HomeಮುಖಪುಟUAPA ಪ್ರಕರಣ: ಜು.24ಕ್ಕೆ ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ

UAPA ಪ್ರಕರಣ: ಜು.24ಕ್ಕೆ ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ

- Advertisement -
- Advertisement -

2020ರ ದೆಹಲಿ ಗಲಭೆಗೆ ಸಂಬಂಧಿಸಿದ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಜಾಮೀನು ಅರ್ಜಿಯನ್ನು ಜುಲೈ 24 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಬುಧವಾರ ಹೇಳಿದೆ.

ದೆಹಲಿ ಹೈಕೋರ್ಟ್‌ ಜಾಮೀನು ನಿರಾಕರಿಸಿ ಆದೇಶ ಹೊರಡಿಸಿದ್ದರು. ಆ ಆದೇಶವನ್ನು ಪ್ರಶ್ನಿಸಿ ಉಮರ್ ಖಾಲಿದ್ ಅವರು ಸುಪ್ರೀಂ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ಈ ಹಿಂದೆ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು. ದೆಹಲಿ ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ವಕೀಲ ರಜತ್ ನಾಯರ್, ಪ್ರಕರಣದ ಚಾರ್ಜ್‌ಶೀಟ್ ಸಾವಿರಾರು ಪುಟಗಳಷ್ಟಿದೆ ಎಂದು ವಾದಿಸಿ, ಈ ವಿಷಯದಲ್ಲಿ ಕೌಂಟರ್ ಅಫಿಡವಿಟ್ ಸಲ್ಲಿಸಲು ಸ್ವಲ್ಪ ಸಮಯಾವಕಾಶವನ್ನು ನೀಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು.

ಖಾಲಿದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ”ಜಾಮೀನು ವಿಚಾರದಲ್ಲಿ ಯಾವ ಕೌಂಟರ್‌ ಸಲ್ಲಿಸಬೇಕು? ಆ ವ್ಯಕ್ತಿ ಎರಡು ವರ್ಷ ಮತ್ತು 10 ತಿಂಗಳಿನಿಂದ ಜೈಲಿನಲ್ಲಿದ್ದಾನೆ ಹೇಳಿದ್ದಾರೆ.

ದೆಹಲಿ ಪೊಲೀಸರು ಪ್ರತಿಕ್ರಿಯೆ ಸಲ್ಲಿಸಲು ಸಮಯ ಕೋರಿದ ನಂತರ ನ್ಯಾಯಮೂರ್ತಿ ಎಎಸ್ ಬೋಪಣ್ಣ ಮತ್ತು ನ್ಯಾಯಮೂರ್ತಿ ಎಂಎಂ ಸುಂದ್ರೇಶ್ ಅವರನ್ನೊಳಗೊಂಡ ಪೀಠವು ಜುಲೈ 24 ರಂದು ಖಾಲಿದ್ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಲು ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಈ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್,”ಉಮರ್ ಖಾಲಿದ್ ಅವರು ಪ್ರಕರಣದ ಇತರ ಸಹ-ಆರೋಪಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಅವರ ವಿರುದ್ಧದ ಆರೋಪಗಳು ಪ್ರಾಥಮಿಕವಾಗಿ ನಿಜವೆಂದು ಹೇಳಿದೆ. ಮೇಲ್ನೋಟಕ್ಕೆ ಪ್ರಕರಣದಲ್ಲಿ ಅವರ ಕ್ರಮಗಳು ಯುಎಪಿಎ ಅಡಿಯಲ್ಲಿ ”ಭಯೋತ್ಪಾದಕ ಕೃತ್ಯ” ಎಂದು ಅರ್ಹತೆ ಪಡೆದಿವೆ” ಎಂದು ಹೈಕೋರ್ಟ್ ಹೇಳಿದೆ.

ಏನಿದು ಪ್ರಕರಣ:

2020ರ ದೆಹಲಿ ಗಲಭೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಆರೋಪಗಳ ಮೇಲೆ ಉಮರ್ ಖಾಲಿದ್ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಫೆಬ್ರವರಿ 24, 2020ರಂದು ಚಾಂದ್ ಬಾಗ್ ಪುಲಿಯಾ ಬಳಿ ದೊಡ್ಡ ಜನಸಮೂಹ ಜಮಾಯಿಸಿ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿತು ಎಂದು ಕಾನ್‌ಸ್ಟೆಬಲ್ ಹೇಳಿದ್ದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್ ಅನ್ನು ಸೆಕ್ಷನ್ 109, 114, 147, 148, 149, 153-ಎ, 186, 212, 353, 395, 427, 435, 436, 452, 454, 505, 34 ಮತ್ತು 120 ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ.

ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯಿದೆಯ 3 ಮತ್ತು 4, ಶಸ್ತ್ರಾಸ್ತ್ರ ಕಾಯಿದೆಯ ವಿಭಾಗ 25 ಮತ್ತು 27ನೇ ಸೆಕ್ಷನ್‌ಗಳನ್ನೂ ಇಲ್ಲಿ ಸೇರಿಸಲಾಗಿದೆ. ಈ ಎಫ್‌ಐಆರ್‌ ಸಂಬಂಧಿಸಿದಂತೆ ಕೋರ್ಟ್ ಆರೋಪ ಮುಕ್ತವನ್ನಾಗಿ ಮಾಡಲಾಗಿದೆ.

ಪ್ರಾಸಿಕ್ಯೂಷನ್ ಪ್ರಕಾರ, ”ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್ ಅವರ ಕಟ್ಟಡವನ್ನು ಗಲಭೆಕೋರರು ಇಟ್ಟಿಗೆ, ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಮತ್ತು ಆಸಿಡ್ ಬಾಂಬ್ ದಾಳಿ ನಡೆಸಲು ಬಳಸಿದ್ದಾರೆ” ಎನ್ನುವುದಾಗಿದೆ.

ಕಟ್ಟಡದ ಮೂರನೇ ಮಹಡಿ ಮತ್ತು ಮೇಲ್ಛಾವಣಿಯಲ್ಲಿ ಈ ವಸ್ತು ಬಿದ್ದಿರುವುದು ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಉಮರ್ ಖಾಲಿದ್ ಅವರು ಜನಸಮೂಹದ ಭಾಗವಾಗಿಲ್ಲದಿದ್ದರೂ, ಉಮರ್‌ ಮತ್ತು ಖಾಲಿದ್ ಸೈಫೀ ಅವರನ್ನು ಪ್ರಕರಣದಲ್ಲಿ ಸೇರಿಸಿ ಕ್ರಿಮಿನಲ್ ಪಿತೂರಿಯ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿ: ಕೇರಳ: ರೈಲಿಗೆ ಬೆಂಕಿ ಹಚ್ಚಿದ್ದ ಆರೋಪಿ ವಿರುದ್ಧ ಯುಎಪಿಎ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...