Homeಮುಖಪುಟಕವಿತೆ ಬರೆದಿದ್ದಕ್ಕೆ ಯುಎಪಿಎ ಪ್ರಕರಣ: ಅಸ್ಸಾಂ ಯುವ ಕವಯತ್ರಿ ಪರ ಕೋರ್ಟ್ ತೀರ್ಪು

ಕವಿತೆ ಬರೆದಿದ್ದಕ್ಕೆ ಯುಎಪಿಎ ಪ್ರಕರಣ: ಅಸ್ಸಾಂ ಯುವ ಕವಯತ್ರಿ ಪರ ಕೋರ್ಟ್ ತೀರ್ಪು

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ರಾಜ್ಯ ಪೊಲೀಸರು ಸಲ್ಲಿಸಿದ ಎಲ್ಲಾ ಆರೋಪಗಳಿಂದ ಯುವ ಅಸ್ಸಾಮಿ ಕವಯಿತ್ರಿ ಬಾರ್ಶಶ್ರೀ ಬುರಾಗೊಹೈನ್ ಅವರನ್ನು ಅಸ್ಸಾಂನ ಕೆಳ ನ್ಯಾಯಾಲಯವು ಖುಲಾಸೆಗೊಳಿಸಿದೆ.

ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್ (ಉಲ್ಫಾ) (ಸ್ವತಂತ್ರ) ಬಣದೊಂದಿಗೆ ಸೇರಿ ‘ರಾಷ್ಟ್ರದ ವಿರುದ್ಧ ದಂಗೆಯ ಕೃತ್ಯ’ ಎಸಗಿದ್ದಾರೆ ಎಂದು ರಾಜ್ಯ ಪೊಲೀಸರು ಮಾಡಿರುವ ಆರೋಪವನ್ನು ಮಾರ್ಚ್ 18 ರಂದು ಹೊರಡಿಸಲಾದ ನ್ಯಾಯಾಲಯದ ಆದೇಶದಲ್ಲಿ ತಿರಸ್ಕರಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವ ನಾಗರಿಕರ ಮೇಲೆ ತನ್ನ ಶಿಸ್ತುಕ್ರಮವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 2022ರಲ್ಲಿ ಆರಂಭಿಸಿತು. ಫೇಸ್‌ಬುಕ್‌ನಲ್ಲಿ ಕವಿತೆ ಪ್ರಕಟಿಸಿದ್ದಕ್ಕಾಗಿ 19 ವರ್ಷದ ವಿದ್ಯಾರ್ಥಿನಿಯನ್ನು ಬಂಧಿಸಿತ್ತು. ಉಲ್ಫಾಗೆ ಸೇರಲು ಯುವಜನರಿಗೆ ಈ ಕವಿತೆಯ ಮೂಲಕ ಪ್ರಚೋದಿಸಲಾಗಿದೆ ಎಂದು ಸರ್ಕಾರ ವಾ‌ದಿಸಿತ್ತು.

ಜೋರ್ಹತ್ ಜಿಲ್ಲೆಯ ಡಿಸಿಬಿ ಕಾಲೇಜಿನಲ್ಲಿ ಗಣಿತಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ ಬಾರ್ಶಶ್ರೀ ಬಂಧನ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಅವರನ್ನು ಬಿಡುಗಡೆ ಮಾಡುವಂತೆ ಸಾರ್ವಜನಿಕರು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರಿಗೆ ಮನವಿ ಸಲ್ಲಿಸಿದ್ದರು.

ಆದರೆ ಶರ್ಮಾ ಅವರು, “ನಿಷೇಧಿತ ಶಸ್ತ್ರಸಜ್ಜಿತ ಸಂಘಟನೆಗೆ ಜನರನ್ನು ಸೇರಿಸಲು ಬಾರ್ಶಶ್ರೀ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಲು ಸಾಧ್ಯವೇ? ಹೇಗೆ ಬಿಡುಗಡೆ ಮಾಡಲು ಸಾಧ್ಯ? ಅವರು ಉಲ್ಫಾಗೆ ಹೋದರೆ ಮಾನವ ಬಾಂಬ್ ಆಗಿ ಹಿಂತಿರುಗುತ್ತಾರೆ, ನಮ್ಮನ್ನು ಕೊಲ್ಲುತ್ತಾರೆ” ಎಂದು ಆರೋಪಿಸಿದ್ದರು.

ಬಾರ್ಶಶ್ರೀ ವಿರುದ್ಧ ಎಫ್‌ಐಆರ್ ದಾಖಲಿಸಿದಾಗ, “ಉಲ್ಫಾ ಸ್ವತಂತ್ರ ಸಂಘಟನೆಯು ಸೂಚ್ಯವಾದ ಅನುಮೋದಿಸುವ ಸಾಲುಗಳನ್ನು ಕವಿತೆಯಲ್ಲಿ. ಹೀಗಾಗಿ ಅವರು ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ” ಎಂದು ದೂರಲಾಗಿತ್ತು.

ಇದನ್ನೂ ಓದಿರಿ: ಸಂಸತ್ತಿನ ಮೊದಲ ಮಹಡಿಯಲ್ಲಿ ‘ಮೋದಾನಿ’ ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

ಬಂಧನಕ್ಕೊಳಗಾದ ಎರಡು ತಿಂಗಳ ನಂತರ, ತನ್ನ ಕಾಲೇಜು ಪರೀಕ್ಷೆಗಳನ್ನು ಬರೆಯುವ ಸಲುವಾಗಿ ಬಾರ್ಶಶ್ರೀ ಅವರು ಗೋಲಾಘಾಟ್ ಜಿಲ್ಲೆಯ ಸೆಷನ್ಸ್ ನ್ಯಾಯಾಲಯಕ್ಕೆ ತೆರಳಿದರು. ನ್ಯಾಯಾಲಯವು ಬಾರ್ಶಶ್ರೀ ಪರವಾಗಿ ನಿಂತಿತ್ತು. ಹೀಗಾಗಿ ಜುಲೈ 16, 2022 ರಂದು ಪ್ರಾರಂಭವಾದ ಪರೀಕ್ಷೆಗಳಿಗೆ ಕುಳಿತುಕೊಳ್ಳಲು ಅನುವು ಮಾಡಿಕೊಟ್ಟಿತು.

ಮಾರ್ಚ್ 18ರಂದು ಗೋಲಾಘಾಟ್ ಸೆಷನ್ಸ್ ನ್ಯಾಯಾಲಯವು ಎಲ್ಲಾ ಆರೋಪಗಳಿಂದ ಬಾರ್ಶಶ್ರೀ ಅವರನ್ನು ಖುಲಾಸೆಗೊಳಿಸಿದ ನಂತರ, ಅವರ ಸಹೋದರ ಅರಿಂದೋಮ್ ಬುರ್ಹಾಗೋಹೈನ್ ಅವರು ‘ಇಂಡಿಯಾ ಟುಡೆನೆ’ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, “ನಮಗೆ ನ್ಯಾಯ ಸಿಕ್ಕಿತು, ಅಂತಿಮವಾಗಿ ಸತ್ಯಕ್ಕೆ ಜಯ ಸಂದಿದೆ” ಎಂದಿದ್ದಾರೆ.

ಜುಲೈ 22, 2022 ರಿಂದ ಬಾರ್ಶಶ್ರೀ ಬುರಾಗೊಹೈನ್ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...