Homeಮುಖಪುಟಎಂವಿಎ ಒಗ್ಗಟ್ಟಿನ ಬಗ್ಗೆ ಪ್ರಶ್ನಿಸಿದ ಉದ್ಧವ್ ಠಾಕ್ರೆ: ಮೈತ್ರಿಕೂಟದಿಂದ ನಿರ್ಗಮಿಸುವ ಮುನ್ಸೂಚನೆ?

ಎಂವಿಎ ಒಗ್ಗಟ್ಟಿನ ಬಗ್ಗೆ ಪ್ರಶ್ನಿಸಿದ ಉದ್ಧವ್ ಠಾಕ್ರೆ: ಮೈತ್ರಿಕೂಟದಿಂದ ನಿರ್ಗಮಿಸುವ ಮುನ್ಸೂಚನೆ?

- Advertisement -
- Advertisement -

ಮಹಾರಾಷ್ಟ್ರದ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುವ ಸಾಧ್ಯತೆಯಿದೆ. ಉದ್ದವ್ ಠಾಕ್ರೆ ಬಣದ ಶಿವಸೇನೆ ಬಿಜೆಪಿಯತ್ತ ಮೈತ್ರಿಕೂಟದತ್ತ ಒಳವು ತೋರಿಸುತ್ತಿದೆ ಎಂದು ವರದಿಯಾಗುತ್ತಿರುವ ನಡುವೆ, ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುವ ಅಭಿಪ್ರಾಯವನ್ನು ಉದ್ಧವ್ ಠಾಕ್ರೆ ವ್ಯಕ್ತಪಡಿಸಿದ್ದಾರೆ.

ಶಿವಸೇನೆಯ (ಯುಬಿಟಿ) ಮುಖವಾಣಿ ಸಾಮ್ನಾಗೆ ನೀಡಿದ ಸಂದರ್ಶನದಲ್ಲಿ, “2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸೀಟು ಹಂಚಿಕೆ ಒಪ್ಪಂದಗಳನ್ನು ಅಂತಿಮಗೊಳಿಸುವಲ್ಲಿ ಮತ್ತು ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ವಿಳಂಬದಂತಹ ತಪ್ಪುಗಳು ಪುನರಾವರ್ತನೆಯಾಗಿತ್ತು ಎಂದಿರುವ ಉದ್ದವ್ ಠಾಕ್ರೆ, ಎಂವಿಎ ಮೈತ್ರಿಕೂಟದ ಒಗ್ಗಟ್ಟಿನ ಬಗ್ಗೆ ಪ್ರಶ್ನಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಎಂವಿಎ ಮೈತ್ರಿಕೂಟ ಅದ್ಭುತ ಪ್ರದರ್ಶನ ತೋರಿಸಿದಾಗ ಉಂಟಾದ ಸಂತೋಷ, ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪಕ್ಷವಾರು ಗೆಲುವುಗಳನ್ನು ಸಾಧಿಸುವತ್ತ ಗಮನಹರಿಸಿದ ವೈಯಕ್ತಿಕ ಅಹಂಕಾರಗಳಾಗಿ ರೂಪಾಂತರಗೊಂಡು ಅಂತಿಮವಾಗಿ ಸೋಲಿಗೆ ಕಾರಣವಾಯಿತು ಎಂದು ಠಾಕ್ರೆ ಒತ್ತಿ ಹೇಳಿದ್ದಾರೆ.

ತಮ್ಮ ಪಕ್ಷವು ಲೋಕಸಭಾ ಚುನಾವಣೆಯ ಸಮಯದಲ್ಲಿ ತನ್ನ ಎಂವಿಎ ಪಾಲುದಾರರಿಗೆ ಹಲವು ಬಾರಿ ಗೆದ್ದ ಕ್ಷೇತ್ರಗಳನ್ನು ಬಿಟ್ಟುಕೊಡಬೇಕಾಯಿತು ಎಂದು ಅವರು ವಿಷಾದಿಸಿದ್ದಾರೆ.

ಚುನಾವಣೆಯ ಸಮಯದಲ್ಲಿ, ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿರ್ಧರಿಸಲಾಗುತ್ತಿರಲಿಲ್ಲ ಎಂದು ಮಾಜಿ ಸಿಎಂ ನೆನಪಿಸಿಕೊಂಡಿದ್ದಾರೆ.

“ಇದು ಸರಿಪಡಿಸಿಕೊಳ್ಳಲೇಬೇಕಾದ ತಪ್ಪಾಗಿತ್ತು. ಭವಿಷ್ಯದಲ್ಲಿ ಇಂತಹ ತಪ್ಪುಗಳು ಸಂಭವಿಸಿದರೆ ಒಟ್ಟಿಗೆ ಇರುವುದರಲ್ಲಿ ಅರ್ಥವಿಲ್ಲ” ಎಂದಿದ್ದಾರೆ.

ವಿಧಾನಸಭಾ ಚುನಾವಣೆಯ ಸಮಯದಲ್ಲಿ ವಿಶೇಷ ಕೊಡುಗೆಗಳನ್ನು ಘೋಷಿಸುವ ಸ್ಪರ್ಧೆಯು ಶಿವಸೇನೆ (ಯುಬಿಟಿ), ಎನ್‌ಸಿಪಿ (ಶರದ್ಚಂದ್ರ ಪವಾರ್) ಮತ್ತು ಕಾಂಗ್ರೆಸ್ ಒಳಗೊಂಡ ಎಂವಿಎಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

ಇವಿಎಂ ಹಗರಣ, ನಕಲಿ ಮತದಾರರ ಪಟ್ಟಿ ಮತ್ತು ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತದಾರರ ಸಂಖ್ಯೆಯಲ್ಲಿನ ಹೆಚ್ಚಳದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಲಡ್ಕಿ ಬಹಿನ್‌ನಂತಹ ಮೋಸಗೊಳಿಸುವ ಯೋಜನೆಗಳು ಚುನಾವಣಾ ನಿರೀಕ್ಷೆಗಳ ಮೇಲೆ ಪರಿಣಾಮ ಬೀರಿದ್ದವು ಎಂದು ಠಾಕ್ರೆ ಸಾಮ್ನಾದ ಕಾರ್ಯನಿರ್ವಾಹಕ ಸಂಪಾದಕ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರೊಂದಿಗಿನ ಸಂದರ್ಶನದಲ್ಲಿ ಹೇಳಿದ್ದಾರೆ.

ತಪ್ಪುಗಳನ್ನು ಒಪ್ಪಿಕೊಳ್ಳಲು ಹಿಂಜರಿಯುವುದು ಸರಿಯಲ್ಲ. 2024ರ ಲೋಕಸಭಾ ಚುನಾವಣೆಯಲ್ಲಿ, ಎಂವಿಎ ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 30 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಐದು ತಿಂಗಳ ನಂತರ, ಮಹಾಯುತಿ ಮೈತ್ರಿಕೂಟವು ವಿರೋಧ ಪಕ್ಷಗಳಿಗೆ ಹೀನಾಯ ಸೋಲನ್ನುಂಟುಮಾಡಿತು. 288 ಸದಸ್ಯ ಬಲದ ಸದನದಲ್ಲಿ ಶಿವಸೇನೆ (ಯುಬಿಟಿ), ಎನ್‌ಸಿಪಿ (ಎಸ್‌ಪಿ) ಮತ್ತು ಕಾಂಗ್ರೆಸ್‌ನ ಒಟ್ಟಾರೆ 46 ಸ್ಥಾನಗಳಿಗೆ ಸೀಮಿತವಾಯಿತು” ಎಂದಿದ್ದಾರೆ.

ಕಳೆದ ಬಾರಿಯ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು 132 ಸ್ಥಾನಗಳನ್ನು ಗೆದ್ದರೆ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 57 ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 41 ಸ್ಥಾನಗಳನ್ನು ಗೆದ್ದಿತ್ತು. ಪ್ರತಿಸ್ಪರ್ಧಿಗಳಾದ ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ನೇರ ಸ್ಪರ್ಧೆಯಲ್ಲಿ ಕ್ರಮವಾಗಿ 20 ಮತ್ತು 16 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದವು.

ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದ ಟ್ರಂಪ್: ಮೋದಿ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...