Homeಮುಖಪುಟಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಕರಡು ಮಸೂದೆಗೆ ಕ್ಯಾಬಿನೆಟ್‌ ಅನುಮೋದನೆ

ಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಕರಡು ಮಸೂದೆಗೆ ಕ್ಯಾಬಿನೆಟ್‌ ಅನುಮೋದನೆ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಅಂತಿಮ ಕರಡು ಮಸೂದೆಯನ್ನು ಉತ್ತರಾಖಂಡ ಕ್ಯಾಬಿನೆಟ್ ಭಾನುವಾರ ಅಂಗೀಕರಿಸಿದ್ದು, ಇಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದೆ. ಈ ಅಧಿವೇಶನದಲ್ಲಿ ಯುಸಿಸಿ ಜಾರಿಯಾದರೆ, ಈ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರಾಖಂಡವಾಗಲಿದೆ.

ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಐವರು ಸದಸ್ಯರ  ಸಮಿತಿಯು ಶುಕ್ರವಾರ ಕರಡನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಸಲ್ಲಿಸಿದೆ. ಸಮಿತಿಯು ಸಲ್ಲಿಸಿದ 800 ಪುಟಗಳ ವರದಿಯು ಪ್ರಸ್ತಾವಿತ ಶಾಸನದ ವ್ಯಾಪ್ತಿಯಿಂದ ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ ನೀಡುವುದು, ಮಹಿಳಾ ಸಮಾನತೆಗೆ ಆದ್ಯತೆ ನೀಡುವುದು, ಬಹುಪತ್ನಿತ್ವ ನಿಷೇಧಿಸುವುದು, ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ವಿಧಿಸುವುದನ್ನು ಸೂಚಿಸುತ್ತದೆ.

ಕರಡು ಸಂಪುಟದ ಒಪ್ಪಿಗೆಯನ್ನು ಪಡೆದಿರುವುದರಿಂದ, ಇಂದಿನಿಂದ ಪ್ರಾರಂಭವಾಗುವ ನಾಲ್ಕು ದಿನಗಳ ಅಧಿವೇಶನದಲ್ಲಿ ಸರ್ಕಾರವು ಅದನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಿದೆ. ವಿಧಾನಸಭೆ ಅಧಿವೇಶನದಲ್ಲಿ ಮಸೂದೆ ಬಗ್ಗೆ “ರಚನಾತ್ಮಕ ಚರ್ಚೆ” ನಡೆಸಲು ಸರ್ಕಾರವು ಪ್ರತಿಪಕ್ಷಗಳಿಗೆ ಅವಕಾಶ ನೀಡಲಿದೆ ಎಂದು ಧಾಮಿ ಶುಕ್ರವಾರ ಹೇಳಿದ್ದರು.

UCC ಕರಡು ನಾಲ್ಕು ಸಂಪುಟಗಳಲ್ಲಿ ಸುಮಾರು 750 ಪುಟಗಳನ್ನು ಒಳಗೊಂಡಿದೆ. ಇದನ್ನು ‘ಪೂರ್ಣ’ ಹಿಂದಿಯಲ್ಲಿ ಬರೆಯಲಾಗಿದೆ ಮತ್ತು ‘ಉರ್ದು’ ಅಥವಾ ಯಾವುದೇ ಇತರ ಭಾಷೆಯ ಒಂದು ಪದವನ್ನು ಹೊಂದಿಲ್ಲ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿಯು ವರದಿಯನ್ನು ಸಿದ್ದಪಡಿಸಿದ್ದು, ಬಹುಪತ್ನಿತ್ವ ಸಂಪೂರ್ಣವಾಗಿ ನಿಷೇಧ, ಮುಸ್ಲಿಂ ವೈಯಕ್ತಿಕ ಕಾನೂನುಗಳಿಗೆ ಸಂಬಂಧಿಸಿದ ತ್ರಿವಳಿ ತಲಾಖ್ ಮತ್ತು ನಿಕಾಹಲಾಲಾ ಆಚರಣೆಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಲಿವ್-ಇನ್ ಸಂಬಂಧದಲ್ಲಿರುವ ದಂಪತಿಗಳು ನೋಂದಾವಣೆ ಮಾಡಿಸಬೇಕು. ವಿವಾಹ ನೋಂದಣಿಗಳು ಕಡ್ಡಾಯವಾಗಿದೆ ಮತ್ತು ಬುಡಕಟ್ಟು ಸಮುದಾಯವನ್ನು ಯುಸಿಸಿ ವ್ಯಾಪ್ತಿಯಿಂದ ಹೊರಗಿಡಲು ಸಲಹೆ ನೀಡಿತ್ತು.

ಏಕರೂಪ ನಾಗರಿಕ ಸಂಹಿತೆ:

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ಬೆಳ್ತಂಗಡಿ ಸೌಜನ್ಯಾ ಪ್ರಕರಣ: ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೊಟೀಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...