HomeಮುಖಪುಟUAPA ಪ್ರಕರಣ: ಬಂಧನ ಪ್ರಶ್ನಿಸಿ ಸುಪ್ರೀಂ​ ಮೆಟ್ಟಿಲೇರಿದ ನ್ಯೂಸ್‌ಕ್ಲಿಕ್ ಸಂಸ್ಥಾಪಕ

UAPA ಪ್ರಕರಣ: ಬಂಧನ ಪ್ರಶ್ನಿಸಿ ಸುಪ್ರೀಂ​ ಮೆಟ್ಟಿಲೇರಿದ ನ್ಯೂಸ್‌ಕ್ಲಿಕ್ ಸಂಸ್ಥಾಪಕ

- Advertisement -
- Advertisement -

ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಂಧನ ಮತ್ತು ಪೊಲೀಸ್‌ ಕಸ್ಟಡಿಯನ್ನು ರದ್ದುಪಡಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಸೋಮವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ನೇತೃತ್ವದ ಪೀಠವು ಪುರ್ಕಾಯಸ್ಥ ಪರ ವಕೀಲ ಕಪಿಲ್ ಸಿಬಲ್ ಅವರಿಗೆ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಸಿಬಲ್, ”ಇದು ನ್ಯೂಸ್‌ಕ್ಲಿಕ್‌ಗೆ ಸಂಬಂಧಿಸಿದ ವಿಷಯವಾಗಿದೆ. ಪತ್ರಕರ್ತರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇಲ್ಲಿ ಆರೋಪಿಗಳಲ್ಲಿ ಒಬ್ಬರು 75 ವರ್ಷದ ವ್ಯಕ್ತಿ ಎಂದು ಸಿಬಲ್ ಪೀಠಕ್ಕೆ ತಿಳಿಸಿದರು.. ತುರ್ತು ವಿಚಾರಣೆಯ ಮನವಿಯನ್ನು ಪರಿಗಣಿಸಲಾಗುವುದು ಎಂದು ಸಿಬಲ್ ಅವರಿಗೆ ನ್ಯಾಯಪೀಠ ಹೇಳಿತು.

ಭಾರತದಲ್ಲಿ ಚೀನಾ ಪರ ಪ್ರಚಾರ ಮಾಡಲು ಹಣ ಸ್ವೀಕರಿಸಿದ ಆರೋಪದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಅಕ್ಟೋಬರ್ 3 ರಂದು ಪುರ್ಕಾಯಸ್ಥ ಮತ್ತು ಚಕ್ರವರ್ತಿಯನ್ನು ಯುಎಪಿಎ ಆರೋಪಗಳ ಅಡಿ ಬಂಧಿಸಿತ್ತು. ಆ ನಂತರದ 7 ದಿನಗಳ ಪೊಲೀಸ್‌ ಕಸ್ಟಡಿಗೆ ಕಳುಹಿಸಲಾಗಿತ್ತು. ಇದರ ವಿರುದ್ಧದ ಮನವಿಯನ್ನು ದೆಹಲಿ ಹೈಕೋರ್ಟ್ ಅಕ್ಟೋಬರ್ 13 ರಂದು ವಜಾಗೊಳಿಸಿತ್ತು.

ನ್ಯೂಸ್‌ಕ್ನಿಕ್ ಚೀನಾದಿಂದ ದೊಡ್ಡ ಮೊತ್ತದ ಹಣವನ್ನು ಸ್ವೀಕರಿಸಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ. ಇದು ಭಾರತದ ಸಾರ್ವಭೌಮತೆಗೆ ಧಕ್ಕೆ ತರಲು ಮತ್ತು ಅದರ ನಾಗರಿಕರ ನಡುವೆ ವೈಷಮ್ಯವನ್ನು ಬಿತ್ತಲು ಉದ್ದೇಶಿಸಿದೆ. 2019ರ ಲೋಕಸಭಾ ಚುನಾವಣೆಯನ್ನು ಹಾಳು ಮಾಡಲು ಪುರ್ಕಾಯಸ್ಥ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ (PADS) ಜತೆ ಸಂಚು ರೂಪಿಸಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಕಾಶ್ಮೀರ ಮತ್ತು ಅರುಣಾಚಲ ಪ್ರದೇಶವನ್ನು ವಿವಾದಿತ ಪ್ರದೇಶಗಳು ಎಂದು ನ್ಯೂಸ್ ಕ್ಲಿಕ್ ಸಂಸ್ಥಾಪಕರು ಜಾಗತಿಕವಾಗಿ ಮತ್ತು ದೇಶೀಯವಾಗಿ ಪ್ರಚಾರ ಮಾಡುತ್ತಿದ್ದಾರೆ ಹಾಗೂ ಭಾರತದ ನಕ್ಷೆಯನ್ನು ತಿರುಚುವ ಮೂಲಕ ಭಾರತದ ಏಕತೆ ಮತ್ತು ಪ್ರಾದೇಶಿಕ ಸಮಗ್ರತೆಯ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ನ್ಯೂಸ್‌ಕ್ಲಿಕ್ ವೆಬ್ಸೈಟ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಅವರ ಸಹಚರರು ಜೋಸೆಫ್ ರಾಜ್, ಅನೂಪ್ ಚಕ್ರವರ್ತಿ (ಅಮಿತ್ ಚಕ್ರವರ್ತಿ ಅವರ ಸಹೋದರ), ಬಪ್ಪಾದಿತ್ಯ ಸಿನ್ಹಾ (ವರ್ಚುವೇಲ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್​ನ ಪ್ರವರ್ತಕ) ಅವರಿಂದ ಅಕ್ರಮವಾಗಿ ಹಣ ಪಡೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಈ ಹಣವನ್ನು ತೀಸ್ತಾ ಸೆಟಲ್ವಾಡ್ ಅವರ ಸಹಚರರಾದ ಗೌತಮ್ ನವ್ಲಾಖಾ, ಜಾವೇದ್ ಆನಂದ್, ತಮಾರಾ, ಜಿಬ್ರಾನ್, ಊರ್ಮಿಲೇಶ್, ಅರಾತ್ರಿಕಾ ಹಲ್ದರ್, ಪರಂಜಯ್ ಗುಹಾ ಠಾಕುರ್ತಾ, ತ್ರಿನಾ ಶಂಕರ್ ಮತ್ತು ಪತ್ರಕರ್ತ ಅಭಿಸಾರ್ ಶರ್ಮಾ ಅವರಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: UAPA ಪ್ರಕರಣ: ನ್ಯೂಸ್‌ಕ್ಲಿಕ್ ಮುಖ್ಯಸ್ಥ, ಹೆಚ್‌ಆರ್‌ಗೆ 10 ದಿನಗಳ ನ್ಯಾಯಾಂಗ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...