Homeಕರೋನಾ ತಲ್ಲಣಮಹಾರಾಷ್ಟ್ರ: ದೀಪಾವಳಿ ನಂತರ ಶಾಲೆ ಹಾಗೂ ದೇವಾಲಯ ರೀ ಓಪನ್!

ಮಹಾರಾಷ್ಟ್ರ: ದೀಪಾವಳಿ ನಂತರ ಶಾಲೆ ಹಾಗೂ ದೇವಾಲಯ ರೀ ಓಪನ್!

- Advertisement -
- Advertisement -

ದೀಪಾವಳಿ ಹಬ್ಬದ ನಂತರ ಮಹಾರಾಷ್ಟ್ರದ ಒಂಬತ್ತರಿಂದ ಹನ್ನೆರಡನೇ ತರಗತಿಗಳ ಶಾಲೆಗಳು ಮತ್ತೆ ತೆರೆಯಲು ಸಿಎಂ ಉದ್ಧವ್ ಠಾಕ್ರೆ ಅನುಮತಿ ನೀಡಿದ್ದಾರೆ. ಜೊತೆಗೆ ದೇವಾಲಯಗಳನ್ನು ಸಹ ತೆರೆಯಬಹುದು ಎಂದು ಅವರು ಹೇಳಿದ್ದಾರೆ.

ಎಲ್ಲಾ ರೀತಿಯ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ದೀಪಾವಳಿಯ ನಂತರ ಶಾಲೆಗಳನ್ನು ತೆರೆಯಲು ಯೋಚಿಸಿದ್ದೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ. ಶಾಲೆಗಳು ಅನುಸರಿಸಬೇಕಾದ ಕಾರ್ಯ ವಿಧಾನಗಳನ್ನು ಪರಿಶೀಲಿಸಲು ಭಾನುವಾರ ನಡೆದ ಇಲಾಖೆಯ ಸಭೆಯಲ್ಲಿ ಈ ವಿಷಯವನ್ನು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ: 262 ವಿದ್ಯಾರ್ಥಿಗಳಿಗೆ ಕೊರೊನಾ, ಆತಂಕ ಬೇಡ ಎಂದ ಇಲಾಖೆ!

’ದೀಪಾವಳಿಯ ನಂತರ ರಾಜ್ಯದ ಒಂಬತ್ತನೇ ತರಗತಿಯಿಂದ ಹನ್ನೆರಡನೇ ತರಗತಿವರೆಗಿನ ಶಾಲೆಗಳು ಮತ್ತೆ ತೆರೆಯಲು ಸಿಎಂ ಉದ್ಧವ್ ಠಾಕ್ರೆ ಅವಕಾಶ ನೀಡಿದ್ದಾರೆ. ನವೆಂಬರ್ 17 ಮತ್ತು 22 ರ ನಡುವೆ ಸ್ಥಳೀಯ ಆಡಳಿತಗಳಿಂದ ಎಲ್ಲಾ ಶಿಕ್ಷಕರಿಗೂ ಕೊರೊನಾ ಟೆಸ್ಟ್ ನಡೆಸಲಾಗುವುದು. ನೆಗೆಟಿವ್ ವರದಿ ಬಂದ ಶಿಕ್ಷಕರಿಗೆ ಮಾತ್ರ ತರಗತಿಗಳನ್ನು ನಡೆಸಲು ಅವಕಾಶ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಸಚಿವ ವರ್ಷಾ ಗಾಯಕವಾಡ್ ತಿಳಿಸಿದ್ದಾರೆ.

ಕೊರೊನಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು. ಹಾಗಾಗಿ, ಎಲ್ಲಾ ವಿದ್ಯಾರ್ಥಿಗಳನ್ನು ತರಗತಿ ಕೋಣೆಗಳ ಒಳಗೆ ಹೋಗುವ ಮೊದಲು ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು ಮತ್ತು ಬೆಂಚ್‌ಗೆ ಒಂದು ಮಗುವಿಗೆ ಮಾತ್ರ ಅವಕಾಶ ನೀಡುವಂತೆ ಆಸನ ವ್ಯವಸ್ಥೆಯನ್ನು ಬದಲಾಯಿಸಲಾಗುವುದು ಎಂದು ಹೇಳಿದರು.

“ದೈಹಿಕ ತರಗತಿಗಳು ನಾಲ್ಕು ಗಂಟೆಗಳಿಗಿಂತ ಹೆಚ್ಚು ಕಾಲ ಇರುವುದಿಲ್ಲ. ಶಿಕ್ಷಕರ ಅಗತ್ಯವಿರುವ ಗಣಿತ ಮತ್ತು ವಿಜ್ಞಾನದಂತಹ ಆಯ್ದ ವಿಷಯಗಳನ್ನು ಮಾತ್ರ ಭೌತಿಕ ತರಗತಿಗಳಿಗೆ ತೆಗೆದುಕೊಳ್ಳಲಾಗುವುದು, ಉಳಿದ ವಿಷಯಗಳು ಆನ್‌ಲೈನ್‌ನಲ್ಲಿ ಮುಂದುವರಿಯುತ್ತದೆ ”ಎಂದು ಗಾಯಕವಾಡ್ ಹೇಳಿದರು.


ಇದನ್ನೂ ಓದಿ: ಗೋವಾದಲ್ಲಿ ಬೀಫ್ ಬ್ಯಾನ್ ಯಾಕಿಲ್ಲ, ಇದ ನಿಮ್ಮ ಹಿಂದುತ್ವ?: ಉದ್ಧವ್ ಠಾಕ್ರೆ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...