ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಬುಧವಾರ ರಾತ್ರಿ ಘೋಷಿಸಿದ್ದು, ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಜ್ಜಾಗಿದೆ.
ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಉನ್ನತ ನಾಯಕರು ತಮ್ಮ ಮುಂದಿನ ನಡೆಯನ್ನು ಕಾರ್ಯತಂತ್ರ ರೂಪಿಸಲು ದಕ್ಷಿಣ ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಸಭೆ ನಡೆಸಿದ್ದಾರೆ.
ತಮ್ಮ ಮುಂದಿನ ಕ್ರಮವನ್ನು ಅಂತಿಮಗೊಳಿಸಲು ಮಹಾರಾಷ್ಟ್ರದ ಉನ್ನತ ಬಿಜೆಪಿ ನಾಯಕರು ಗುರುವಾರ ಸಭೆ ನಡೆಸಲಿದ್ದಾರೆ ಎಂದು ಮೂಲವೊಂದು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
39 ಬಂಡಾಯ ಶಾಸಕರು ಮತ್ತು ಸ್ವತಂತ್ರ ಶಾಸಕರನ್ನು ಒಳಗೊಂಡಿರುವ ಶಿವಸೇನೆಯ ಏಕನಾಥ್ ಶಿಂಧೆ ಬಣದ ಬೆಂಬಲದೊಂದಿಗೆ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಹಕ್ಕು ಚಲಾಯಿಸಲಿದೆ ಎಂದು ಮೂಲವು ತಿಳಿಸಿದೆ.
ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ ಬೆನ್ನಲ್ಲೇ ಠಾಕ್ರೆ ಸಿಎಂ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರವನ್ನು ಪ್ರಕಟಿಸಿದರು.
ಸಿಎಂ ಉದ್ಧವ್ ಅವರು ವಿಶ್ವಾಸಮತ ಯಾಚನೆ ಮಾಡುವಂತೆ ಮಹಾರಾಷ್ಟ್ರ ರಾಜ್ಯಪಾಲರು ಸೂಚಿಸಿದ್ದನ್ನು ಪ್ರಶ್ನಿಸಿ ಶಿವಸೇನೆ ಮುಖ್ಯ ಸಚೇತಕ ಸುನಿಲ್ ಪ್ರಭು ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆಯ ಬಳಿಕ ಸುಪ್ರೀಂ ಕೋರ್ಟ್ ಆದೇಶ ಹೊರಬಿದ್ದಿದೆ. ಈ ಹಿಂದೆ ವಿಚಾರಣೆಯ ಸಂದರ್ಭದಲ್ಲಿ, ಪ್ರಜಾಪ್ರಭುತ್ವದ ಈ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಸದನದ ಮಹಡಿಯೇ ಏಕೈಕ ಮಾರ್ಗ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಮಹಾರಾಷ್ಟ್ರದ ಸಿಎಂ ಸ್ಥಾನದಿಂದ ಕೆಳಗಿಳಿರುವ ಘೋಷಣೆ ಮಾಡಿದ ಕೂಡಲೇ ಉದ್ಧವ್ ಠಾಕ್ರೆಯವರು ರಾಜಭವನದ ಬಳಿಯಿರುವ ಖಂಡೋಬಾ ದೇವಸ್ಥಾನಕ್ಕೆ ಬುಧವಾರ ಮಧ್ಯರಾತ್ರಿ ಭೇಟಿ ನೀಡಿದರು.
ಬುಧವಾರ ತಡರಾತ್ರಿ ಹೋಟೆಲ್‌ನಿಂದ ಹೊರಬಂದ ಶಾಸಕರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರದಲ್ಲಿ ಮುಂದಿನ ಸರ್ಕಾರ ರಚನೆಗೆ ಶಿಂಧೆ ಬಣ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ನಿರೀಕ್ಷೆಯಿದೆ.
ಇದನ್ನೂ ಓದಿರಿ: 50ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ, ಬಹುಮತ ಸಾಬೀತುಪಡಿಸುತ್ತೇನೆ: ಬಂಡಾಯ ನಾಯಕ ಏಕನಾಥ್ ಶಿಂಧೆ
ಠಾಕ್ರೆ ರಾಜೀನಾಮೆ ನೀಡಿದ ನಂತರ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದರೆ, ಪಕ್ಷದ ಉನ್ನತ ನಾಯಕರು ತಮ್ಮ ಮುಂದಿನ ನಡೆಯ ಕಾರ್ಯತಂತ್ರ ರೂಪಿಸಲು ದಕ್ಷಿಣ ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಸಭೆ ನಡೆಸಿದರು.
“ನಾವು ಬಂಡಾಯಗಾರರಲ್ಲ. ನಾವು ಶಿವಸೇನೆಯವರು. ಬಾಳಾಸಾಹೇಬ್ ಠಾಕ್ರೆಯವರ ಶಿವಸೇನೆಯ ಅಜೆಂಡಾ ಮತ್ತು ಸಿದ್ಧಾಂತವನ್ನು ಮುಂದಕ್ಕೆ ಸಾಗಿಸುತ್ತಿದ್ದೇವೆ. ನಾವು ಹಿಂದುತ್ವ ಸಿದ್ಧಾಂತ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ” ಎಂದು ಏಕನಾಥ್ ಶಿಂಧೆಯವರು ಗುವಾಹಟಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
We are not rebels. We are Shiv Sena. We are carrying forward the agenda and ideology of Balasaheb Thackeray's Shiv Sena. We will work for the Hindutva ideology and development of the state: Eknath Shinde, at Guwahati airport#MaharashtraPoliticalCrisis pic.twitter.com/RGMdJ75dQV
— ANI (@ANI) June 29, 2022