Homeಕರ್ನಾಟಕಮರಾಠ ಪ್ರಾಧಿಕಾರ ರಚನೆಯೇ ಉದ್ಧವ್ ಠಾಕ್ರೆ ಹೇಳಿಕೆಗೆ ಪ್ರೇರಣೆ: ಡಿ.ಕೆ. ಶಿವಕುಮಾರ್ ಆರೋಪ

ಮರಾಠ ಪ್ರಾಧಿಕಾರ ರಚನೆಯೇ ಉದ್ಧವ್ ಠಾಕ್ರೆ ಹೇಳಿಕೆಗೆ ಪ್ರೇರಣೆ: ಡಿ.ಕೆ. ಶಿವಕುಮಾರ್ ಆರೋಪ

"ರಾಜ್ಯದಲ್ಲಿನ ಮರಾಠಿಗರ ಅಭಿವೃದ್ಧಿಗೆ ಎಲ್ಲ ಕ್ರಮ ಕೈಗೊಳ್ಳಲಾಗಿತ್ತು. ಹೀಗಾಗಿ ಮರಾಠ ಪ್ರಾಧಿಕಾರ ಅನಗತ್ಯವಾಗಿತ್ತು. ಇದರಿಂದ ಈ ವಿವಾದ ಎದ್ದಿದೆ. ಈ ಸರ್ಕಾರ ಧರ್ಮ, ಜಾತಿಗಳ ನಡುವೆ ವಿಷಬೀಜ ಬಿತ್ತಿ, ಆ ಭಾಗದ ಜನರಲ್ಲಿ ಗೊಂದಲ ಸೃಷ್ಟಿಸಿದೆ"

- Advertisement -
- Advertisement -

“ರಾಜ್ಯ ಸರ್ಕಾರ ಅನಗತ್ಯವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀರ್ಮಾನಿಸಿದ್ದೇ, ಠಾಕ್ರೆ ಅವರ ಹೇಳಿಕೆಗೆ ಪ್ರೇರಣೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಕರ್ನಾಟಕ ಆಕ್ರಮಿಸಿಕೊಂಡಿರುವ ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇತ್ತೀಚೆಗೆ ಹೇಳಿದ್ದರು.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, “ರಾಜ್ಯಗಳ ವಿಂಗಡನೆಯಾಗುವಾಗ ತೆಗೆದುಕೊಂಡ ಗಡಿ ತೀರ್ಮಾನ ಈಗ ಮುಗಿದ ಅಧ್ಯಾಯ. ಕರ್ನಾಟಕ ಭೂಪಟ ಸ್ಪಷ್ಟವಾಗಿದ್ದು, ನಮ್ಮ ಊರು, ಗ್ರಾಮಗಳೆಲ್ಲ ವಿಂಗಡಣೆ ಆಗಿವೆ. ನಾವು ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ. ನಮ್ಮಿಂದ ಒಂದಿಂಚೂ ಅವರಿಗೆ ಹೋಗುವುದಿಲ್ಲ, ಅವರಿಂದಲೂ ಒಂದಿಂಚೂ ನಮಗೆ ಬರುವುದಿಲ್ಲ. ಗಡಿ ವಿಚಾರದಲ್ಲಿ ಮಹಾಜನ್ ವರದಿ ಇದೆ. ಎಲ್ಲ ಭಾಗದ ಗಡಿ ನಿಗದಿಯಾಗಿದೆ. ಗೊಂದಲ ಸೃಷ್ಟಿಸಲು, ರಾಜಕೀಯ ಉದ್ದೇಶದಿಂದ ಠಾಕ್ರೆ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಕರ್ನಾಟಕ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ನಿರ್ಧಾರ ಉದ್ಧವ್ ಠಾಕ್ರೆ ಅವರ ಹೇಳಿಕೆಗೆ ಪ್ರೇರಣೆ” ಎಂದು ಹೇಳಿದರು.

“ರಾಜ್ಯದಲ್ಲಿನ ಮರಾಠಿಗರ ಅಭಿವೃದ್ಧಿಗೆ ಎಲ್ಲ ಕ್ರಮ ಕೈಗೊಳ್ಳಲಾಗಿತ್ತು. ಹೀಗಾಗಿ ಮರಾಠ ಪ್ರಾಧಿಕಾರ ಅನಗತ್ಯವಾಗಿತ್ತು. ಇದರಿಂದ ಈ ವಿವಾದ ಎದ್ದಿದೆ. ಈ ಸರ್ಕಾರ ಧರ್ಮ, ಜಾತಿಗಳ ನಡುವೆ ವಿಷಬೀಜ ಬಿತ್ತಿ, ಆ ಭಾಗದ ಜನರಲ್ಲಿ ಗೊಂದಲ ಸೃಷ್ಟಿಸಿದೆ. ವಿಭಿನ್ನ ಅಭಿಪ್ರಾಯ ಮೂಡುವಂತೆ ಬೀಜ ಬಿತ್ತಿರುವುದೇ ರಾಜ್ಯ ಬಿಜೆಪಿ ಸರ್ಕಾರ. ರಾಜ್ಯದಲ್ಲಿರುವ ಮರಾಠ ಭಾಷಿಗರು ನಮ್ಮವರೇ. ಹೀಗಾಗಿ ಎಲ್ಲರೂ ಶಾಂತಿಯುತವಾಗಿ ಸೌಹಾರ್ದತೆಯಿಂದ ಇರಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಜೆ.ಪಿ. ನಡ್ಡಾ ಯಾರು, ಅವರಿಗೆ ನಾನ್ಯಾಕೆ ಉತ್ತರಿಸಲಿ: ರಾಹುಲ್ ಗಾಂಧಿ

ಮೂರು ಕರಾಳ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲವಾಗಿ, ರಾಜ್ಯದಲ್ಲಿ ಕೊರೋನಾ ಪರಿಹಾರ ಹಣ ನೀಡದಿರುವುದು ಹಾಗೂ ಬೆಲೆ ಏರಿಕೆ, ತೆರಿಗೆ ಏರಿಕೆಯಂತಹ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಜನರ ಧ್ವನಿಯನ್ನು ಎತ್ತಲು ನಾಳೆ ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

“ನಾವು ರೈತರ ಪರವಾಗಿ ನಿಲ್ಲುತ್ತೇವೆ. ಕರಾಳ ಕಾಯ್ದೆಗಳನ್ನು ಕಿತ್ತುಹಾಕಬೇಕು ಎಂಬುದು ರೈತರ ಬೇಡಿಕೆ. ಅವರ ಬೇಡಿಕೆ ಈಡೇರುವವರೆಗೆ ನಾವು ಅವರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲುತ್ತೇವೆ. ಈ ಹಿನ್ನೆಲೆಯಲ್ಲಿ ಅವರಿಗೆ ಧ್ವನಿಯಾಗಲು ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಶಿಸ್ತಿನ ಪ್ರತಿಭಟನೆ ಮಾಡಬೇಕಿದ್ದು, ಎಲ್ಲ ವಾಹನಗಳು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಬಂದು, ಅಲ್ಲಿಂದ ಸ್ವಾತಂತ್ರ್ಯ ಉದ್ಯಾನವನಕ್ಕೆ ಬರಬೇಕು. ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇವೆ” ಎಂದು ಹೇಳಿದರು.

“ಈ ಸರ್ಕಾರದಿಂದ ನೊಂದಿರುವ ರೈತರು, ಎಲ್ಲ ವರ್ಗದ ಜನ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.


ಇದನ್ನೂ ಓದಿ: ರಾಮ ಮಂದಿರ ದೇಣಿಗೆ ಸಂಗ್ರಹ ಮೆರವಣಿಗೆಯಲ್ಲಿ ಘರ್ಷಣೆ: ಗುಜರಾತಿನಲ್ಲಿ 40 ಜನರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...