Homeಮುಖಪುಟಭೀಮಶಕ್ತಿಯ ಜೊತೆಗೂಡಿದ ಶಿವಶಕ್ತಿ: ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆ ಮೈತ್ರಿ

ಭೀಮಶಕ್ತಿಯ ಜೊತೆಗೂಡಿದ ಶಿವಶಕ್ತಿ: ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆ ಮೈತ್ರಿ

- Advertisement -
- Advertisement -

ಮಹಾರಾಷ್ಟ್ರದ ಪ್ರಮುಖ ರಾಜಕೀಯ ಬೆಳವಣಿಗೆಗಳಲ್ಲಿ ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆಯವರ ಶಿವಸೇನೆ ಪಕ್ಷವು ಮೈತ್ರಿಗೆ ಮುಂದಾಗಿದೆ. ಭೀಮಶಕ್ತಿ ಮತ್ತು ಶಿವಶಕ್ತಿ ಜೊತೆಗೂಡಿದ್ದು ಇದು ಮುಂಬರುವ ಬಿಎಂಸಿ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವ ಬೀರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

“ಉದ್ಧವ್ ಠಾಕ್ರೆ ಕೆಲವು ದಿನಗಳ ಹಿಂದೆ ಚುನಾವಣಾ ಪೂರ್ವ ಮೈತ್ರಿ ವಿಷಯ ಪ್ರಸ್ತಾಪಿಸಿದ್ದರು. ನಮ್ಮ ವಂಚಿತ್ ಬಹುಜನ್ ಅಘಾಡಿಯಲ್ಲಿ ಎಚ್ಚರಿಕೆಯಿಂದ ಚರ್ಚಿಸಿದ ನಂತರ ನಾವು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಜೊತೆ ಮೈತ್ರಿ ಹೊಂದಲು ನಿರ್ಧರಿಸಿದ್ದೇವೆ.” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ಆದರೂ ಈ ಮೈತ್ರಿ ಎಷ್ಟರಮಟ್ಟಿಗೆ ಸಫಲವಾಗುತ್ತದೆ ಎಂಬುದು ಉದ್ಧವ್ ಠಾಕ್ರೆಯವರ ನಡೆಯ ಮೇಲೆ ನಿಂತಿದೆ. ಏಕೆಂದರೆ ಮಹಾ ವಿಕಾಸ್ ಅಘಾಡಿಯ ನಾಲ್ಕನೇ ಪಕ್ಷವಾಗಿ ನಮ್ಮ ವಂಚಿತ್ ಬಹುಜನ್ ಅಘಾಡಿ ಸೇರಿಕೊಳ್ಳುತ್ತದೆಯೊ ಅಥವಾ ಎನ್‌ಸಿಪಿ, ಕಾಂಗ್ರೆಸ್ ಬಿಟ್ಟು ಕೇವಲ ಶಿವಸೇನೆ ಮತ್ತು ನಾವು ಮೈತ್ರಿ ಮಾಡಿಕೊಳ್ಳುತ್ತೇವೆಯೋ ಎಂಬುದನ್ನು ಅವರೆ ಹೇಳಬೇಕು. ಏಕೆಂದರೆ ಸೀಟು ಹಂಚಿಕೆ ಸೇರಿದಂತೆ ಹಲವು ಕ್ಲಿಷ್ಟ ವಿಷಯಗಳು ಇಲ್ಲಿ ಅಡಗಿವೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಆಗ ಬಿಜೆಪಿ 105, ಶಿವಸೇನೆ-56 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು. ಎನ್.ಸಿ.ಪಿ 54, ಕಾಂಗ್ರೆಸ್ 44 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿದ್ದವು. ಆದರೆ ಮುಖ್ಯಮಂತ್ರಿ ಯಾರಾಗಬೇಕೆಂಬ ವಿವಾದದಿಂದಾಗಿ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡು ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆ ಸೇರಿ ಮಹಾ ವಿಕಾಸ್ ಅಘಾಡಿ ರಚಿಸಿತ್ತು.

ಆದರೆ 2022ರ ಜೂನ್‌ನಲ್ಲಿ ಶಿವಸೇನೆ ಬಣದಲ್ಲಿನ ಕೆಲವನ್ನು ಆಪರೇಷನ್ ಮಾಡಿದ ಬಿಜೆಪಿ ಕೊನೆಗೂ ಏಕನಾಥ್ ಶಿಂಧೆಯ ಶಿವಸೇನೆ ಬಣದೊಂದಿಗೆ ಸೇರಿ ಅಧಿಕಾರ ಹಿಡಿದಿದೆ. ಇದು ಉದ್ಧವ್ ಠಾಕ್ರೆ ನೇತೃತ್ವದ ಬಲ ಕುಂದಿಸಲು ಬಿಜೆಪಿ ಮಾಡಿದ ಯತ್ನ ಎನ್ನಲಾಗುತ್ತಿತ್ತು. ಅದಕ್ಕೆ ಪ್ರತಿಯಾಗಿ ಉದ್ಧವ್ ದಲಿತರ ಬೆಂಬಲವಿರುವ ಪ್ರಕಾಶ್ ಅಂಬೇಡ್ಕರ್ ಜೊತೆ ಮೈತ್ರಿಗೆ ಮುಂದಾಗಿದ್ದಾರೆ.

ವಂಚಿತ್ ಬಹುಜನ್ ಅಘಾಡಿಯ ಶಕ್ತಿ

ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ್ ಅಘಾಡಿ ಒಬ್ಬ ಸಂಸದ ಅಥವಾ ಒಬ್ಬ ಶಾಸಕನನ್ನೂ ಸಹ ಹೊಂದಿಲ್ಲ. ಆದರೂ ಅದು 2019ರ ಲೋಕಸಭಾ ಚುನಾವಣೆಯಲ್ಲಿ ಶೇ.6.92 ರಷ್ಟು ಮತಗಳನ್ನು ಪಡೆದಿತ್ತು. ಇದರಿಂದಾಗಿ ಎನ್‌ಸಿಪಿ, ಕಾಂಗ್ರೆಸ್‌ನ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಸೋಲು ಅನುಭವಿಸಿದ್ದರು. ಸದ್ಯ ಬಿಜೆಪಿಯನ್ನು ಗುರಿಯಾಗಿಸಿಕೊಂಡಿರುವ ಅವರು ಜಾತ್ಯಾತೀತ ಶಕ್ತಿಗಳ ಜೊತೆ ಮೈತ್ರಿಗೆ ಮುಂದಾಗಿದ್ದಾರೆ.

ಇತ್ತೀಚೆಗೆ ಶಿವಸೇನೆ ಸಂಸ್ಥಾಪಕ ಉದ್ಧವ್ ಠಾಕ್ರೆಯವರ ತಾತ ಪ್ರಬೋಧಂಕರ್ ಠಾಕ್ರೆಯವರ ನೆನಪಿನಲ್ಲಿ ಪ್ರಬೋಧಂಕರ್.ಕಾಂ ವೆಬ್‌ಸೈಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಧವ್ ಠಾಕ್ರೆ ಮತ್ತು ಪ್ರಕಾಶ್ ಅಂಬೇಡ್ಕರ್ ಜೊತೆ ಸೇರಿದ್ದರು. ಆಗ ಮಾತನಾಡಿದ ಪ್ರಕಾಶ್ ಅಂಬೇಡ್ಕರ್, “1950ರ ದಶಕದಲ್ಲಿ ನಮ್ಮ ತಾತ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಉದ್ಧವ್‌ರವರ ತಾತ ಪ್ರಬೋಧಂಕರ್ ಠಾಕ್ರೆ ಜೊತೆಗೂಡಿ, ಅಸ್ಪೃಶ್ಯತೆ, ಜಾತೀಯತೆ ಮತ್ತು ವರದಕ್ಷಿಣೆಯಂತಹ ಪಿಡುಗುಗಳ ವಿರುದ್ಧ ಹೋರಾಡಿದ್ದರು. ಈಗ ನಾವು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಸಮಾಜಕ್ಕೆ ಮಾರಕವಾಗಿರುವ ಬಿಜೆಪಿ ವಿರುದ್ಧ ಹೋರಾಡುತ್ತೇವೆ” ಎಂದಿದ್ದರು.

ನಮ್ಮ ವಂಚಿತ್ ಬಹುಜನ್ ಅಘಾಡಿ ಪಕ್ಷವು ಅಂಚಿಗೆ ತಳ್ಳಲ್ಪಟ್ಟವರ ಮತ್ತು ಹಿಂದುಳಿದ ಜಾತಿ, ಧರ್ಮಗಳ ದನಿಯಾಗಿದೆ. ನಾವು ಬಡವರನ್ನು ಪ್ರತಿನಿಧಿಸುತ್ತೇವೆ. ನಮ್ಮ ಮೈತ್ರಿಗೆ ಮತ ಪರಿವರ್ತಿಸುವ ಶಕ್ತಿ ನಮಗೆ. ಅದು ಮುಂದಿನ ಬಿಎಂಸಿ ಚುನಾವಣೆಯಲ್ಲಿ ಸಾಬೀತಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕೈವಾಡದ ಆರೋಪ: ಕರ್ನಾಟಕದ 27 ಲಕ್ಷ ಮತದಾರರ ಹೆಸರು ಕೈಬಿಟ್ಟಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...