Homeಮುಖಪುಟಉತ್ತರಖಂಡ: UCC ಮಸೂದೆ ಮಂಡನೆ ವೇಳೆ ಸದನದಲ್ಲಿ ಜೈಶ್ರೀರಾಮ್‌ ಘೋಷಣೆ

ಉತ್ತರಖಂಡ: UCC ಮಸೂದೆ ಮಂಡನೆ ವೇಳೆ ಸದನದಲ್ಲಿ ಜೈಶ್ರೀರಾಮ್‌ ಘೋಷಣೆ

- Advertisement -
- Advertisement -

ಉತ್ತರಖಂಡ ವಿಧಾನ ಸಭೆಯ ವಿಶೇಷ ಅಧಿವೇಶನದಲ್ಲಿ ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ಕುರಿತು ಮಸೂದೆಯನ್ನು ಮಂಡಿಸಲಾಗಿದ್ದು, ಏಕರೂಪ ನಾಗರಿಕ ಸಂಹಿತೆ ಉತ್ತರಾಖಂಡ- 2024 ಮಸೂದೆಯನ್ನು ಮಂಡಿಸುತ್ತಿದ್ದಂತೆ ರಾಜ್ಯ ವಿಧಾನಸಭೆಯೊಳಗೆ ಶಾಸಕರು ವಂದೇ ಮಾತರಂ ಮತ್ತು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಿದ್ದಾರೆ.

ಇತ್ತೀಚೆಗೆ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತ್ವತ್ವದ ಐವರು ಸದಸ್ಯರ ಸಮಿತಿ ಸಲ್ಲಿಸಿದ ಯುಸಿಸಿ ಕುರಿತ ಕರಡು ಸಮಿತಿ ವರದಿಯನ್ನು ಉತ್ತರಖಂಡ ಸರಕಾರ ಸಂಪುಟ ಸಭೆಯಲ್ಲಿ ಅನುಮೋದನೆ  ಪಡೆದುಕೊಂಡಿತ್ತು.

ಏಕರೂಪ ನಾಗರಿಕ ಸಂಹಿತೆ ಪ್ರಸ್ತುತ ಸಮಾಲೋಚನೆಯಲ್ಲಿದೆ ಮತ್ತು ಭಾರತದ ಕಾನೂನು ಆಯೋಗವು ಈ ಬಗ್ಗೆ ಪರಿಶೀಲಿಸುತ್ತಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಸೋಮವಾರ ಹೇಳಿದ್ದರು. ಇದು ಕೇವಲ ಕೇಂದ್ರದ ವಿಷಯವಲ್ಲ, ಸಂವಿಧಾನವನ್ನು ರಚನೆ ವೇಳೆಯೂ ಈ ಬಗ್ಗೆ ಚರ್ಚಿಸಿದ್ದರು. ಇದೀಗ ಈ ವಿಷಯವು ಭಾರತದ ಕಾನೂನು ಆಯೋಗದ ಪರಿಗಣನೆಯಲ್ಲಿದೆ ಮತ್ತು ಸಮಾಲೋಚನೆ ಪ್ರಕ್ರಿಯೆಯಲ್ಲಿದೆ ಎಂದು ಹೇಳಿದ್ದರು.

ಮಸೂದೆಯನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ. ಮದುವೆ ಮತ್ತು ವಿಚ್ಛೇದನ, ಉತ್ತರಾಧಿಕಾರ, ಲಿವ್-ಇನ್ ಸಂಬಂಧಗಳು, ವಿವಿಧ ಈ ರೀತಿಯಾಗಿ ವಿಂಗಡಿಸಲಾಗಿದೆ. ದಂಪತಿಗಳು ತಮ್ಮ ಲೀವ್‌-ಇನ್ ಸಂಬಂಧದ ಬಗ್ಗೆ  ನೋಂದಾಯಿಸದಿದ್ದರೆ, ಅವರು ಗರಿಷ್ಠ ಆರು ತಿಂಗಳ ಜೈಲು ಶಿಕ್ಷೆ ಅಥವಾ ರೂ 25,000ರೂ.ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ. ಲಿವ್-ಇನ್ ಸಂಬಂಧದಿಂದ ಜನಿಸಿದ ಮಕ್ಕಳನ್ನು ದಂಪತಿಗಳ ಕಾನೂನುಬದ್ಧ ಮಗು ಎಂದು ಪರಿಗಣಿಸಲಾಗುತ್ತದೆ ಮತ್ತು ಮದುವೆಯಿಂದ ಜನಿಸಿದ ಮಕ್ಕಳಿಗೆ ಅನ್ವಯವಾಗುವ ಎಲ್ಲಾ ಕಾನೂನು ಹಕ್ಕುಗಳನ್ನು ಅಂತಹ ಮಕ್ಕಳಿಗೆ ನೀಡಲಾಗುತ್ತಿದೆ.

ಮಸೂದೆಯನ್ನು ಮಂಡಿಸಿದ ಸಿಎಂ ಧಾಮಿ, ನಮ್ಮಲ್ಲಿ ಪ್ರತಿಯೊಬ್ಬರಿಗೂ ಇದು ಐತಿಹಾಸಿಕ ಕ್ಷಣವಾಗಿದೆ. ಸಮಾಜದಲ್ಲಿ ಏಕರೂಪತೆಯನ್ನು ತರಲು ನಾವೆಲ್ಲರೂ ಸುದೀರ್ಘ ಮತ್ತು ಆರೋಗ್ಯಕರ ಚರ್ಚೆ ನಡೆಸೋಣ ಎಂದು ಹೇಳಿದ್ದಾರೆ.

ಕರಡು ಅಂಗೀಕರಿಸಿದ್ದ ಉತ್ತರಖಂಡ ಸಂಪುಟ:

ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಐವರು ಸದಸ್ಯರ  ಸಮಿತಿಯು ಶುಕ್ರವಾರ ಕರಡನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಸಲ್ಲಿಸಿದೆ. ಸಮಿತಿಯು ಸಲ್ಲಿಸಿದ 800 ಪುಟಗಳ ವರದಿಯು ಪ್ರಸ್ತಾವಿತ ಶಾಸನದ ವ್ಯಾಪ್ತಿಯಿಂದ ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ ನೀಡುವುದು, ಮಹಿಳಾ ಸಮಾನತೆಗೆ ಆದ್ಯತೆ ನೀಡುವುದು, ಬಹುಪತ್ನಿತ್ವ ನಿಷೇಧಿಸುವುದು, ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ವಿಧಿಸುವುದನ್ನು ಸೂಚಿಸುತ್ತದೆ.

UCC ಕರಡು ನಾಲ್ಕು ಸಂಪುಟಗಳಲ್ಲಿ ಸುಮಾರು 750 ಪುಟಗಳನ್ನು ಒಳಗೊಂಡಿದೆ. ಇದನ್ನು ‘ಪೂರ್ಣ’ ಹಿಂದಿಯಲ್ಲಿ ಬರೆಯಲಾಗಿದೆ ಮತ್ತು ‘ಉರ್ದು’ ಅಥವಾ ಯಾವುದೇ ಇತರ ಭಾಷೆಯ ಒಂದು ಪದವನ್ನು ಹೊಂದಿಲ್ಲ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿಯು ವರದಿಯನ್ನು ಸಿದ್ದಪಡಿಸಿದ್ದು, ಬಹುಪತ್ನಿತ್ವ ಸಂಪೂರ್ಣವಾಗಿ ನಿಷೇಧ, ಮುಸ್ಲಿಂ ವೈಯಕ್ತಿಕ ಕಾನೂನುಗಳಿಗೆ ಸಂಬಂಧಿಸಿದ ತ್ರಿವಳಿ ತಲಾಖ್ ಮತ್ತು ನಿಕಾಹಲಾಲಾ ಆಚರಣೆಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಲಿವ್-ಇನ್ ಸಂಬಂಧದಲ್ಲಿರುವ ದಂಪತಿಗಳು ನೋಂದಾವಣೆ ಮಾಡಿಸಬೇಕು. ವಿವಾಹ ನೋಂದಣಿಗಳು ಕಡ್ಡಾಯವಾಗಿದೆ ಮತ್ತು ಬುಡಕಟ್ಟು ಸಮುದಾಯವನ್ನು ಯುಸಿಸಿ ವ್ಯಾಪ್ತಿಯಿಂದ ಹೊರಗಿಡಲು ಸಲಹೆ ನೀಡಿತ್ತು.

ಏಕರೂಪ ನಾಗರಿಕ ಸಂಹಿತೆ:

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ಕಾಲೇಜುಗಳಿಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಮೋದಿಯ ಕಾರ್ಯಕ್ರಮಕ್ಕೆ ಕಳುಹಿಸುವಂತೆ ಸುತ್ತೋಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...