Homeಕರೋನಾ ತಲ್ಲಣಲಾಕ್‌ಡೌನ್‌ ಯೋಜನೆ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸೂಚನೆ ನೀಡಿದ ಉದ್ಧವ್ ಠಾಕ್ರೆ

ಲಾಕ್‌ಡೌನ್‌ ಯೋಜನೆ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸೂಚನೆ ನೀಡಿದ ಉದ್ಧವ್ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆ, ಜನರು ಕೊರೊನಾ ನಿಯಮಾವಳಿಗಳನ್ನು ಅನುಸರಿಸದ ಕಾರಣ ಲಾಕ್‌ಡೌನ್ ವಿಧಿಸುವ ಯೋಜನೆಯನ್ನು ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಆರೋಗ್ಯ ಸಚಿವ ರಾಜೇಶ್ ಟೊಪೆ, ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ, ಕೊರೊನಾ ಟಾಸ್ಕ್‌ಪೋರ್ಸ್ ವೈದ್ಯರು ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಭೆಯಲ್ಲಿ, ಅಧಿಕಾರಿಗಳು ಕೊರೊನಾ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿದ್ದು ಕೊರೊನಾ ಸಂಬಂಧಿತ ಸಾವುಗಳ ಹೆಚ್ಚಳಕ್ಕೆ ಕಾರಣವಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣಗಳ ತೀವ್ರ ಏರಿಕೆಯಿಂದಾಗಿ, ರಾಜ್ಯವು ಆರೋಗ್ಯ ಬಿಕ್ಕಟ್ಟನ್ನು ಎದುರಿಸಬಹುದು ಮತ್ತು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಉದ್ದೇಶಿಸಿರುವ ಮೂಲಸೌಕರ್ಯಗಳ ಕೊರತೆಯನ್ನು ಕಾಣಬಹುದು ಎಂದು ಉದ್ಧವ್ ಠಾಕ್ರೆ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಅಮಿತ್ ಶಾ ಯಾರು? ಮಮತಾ ಬ್ಯಾನರ್ಜಿ ಪ್ರಶ್ನೆ

ಸರ್ಕಾರಿ ಕಚೇರಿಗಳು ಮತ್ತು ರಾಜ್ಯ ಸಚಿವಾಲಯ, ಮಂತ್ರಾಲಯಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜನರು ನಿಯಮಗಳನ್ನು ಪಾಲಿಸದ ಕಾರಣ ಸರ್ಕಾರ ಲಾಕ್‌ಡೌನ್ ಹೇರುವ ನಿರ್ಧಾರಕ್ಕೆ ಬರಲು ಕಾರಣವಾಗಿದೆ ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ 3.75 ಲಕ್ಷ ಪ್ರತ್ಯೇಕ ಹಾಸಿಗೆಗಳಲ್ಲಿ, 1.07 ಲಕ್ಷಗಳು ಭರ್ತಿಯಾಗಿವೆ. ಜೊತೆಗೆ ಉಳಿದ ಹಾಸಿಗೆಗಳು ವೇಗವಾಗಿ ಭರ್ತಿಯಾಗುತ್ತಿವೆ. 60,349 ಆಕ್ಸಿಜನ್ ಹಾಸಿಗೆಗಳಲ್ಲಿ, 12,701 ಈಗಾಗಲೇ ಭರ್ತಿಯಾಗಿವೆ ಎಂದು ಪ್ರಧಾನ ಕಾರ್ಯದರ್ಶಿ (ಆರೋಗ್ಯ) ಡಾ.ಪ್ರದೀಪ್ ವ್ಯಾಸ್ ತಿಳಿಸಿದ್ದಾರೆ.

ಫೆಬ್ರವರಿ ಕೊನೆಯಿಂದ ದೇಶದ ಹಲವು ರಾಜ್ಯಗಳಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದು, ಮಾಸ್ಕ್ ಧರಿಸುವುದು ಮತ್ತು ದೈಹಿಕ ಅಂತರ ಮುಂತಾದ ಸುರಕ್ಷತಾ ಕ್ರಮಗಳನ್ನು ಜನರು ಅನುಸರಿಸದೇ ಇರುವುದೇ ಇದಕ್ಕೆ ಕಾರಣ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಿಮಾಚಲ ಕಾಂಗ್ರೆಸ್​​ನಲ್ಲಿ ಎಲ್ಲವೂ ಸರಿಯಿದೆ: ಡಿಕೆ ಶಿವಕುಮಾರ್

0
ಬಣ ರಾಜಕೀಯದಿಂದ ಪತನವಾಗುವ ಹಂತ ತಲುಪಿದ್ದ ಹಿಮಾಚಲ ಪ್ರದೇಶ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿ ಇದೆ ಎಂಬ ಸಂದೇಶವನ್ನು ಡಿ.ಕೆ ಶಿವಕುಮಾರ್ ರವಾನಿಸಿದ್ದಾರೆ. ಶಿಮ್ಲಾದಲ್ಲಿ ಗುರುವಾರ ಸಂಜೆ ವಿಕ್ರಮಾದಿತ್ಯ ಸಿಂಗ್ ಹಾಗೂ ಪ್ರತಿಭಾ ಸಿಂಗ್...