HomeಮುಖಪುಟUAPA ಪ್ರಕರಣ: ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಸೇರಿ ಮೂವರ ಬಂಧನ

UAPA ಪ್ರಕರಣ: ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಸೇರಿ ಮೂವರ ಬಂಧನ

- Advertisement -
- Advertisement -

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಇತರ ಇಬ್ಬರನ್ನು ಬಂಧಿಸಲಾಗಿದೆ. ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್‌ ಸುದ್ದಿ ಪೋರ್ಟಲ್‌ಗೆ ಸೇರಿದ ಹಲವಾರು ಪತ್ರಕರ್ತರ ಮನೆಗಳಿಗೆ ದಿಲ್ಲಿ ಪೊಲೀಸರು ಮಂಗಳವಾರದಂದು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದರು.

ಚೀನಾದ ಅಜೆಂಡಾವನ್ನು ಪ್ರಚಾರ ಮಾಡುವ ನೆಟ್‌ವರ್ಕ್‌ನಿಂದ ನ್ಯೂಸ್ ಕ್ಲಿಕ್ ಪೋರ್ಟಲ್ ಹಣವನ್ನು ಪಡೆದಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಆಧರಿಸಿ ದಿಲ್ಲಿ ಪೊಲೀಸರು ಆಗಸ್ಟ್ 17 ರಂದು ಪ್ರಕರಣ ದಾಖಲಿಸಿದ್ದರು.

ಸಧ್ಯ 46ಜನರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಡಿಜಿಟಲ್ ಸಾಧನಗಳು, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದೆಹಲಿ, ನೋಯ್ಡಾ ಮತ್ತು ಘಾಜಿಯಾಬಾದ್‌ನಲ್ಲಿ ನ್ಯೂಸ್‌ಕ್ಲಿಕ್ ಸುದ್ದಿ ವೆಬ್‌ಸೈಟ್‌ಗೆ ಲಿಂಕ್ ಮಾಡಲಾದ 30ಕ್ಕೂ ಹೆಚ್ಚು ಸ್ಥಳಗಳ ಮೇಲೆ ದೆಹಲಿ ಪೊಲೀಸ್ ವಿಶೇಷ ಕೋಶವು ದಾಳಿ ನಡೆಸಿದ ಗಂಟೆಗಳ ನಂತರ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಇತರ ಇಬ್ಬರನ್ನು ಬಂಧಿಸಲಾಗಿದೆ.

ವೆಬ್‌ಸೈಟ್‌ಗೆ ಸಂಬಂಧಿಸಿದ ಪತ್ರಕರ್ತರು ಮತ್ತು ಉದ್ಯೋಗಿಗಳ ನಿವಾಸಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ದಾಳಿಯ ಸಮಯದಲ್ಲಿ, ಲ್ಯಾಪ್‌ಟಾಪ್‌ಗಳು, ಮೊಬೈಲ್ ಫೋನ್‌ಗಳು ಮತ್ತು ಹಾರ್ಡ್ ಡಿಸ್ಕ್‌ಗಳಿಂದ ಡೇಟಾ ಡಂಪ್‌ಗಳು ಸೇರಿದಂತೆ ಗಣನೀಯ ಪ್ರಮಾಣದ ಎಲೆಕ್ಟ್ರಾನಿಕ್ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡರು.

ಪತ್ರಕರ್ತರಾದ ಊರ್ಮಿಲೇಶ್, ಔನಿಂದ್ಯೋ ಚಕ್ರವರ್ತಿ, ಅಭಿಸಾರ್ ಶರ್ಮಾ, ಪರಂಜೋಯ್ ಗುಹಾ ಠಾಕುರ್ತಾ ಹಾಗೂ ಇತಿಹಾಸಕಾರ ಸೊಹೈಲ್ ಹಶ್ಮಿ ಮತ್ತು ಸೆಂಟರ್ ಫಾರ್ ಟೆಕ್ನಾಲಜಿ & ಡೆವಲಪ್‌ಮೆಂಟ್‌ನ ಡಿ ರಘುನಂದನ್ ಅವರ ಮೇಲೆ ಪೊಲೀಸರು ದಾಳಿ ನಡೆಸಿ, ಮೊಬೈಲ್ ಲ್ಯಾಪ್‌ಟಾಪ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅವರ ವಿದೇಶಿ ಪ್ರವಾಸಗಳು, ಶಾಹೀನ್ ಬಾಗ್‌ನಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧದ ಪ್ರತಿಭಟನೆಗಳು ಮತ್ತು ರೈತರ ಆಂದೋಲನ ಸೇರಿದಂತೆ ವಿವಿಧ ವಿಷಯಗಳ ಕುರಿತು ಪೊಲೀಸರು 25 ಪ್ರಶ್ನೆಗಳ ಪಟ್ಟಿಯನ್ನು ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತನಿಖಾ ಸಂಸ್ಥೆಗಳು ಸ್ವತಂತ್ರವಾಗಿರುತ್ತವೆ ಮತ್ತು ಕಾನೂನಿನ ಪ್ರಕಾರ ಕೆಲಸ ಮಾಡುತ್ತವೆ ಎಂದು ಸರ್ಕಾರ ಪ್ರತಿಪಾದಿಸಿದರೂ ಸಹ, ಅಧಿಕಾರಕ್ಕೆ ಸತ್ಯವನ್ನು ಮಾತನಾಡುವವರ ವಿರುದ್ಧ ಮಾತ್ರ “ದಬ್ಬಾಳಿಕೆಯ” ಕ್ರಮಗಳನ್ನು ನಿರ್ದೇಶಿಸಲಾಗಿದೆ ಎಂದು ಆರೋಪಿಸಿ, ಪತ್ರಕರ್ತರ ಮೇಲಿನ ದಾಳಿಗಳ ಕುರಿತು ವಿರೋಧ ಪಕ್ಷಗಳು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿವೆ.

ಇದನ್ನೂ ಓದಿ: ನ್ಯೂಸ್ ಕ್ಲಿಕ್‌ ಪ್ರಕರಣ: ಸೀತಾರಾಂ ಯೆಚೂರಿ ನಿವಾಸದಲ್ಲಿ ಶೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...