Homeಮುಖಪುಟವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ತ್ವರಿತ ಜಾರಿಗೆ ಮುಂದಾದ ಉತ್ತರಾಖಂಡ ಸರಕಾರ

ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ತ್ವರಿತ ಜಾರಿಗೆ ಮುಂದಾದ ಉತ್ತರಾಖಂಡ ಸರಕಾರ

- Advertisement -
- Advertisement -

ಉತ್ತರಾಖಂಡದಲ್ಲಿ ಶೀಘ್ರದಲ್ಲೇ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದು, ವಿವಾದಾತ್ಮಕ ಕಾನೂನನ್ನು ತ್ವರಿತವಾಗಿ ಜಾರಿಗೊಳಿಸಲು ಮುಂದಾಗಿದ್ದಾರೆ.

ವೃಂದಾವನದ ವಾತ್ಸಲ್ಯ ಗ್ರಾಮದಲ್ಲಿ ಸಾಧ್ವಿ ಋತಂಭರ ಅವರ ಬಗ್ಗೆ ಆಯೋಜಿಸಲಾದ ಷಷ್ಠಿ ಪೂರ್ಣಿ ಮಹೋತ್ಸವದಲ್ಲಿ ಮಾತನಾಡಿದ ಪುಷ್ಕರ್ ಸಿಂಗ್ ಧಾಮಿ, ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿ ಕುರಿತು ಹೇಳಿಕೆಯನ್ನು ನೀಡಿದ್ದಾರೆ. ಯುಸಿಸಿ ಜಾರಿ ಕುರಿತು ಮಸೂದೆಯನ್ನು ಶೀಘ್ರದಲ್ಲಿಯೇ ಅದರ ಅನುಮೋದನೆಗಾಗಿ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಮಭಕ್ತರ ಮೇಲಿನ ದಾಳಿಗೆ ಕಾರಣರಾದ ಜನರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಎಂದಿಗೂ ನಿರ್ಮಿಸಿಲ್ಲ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370ನೇ ವಿಧಿಯನ್ನು ರದ್ದುಗೊಳಿಸಲಿಲ್ಲ, ತ್ರಿವಳಿ ತಲಾಖ್‌ನ್ನು ರದ್ದುಗೊಳಿಸಲಿಲ್ಲ. ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸುವ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ತೋರಿದ್ದಾರೆ ಎಂದು ಹೇಳಿದ್ದಾರೆ.

ಸಾಧ್ವಿ ಋತಂಭರಾ ಅವರನ್ನು ವಾತ್ಸಲ್ಯ ಮತ್ತು ಮಾತೃತ್ವದ ಪ್ರತಿಬಿಂಬ ಎಂದು ಕರೆದ ಧಾಮಿ, ರಾಮ ಜನ್ಮಭೂಮಿ ಆಂದೋಲನದ ಸಮಯದಲ್ಲಿ ಅವರ ಉಪನ್ಯಾಸಗಳಿಂದ ನಾನು ಸ್ಫೂರ್ತಿ ಪಡೆದಿದ್ದೇನೆ. ಸಾಧ್ವಿ ಋತಂಭರ ಅವರ ವಾತ್ಸಲ್ಯ ಮತ್ತು ಆಶೀರ್ವಾದವು ಹೆಚ್ಚು ಶಕ್ತಿಯಿಂದ ಜನರಿಗೆ ಸೇವೆ ಸಲ್ಲಿಸಲು ಪ್ರೇರೇಪಿಸಿದೆ ಎಂದು ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಈ ಮೊದಲು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯುಸಿಸಿ ಕುರಿತು ಕರಡು ಸಮಿತಿಯ ನಿರ್ಧಾರಗಳಿಗೆ ಸಂಪುಟ ಅನುಮೋದನೆ ನೀಡಿತ್ತು. ಈ ಕುರಿತು ಸಮಿತಿಯನ್ನು ಮೇ.2022ರಲ್ಲಿ ರಚಿಸಲಾಗಿತ್ತು. ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿಯು ಜನವರಿಯಲ್ಲಿ ಕರಡನ್ನು ರಾಜ್ಯ ಸರ್ಕಾರಕ್ಕೆ ಶೀಘ್ರವೇ ಸಲ್ಲಿಸುವ ಸಾಧ್ಯತೆಯಿದೆ. ನಂತರ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಕುರಿತು ಸದನದಲ್ಲಿ ಮಸೂದೆ ಅಂಗೀಕಾರದ ಸಾಧ್ಯತೆ ಇದೆ.

ಜೂನ್‌ನಲ್ಲಿ ಏಕರೂಪ ನಾಗರಿಕ ಸಂಹಿತೆಯ ಕರಡು ಸಮಿತಿಯ ಸದಸ್ಯರಾದ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರು ಉತ್ತರಾಖಂಡಕ್ಕೆ ಏಕರೂಪ ನಾಗರಿಕ ಸಂಹಿತೆಯ ಕರಡು ರಚನೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದರು.

ಏನಿದು ಏಕರೂಪ ನಾಗರಿಕ ಸಂಹಿತೆ?

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರೋದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ, ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್: ಗಾಳಿಪಟದ ದಾರ ಕುತ್ತಿಗೆ ಸೀಳಿ ಸ್ಥಳದಲ್ಲಿ ಪ್ರಾಣ ಬಿಟ್ಟ 48 ವರ್ಷದ ಬೈಕ್ ಸವಾರ

ಬೀದರ್ ಜಿಲ್ಲೆಯ ತಲಮಡಗಿ ಸೇತುವೆ ಬಳಿಯ ರಸ್ತೆಯಲ್ಲಿ ಮಗಳನ್ನು ಕರೆತರಲು ಬೈಕ್ ನಲ್ಲಿ ತೆರಳುತ್ತಿದ್ದ 48 ವರ್ಷದ ವ್ಯಕ್ತಿ ಕೊರಳಿಗೆ ಗಾಳಿ ಪಟದ ದಾರ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ.  ಮೃತ...

ಐ-ಪ್ಯಾಕ್ ಮೇಲಿನ ದಾಳಿ: ಟಿಎಂಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್

ಐ-ಪಿಎಸಿಗೆ ಸಂಬಂಧಿಸಿದ ಇತ್ತೀಚಿನ ದಾಳಿಗಳ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಪಕ್ಷದ ಫೈಲ್‌ಗಳು ಮತ್ತು ಚುನಾವಣಾ ಸಂಬಂಧಿತ ಡೇಟಾವನ್ನು ವಶಪಡಿಸಿಕೊಂಡಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್...

ತೆಲಂಗಾಣ| ಪಂಚಾಯತ್ ಚುನಾವಣೆಯ ನಂತರ 500 ಬೀದಿ ನಾಯಿಗಳ ಸಾಮೂಹಿಕ ಕೊಲೆ; ‘ನಾಯಿ ಮುಕ್ತ ಗ್ರಾಮ’ದ ಭರವಸೆ ನೀಡಿದ್ದ ಅಭ್ಯರ್ಥಿಗಳು

ತೆಲಂಗಾಣದ ಹನಮಕೊಂಡ ಮತ್ತು ಕಾಮರೆಡ್ಡಿ ಜಿಲ್ಲೆಗಳಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಜನವರಿಯ ಮೊದಲ ಎರಡು ವಾರಗಳಲ್ಲಿ ಸುಮಾರು 500 ನಾಯಿಗಳನ್ನು ವಿಷ ಹಾಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ....

ಕಾನ್ಪುರ ದೇಹತ್‌ನಲ್ಲಿ ನೆರೆಯವರ ಹಲ್ಲೆಯಿಂದ ದಲಿತ ರೈತ ಸಾವು; ಆರು ಮಂದಿ ಬಂಧನ

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ 50 ವರ್ಷದ ದಲಿತ ರೈತನೊಬ್ಬ ತನ್ನ ನೆರೆಹೊರೆಯವರು ಮತ್ತು ಅವರ ಸಂಬಂಧಿಕರಿಂದ ಥಳಿತಕ್ಕೊಳಗಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಆತನ...

ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ‘ಹರಿಜನ-ಗಿರಿಜನ’ ಪದಗಳನ್ನು ನಿಷೇಧಿಸಿದ ಹರಿಯಾಣ ಸರ್ಕಾರ

ಹರಿಯಾಣ ಸರ್ಕಾರವು ತನ್ನ ಎಲ್ಲಾ ಅಧಿಕೃತ ಸಂವಹನಗಳಲ್ಲಿ 'ಹರಿಜನ' ಮತ್ತು 'ಗಿರಿಜನ' ಪದಗಳ ಬಳಕೆಯನ್ನು ನಿಷೇಧಿಸಿದೆ. ಇಲಾಖೆಗಳು 'ಪರಿಶಿಷ್ಟ ಜಾತಿ (ಎಸ್‌ಸಿ)' ಮತ್ತು 'ಪರಿಶಿಷ್ಟ ಪಂಗಡ (ಎಸ್‌ಟಿ)' ಅಥವಾ ಅವುಗಳ ಸಮಾನ ಪದಗಳನ್ನು...

ಐಎಎಸ್ ಅಧಿಕಾರಿ ಮಾನನಷ್ಟ ಮೊಕದ್ದಮೆ ಪ್ರಕರಣ: ಎನ್‌ಟಿವಿ ಸಂಪಾದಕ, ಇಬ್ಬರು ಪತ್ರಕರ್ತರ ಬಂಧನ

ತೆಲಂಗಾಣ ಸರ್ಕಾರದ ರಸ್ತೆ ಮತ್ತು ಕಟ್ಟಡಗಳ ಸಚಿವ ಕೋಮತಿರೆಡ್ಡಿ ವೆಂಕಟ್ ರೆಡ್ಡಿ ಹಾಗೂ ಮಹಿಳಾ ಐಎಎಸ್ ಅಧಿಕಾರಿ ಅವರ ಕುರಿತು ವಿವಾದಾತ್ಮಕ ಸುದ್ದಿ ವರದಿಗೆ ಸಂಬಂಧಿಸಿದಂತೆ, ಹೈದರಾಬಾದ್ ಕೇಂದ್ರ ಅಪರಾಧ ಠಾಣೆ...

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...