Homeಮುಖಪುಟದ್ರೌಪದಿ ಮುರ್ಮು ಬೆಂಬಲಿಸುವಂತೆ ಉದ್ಧವ್‌ ಮೇಲೆ ಒತ್ತಡ ಹೇರಿಕೆ: ಯಶವಂತ ಸಿನ್ಹಾ

ದ್ರೌಪದಿ ಮುರ್ಮು ಬೆಂಬಲಿಸುವಂತೆ ಉದ್ಧವ್‌ ಮೇಲೆ ಒತ್ತಡ ಹೇರಿಕೆ: ಯಶವಂತ ಸಿನ್ಹಾ

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬಲವಂತವಾಗಿ ಬೆಂಬಲಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ತಿಳಿಸಿದ್ದಾರೆ.

“ನಾನು ರಾಜಕೀಯ ಪಕ್ಷದ ವಿರುದ್ಧ ಹೋರಾಡುತ್ತಿಲ್ಲ, ಆದರೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಡುತ್ತಿದ್ದೇನೆ” ಎಂದು ಸಿನ್ಹಾ ಅವರು ಗುವಾಹಟಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉದ್ಧವ್ ಠಾಕ್ರೆ ಆರಂಭದಲ್ಲಿ ವಿರೋಧ ಪಕ್ಷದ ಅಭ್ಯರ್ಥಿಯ ಬೆಂಬಲಿಗರಾಗಿದ್ದರು. ಆದರೆ ಶಿವಸೇನೆಯ 16 ಜನಪ್ರತಿನಿಧಿಗಳ ಗುಂಪು ಒತ್ತಾಯಿಸಿದ ನಂತರ ಈ ವಾರದ ಆರಂಭದಲ್ಲಿ ಮುರ್ಮು ಅವರಿಗೆ ಬೆಂಬಲವನ್ನು ಘೋಷಿಸಿದ್ದಾರೆ.

ಮಂಗಳವಾರ ಪ್ರತಿಕ್ರಿಯೆ ನೀಡಿದ್ದ ಉದ್ಧವ್‌, “ಪ್ರಸ್ತುತ ರಾಜಕೀಯ ವಾತಾವರಣವನ್ನು ನೋಡಿದರೆ, ನಾನು ಮುರ್ಮು ಅವರನ್ನು ಬೆಂಬಲಿಸಬಾರದಿತ್ತು, ಆದರೆ ನಾವು ಸಂಕುಚಿತ ಮನಸ್ಸಿನವರಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಆದಾಗ್ಯೂ, ಅವರು ಮುರ್ಮು ಅವರಿಗೆ ಬೆಂಬಲ ನೀಡಲು ಬಯಸಿದ್ದಾರೆ. ಶಿವಸೇನೆ ಪಕ್ಷದಲ್ಲಿ ಬೆಳೆಯುತ್ತಿರುವ ವಿಭಜನೆಯನ್ನು ತಡೆಯುವ ಪ್ರಯತ್ನವಾಗಿ ಉದ್ಧವ್ ಈ ಹೆಜ್ಜೆ ಇರಿಸಿದ್ದಾರೆಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.

ಮುಖ್ಯಮಂತ್ರಿಯಾಗಿರುವ ಏಕನಾಥ್ ಶಿಂಧೆ ಬಂಡಾಯವೆದ್ದ ನಂತರ ರಾಷ್ಟ್ರಪತಿ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಕಳೆದ ತಿಂಗಳು ಪತನಗೊಂಡಿತ್ತು. 55 ಸೇನಾ ಶಾಸಕರ ಪೈಕಿ 40 ಮಂದಿ ಶಿಂಧೆ ಅವರನ್ನು ಬೆಂಬಲಿಸಿದ್ದರು. ಸಂಸತ್ತಿನಲ್ಲೂ ಕನಿಷ್ಠ ಆರು ಮಂದಿ ಸಂಸದರು ಇನ್ನೊಂದು ಬದಿಯಲ್ಲಿದ್ದಂತೆ ಕಂಡುಬಂದಿತು.

ರಾಷ್ಟ್ರಪತಿ ಚುನಾವಣೆಗೆ ಮುನ್ನ ಪ್ರತಿಪಕ್ಷಗಳನ್ನು ದುರ್ಬಲಗೊಳಿಸಲು ಕೇಂದ್ರವು ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಯಶವಂತ್ ಸಿನ್ಹಾ, “ಜಾರಿ ನಿರ್ದೇಶನಾಲಯದ ದುರುಪಯೋಗ ನಡೆಯುತ್ತಿದೆ. ಸೆಂಟ್ರಲ್‌ ಏಜೆನ್ಸಿಗಳನ್ನು ಬಳಸಿಕೊಂಡು ಚುನಾಯಿತ ಸರ್ಕಾರಗಳನ್ನು ಉರುಳಿಸುತ್ತಿದ್ದಾರೆ” ಎಂದು ದೂರಿದ್ದಾರೆ.

ರಾಷ್ಟ್ರಪತಿ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳನ್ನು ಒಡೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಿನ್ಹಾ ಆರೋಪಿಸಿದ್ದಾರೆ.

ಇದನ್ನೂ ಓದಿರಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಆದರೆ ಪ್ರಾದೇಶಿಕ ಪಕ್ಷಗಳು ಒಂದರ ನಂತರ ಒಂದರಂತೆ ಮುರ್ಮುವನ್ನು ಬೆಂಬಲಿಸಲು ಉತ್ಸುಕತೆಯನ್ನು ತೋರಿಸುತ್ತಿದ್ದರೂ, ಸಿನ್ಹಾ ಲವಲವಿಕೆಯಿಂದ ಇದ್ದಾರೆ.

“ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ ನನ್ನನ್ನು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷವು ಶೀಘ್ರದಲ್ಲೇ ಬೆಂಬಲ ಸೂಚಿಸುವುದೆಂದು ನನಗೆ ತಿಳಿದಿದೆ. ವಿರೋಧ ಪಕ್ಷದ ಪಾಳಯದಲ್ಲಿ ಕೇವಲ ಒಂದು ಪಕ್ಷ ಮಾತ್ರ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತಿದೆ – ಅದು ಶಿವಸೇನೆ. ತೆಲಂಗಾಣ ರಾಷ್ಟ್ರ ಸಮಿತಿಯು ವಿರೋಧ ಪಕ್ಷದ ಸಭೆಯ ಭಾಗವಾಗಿರಲಿಲ್ಲ, ಆದರೆ ಆ ಪಕ್ಷವೂ ನನ್ನನ್ನು ಬೆಂಬಲಿಸಲಿದೆ. ಆದ್ದರಿಂದ ನಮಗೆ ಸಾಕಷ್ಟು ವಿರೋಧ ಪಕ್ಷದ ಬೆಂಬಲವಿದೆ” ಎಂದು ಸಿನ್ಹಾ ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...