ರೇಟ್ ಅವರಿಗೆ ಸ್ಟೇಷನ್ ಜಾಮೀನು ನೀಡಿದ ನಂತರ, ಅವರನ್ನು ತಕ್ಷಣವೇ ಸರ್ಪವರಂ ಪೊಲೀಸರು ಬಂಧಿಸಿದರು.

ಆ ಪ್ರಕರಣದಲ್ಲಿ ಅವರು ಜಾಮೀನು ಪಡೆದರು, ಅವರನ್ನು ಇನಗುದೂರು ಪೊಲೀಸರು ಮತ್ತು ನಂತರ ಪಾಯಕಾರೋಪೇಟ ಪೊಲೀಸರು ಮತ್ತೆ ಬಂಧಿಸಿದರು. ಜುಲೈ 4 (ಶನಿವಾರ) ಸಂಜೆ ಪಾಯಕಾರೋಪೇಟ ಪ್ರಕರಣದಲ್ಲಿ ಅವರು ಜಾಮೀನು ಪಡೆದರು. ಮನೆಗೆ ಹಿಂದಿರುಗುತ್ತಿದ್ದಾಗ ಅವರನ್ನು ವೇಂಪಡು ಟೋಲ್ ಗೇಟ್‌ನಲ್ಲಿ ಮತ್ತೊಮ್ಮೆ ಬಂಧಿಸಲಾಯಿತು.

ಅವರ ವಿರುದ್ಧ ಯುಎಪಿಎ ಸೆಕ್ಷನ್ 13 (ಕಾನೂನುಬಾಹಿರ ಚಟುವಟಿಕೆಗಳಿಗೆ ಶಿಕ್ಷೆ) ಮತ್ತು ಸೆಕ್ಷನ್ 39 (ಭಯೋತ್ಪಾದಕ ಸಂಘಟನೆಗೆ ಬೆಂಬಲ ನೀಡಿದ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗನ್ನವರಂ ಪ್ರಕರಣದಲ್ಲಿ ಅವರ ಬಂಧನದ ಬಗ್ಗೆ ಅವರ ಪತ್ನಿಗೆ ನೋಟಿಸ್ ನೀಡಲಾಗಿದೆ.

ಎಷ್ಟು ಬಾರಿ ಬಂಧಿಸಲಾಗಿದೆ?

ಜೂನ್ ಮತ್ತು ಜುಲೈ ತಿಂಗಳಲ್ಲಿ ಆಂಧ್ರಪ್ರದೇಶ ಪೊಲೀಸರು ರಾವಣ್ ಅವರನ್ನು ಒಟ್ಟು 5 ಬಾರಿ ಬಂಧಿಸಿದ್ದಾರೆ. ಜೂನ್ 30ರಂದು ಹೈದರಾಬಾದ್‌ನಲ್ಲಿ ಕಾಕಿನಾಡ/ಪಿಠಾಪುರಂ ಪೊಲೀಸರಿಂದ ಅವರ ಮೊದಲನೇ ಬಂಧನವಾಯಿತು.

ಮೊದಲ ಕೇಸ್‌ನಲ್ಲಿ ಜಾಮೀನು ದೊರೆತ ಬೆನ್ನಲ್ಲೇ, ಸರ್ಪಾವರಂ, ಪಾಯಕರಾವ್ ಪೇಟೆ ಮತ್ತು ಮಚಲಿಪಟ್ನಂ ಪೊಲೀಸ್ ಠಾಣೆಗಳಲ್ಲಿ ಸಾಲು ಸಾಲಾಗಿ ದಾಖಲಾದ ಹೊಸ ದೂರುಗಳಿಗೆ ಸಂಬಂಧಿಸಿದಂತೆ ಅವರನ್ನು 2 ಮತ್ತು ಮೂರನೇ ಭಾರಿಗೆ ಮರುಬಂಧಿಸಲಾಯಿತು. ಈ ನಾಲ್ಕೂ ಪ್ರಕರಣಗಳಲ್ಲಿ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿತು.

ಅಂತಿಮವಾಗಿ ಅವರನ್ನು ಐದನೇ ಭಾರಿಗೆ ಯುಎಪಿಎ ಪ್ರಕರಣದ ಅಡಿಯಲ್ಲಿ ಜುಲೈ 5ರಂದು ಬಂಧಿಸಲಾಯಿತು. ಗನ್ನವರಂ ಪೊಲೀಸರು ರಾವಣ್ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದರು.

ಬಂಧನಕ್ಕೆ ಕಾರಣವೇನು?

ಆಂಧ್ರಪ್ರದೇಶದ ಏಲೂರು ನಗರದಲ್ಲಿ ನಡೆದ ‘ದಲಿತ ಕ್ರಿಶ್ಚಿಯನ್ ಸಮರ ಶಂಖಾರಾವಂ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ರಾವಣ್, ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನಸೇನಾ ಮುಖ್ಯಸ್ಥರಾದ ಪವನ್ ಕಲ್ಯಾಣ್ ಹಾಗೂ ಅವರ ಸರ್ಕಾರದ ವಿರುದ್ಧ ನೀಡಿದರೆನ್ನಲಾದ ಹೇಳಿಕೆಗಳ ಕುರಿತು ಜನಸೇನಾ ಮುಖಂಡರು ಸಾಲು ಸಾಲು ದೂರುಗಳನ್ನು ದಾಖಲಿಸಿದ್ದಾರೆ.

ಗನ್ನವರಂ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ, ರಾವಣ್ ಅವರು ತಮ್ಮ ಯೂಟ್ಯೂಬ್ ಚಾನೆಲ್ ಹಾಗೂ ಭಾಷಣಗಳಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಸಿದ್ಧಾಂತವನ್ನು ಬೆಂಬಲಿಸಿ, ಪ್ರಚೋದನಕಾರಿ ಭಾಷಣ ಮಾಡಿ, ಸಶಸ್ತ್ರ ದಂಗೆಯನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಯುಎಪಿಎ (Unlawful Activities Prevention Act) ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಯಿತು.

ರಾವಣ್ ಹಿನ್ನೆಲೆ ಏನು?

ಬಚಲಕೂರಿ ಜೋಸೆಫ್ (ರಾವಣ್) ಅವರು ತೆಲುಗು ರಾಜ್ಯಗಳಲ್ಲಿ ಗುರುತಿಸಿಕೊಂಡಿರುವ ಸಾಮಾಜಿಕ ಹೋರಾಟಗಾರ, ರಾಜಕೀಯ ವಿಶ್ಲೇಷಕ ಮತ್ತು ಯೂಟ್ಯೂಬರ್. ಇವರು ‘ಪ್ರಶ್ನ’ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಮೇಲೆ ಕಟು ವಿಮರ್ಶೆ ಮಾಡುತ್ತಾರೆ. ದಲಿತರು, ಹಿಂದುಳಿದ ವರ್ಗಗಳು, ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕುಗಳ ಪರವಾಗಿದ್ದಾರೆ. ತಳಸಮುದಾಯಗಳ ವಿರುದ್ಧದ ಸರ್ಕಾರದ ನೀತಿಗಳನ್ನು ಪ್ರಶ್ನಿಸುವ ವೀಡಿಯೊಗಳು ಮತ್ತು ಭಾಷಣಗಳಿಂದ ಇವರು ಗುರುತಿಸಿಕೊಂಡಿದ್ದಾರೆ.

ಪವನ್ ಕಲ್ಯಾಣ್ ವಿರುದ್ಧ ನೀಡಿದ ಹೇಳಿಕೆ ಏನು?

ಆಂಧ್ರಪ್ರದೇಶದ ಏಲೂರು ನಗರದಲ್ಲಿ ನಡೆದ ‘ದಲಿತ ಕ್ರಿಶ್ಚಿಯನ್ ಸಮರ ಶಂಖಾರಾವಂ’ ಸಭೆಯಲ್ಲಿ ರಾವಣ್ ಅವರ ಭಾಷಣವೇ ಬಂಧನಕ್ಕೆ ಮುಖ್ಯ ಕಾರಣವಾಯಿತು. ದಲಿತರ ಮೇಲಿನ ದೌರ್ಜನ್ಯ ಮತ್ತು ತಾರತಮ್ಯದ ಕುರಿತು ಮಾತನಾಡಿದ್ದ ಅವರು, ರಾಜ್ಯದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆದಾಗ ಸರ್ಕಾರ ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಮೌನ ವಹಿಸುತ್ತಿದ್ದಾರೆ, ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು.

ಪವನ್ ಕಲ್ಯಾಣ್ ಅವರ ರಾಜಕೀಯ ನಿಲುವುಗಳನ್ನು ಪ್ರಶ್ನಿಸುತ್ತಾ, ಅವರ ವಿರುದ್ಧ ಕೆಲವು ಕಟು ಶಬ್ದಗಳನ್ನು ಬಳಸಿ ವಾಗ್ದಾಳಿ ನಡೆಸಿದರು. ಸನಾತನ ಧರ್ಮದ ಹೆಸರಿನಲ್ಲಿ ದಲಿತರು ಮತ್ತು ಕ್ರಿಶ್ಚಿಯನ್ನರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ವಾದಿಸಿ, ತೆಲುಗು ದೇಶಂ ಪಾರ್ಟಿ (ಟಿಡಿಪಿ), ಜನಸೇನಾ ಮತ್ತು ಬಿಜೆಪಿ ಮೈತ್ರಿ ಸರ್ಕಾರವು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಟೀಕಿಸಿದರು.

ದಲಿತ ಕ್ರಿಶ್ಚಿಯನ್ನರಿಗೆ ಸಿಗಬೇಕಾದ ಶೈಕ್ಷಣಿಕ, ಸಾಮಾಜಿಕ ಮತ್ತು ಮೀಸಲಾತಿ ಹಕ್ಕುಗಳಿಗಾಗಿ ಒಗ್ಗಟ್ಟಾಗಿ ಹೋರಾಡಬೇಕು ಎಂದು ಅವರು ಕಾರ್ಯಕ್ರಮದಲ್ಲಿ ಕರೆ ನೀಡಿದರು. ದಲಿತ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಡೆಗಣಿಸಿದರೆ ಮುಂಬರುವ ದಿನಗಳಲ್ಲಿ ಸರ್ಕಾರ ತೀವ್ರ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಸವಾಲು ಹಾಕಿದರು.

ಈ ಭಾಷಣದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ, ಜನಸೇನಾ ಪಕ್ಷದ ಬೆಂಬಲಿಗರು ಮತ್ತು ನಾಯಕರು ರಾವಣ್ ಅವರ ಮಾತುಗಳು ಹಿಂಸಾಚಾರವನ್ನು ಪ್ರಚೋದಿಸುವಂತಿವೆ ಎಂದು ಸರಣಿ ದೂರುಗಳನ್ನು ದಾಖಲಿಸಿದ್ದಾರೆ. ಉಪಮುಖ್ಯಮಂತ್ರಿಯವರ ತೇಜೋವಧೆ ಮಾಡುತ್ತಿವೆ ಎಂದು ಆರೋಪಿಸಿದ್ದು, ಇದೇ ದೂರುಗಳ ಆಧಾರದ ಮೇಲೆ ಅವರನ್ನು ಸರಣಿ ಬಂಧನಕ್ಕೊಳಪಡಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...