HomeಮುಖಪುಟBJPಗೆ ಬಹುಮತವಿಲ್ಲ, ಅವರ ಆಟವನ್ನು ಬಯಲುಗೊಳಿಸುತ್ತೇವೆ : ಶರದ್‌ ಪವಾರ್‌

BJPಗೆ ಬಹುಮತವಿಲ್ಲ, ಅವರ ಆಟವನ್ನು ಬಯಲುಗೊಳಿಸುತ್ತೇವೆ : ಶರದ್‌ ಪವಾರ್‌

- Advertisement -
- Advertisement -

BJPಗೆ ಸರ್ಕಾರ ರಚಿಸಲು ಬಹುಮತವಿಲ್ಲ, ಅವರ ಆಟವನ್ನು ನಾವು ಬಯಲುಗೊಳಿಸುತ್ತೇವೆ. BJP ಜೊತೆ ಹೋದ ಶಾಸಕರು ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಕ್ರಮ ಎದುರಿಸಬೇಕಾಗುತ್ತದೆ ಎಂದು NCP ಮುಖಂಡ ಶರದ್‌ ಪವಾರ್‌ ಎಚ್ಚರಿಕೆ ನೀಡಿದ್ದಾರೆ.

ಇಂದು ಮುಂಬೈನಲ್ಲಿ ನಡೆದ ಎನ್‌ಸಿಪಿ – ಶಿವಸೇನೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಮಗೆ ಸರ್ಕಾರ ರಚನೆಗೆ 156 ಶಾಸಕರ ಬೆಂಬಲವಿತ್ತು. ಆದರೆ ಅಜಿತ್‌ ಪವಾರ್‌ರವರ ಬಿಜೆಪಿ ಬೆಂಬಲದಿಂದ ಗೊಂದಲ ಉಂಟಾಗಿದ್ದು ಇದರಿಂದ ನಮಗೆ ಯಾವುದೇ ಮುಖಭಂಗವಾಗಿಲ್ಲ, ನಾವು ಸರ್ಕಾರ ರಚಿಸುತ್ತೇವೆ ಎಂದು ಶರದ್‌ ಪವಾರ್‌ ಸ್ಪಷ್ಟಪಡಿಸಿದ್ದಾರೆ.

ಅಷ್ಟೇ ಅಲ್ಲದೇ ಬೆಳಿಗ್ಗೆ ಅಜಿತ್‌ ಪವಾರ್‌ ಜೊತೆ ರಾಜ್ಯಪಾಲರ ಕಚೇರಿಗೆ ಹೋಗಿದ್ದ ಮೂವರು ಶಾಸಕರನ್ನು ವಾಪಸ್‌ ಕರೆತಂದಿರುವ ಅವರು, ಆ ಶಾಸಕರಿಂದಲೇ ಮಾಧ್ಯಮಗಳ ಎದುರು ಮಾತನಾಡಿಸಿ ಅವರ ಬೆಂಬಲ ಬಿಜೆಪಿಗಿಲ್ಲ, ಕೇವಲ 08-10 ಶಾಸಕರು ಮಾತ್ರ ಬಿಜೆಪಿ ಜೊತೆಗಿದ್ದು ಅವರ ಮನವೊಲಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಈ ರೀತಿ ಸರ್ಕಾರ ರಚಿಸುವ ಬಗ್ಗೆ ಬೆಳಿಗ್ಗೆ 6:30ಕ್ಕೆ ನಮಗೆ ಮಾಹಿತಿ ಸಿಕ್ಕಿತ್ತು ಎಂದಿರುವ ಅವರು ಸದ್ಯಕ್ಕೆ ನಾವು ಯಾರನ್ನು ಅನರ್ಹಗೊಳಿಸುವುದಿಲ್ಲ. ನವೆಂಬರ್‌ 30ರೊಳಗೆ ಅವರ ಮನವೊಲಿಸುತ್ತೇವೆ ಎಂದಿದ್ದಾರೆ.

ಇನ್ನು ಬೆಳಿಗ್ಗೆ ತಾನೇ ಅಜಿತ್‌ ಪವಾರ್‌ ಜೊತೆ ಹೋಗಿದ್ದ 10 ಶಾಸಕರಲ್ಲಿ ಮೂವರು ವಾಪಸ್‌ ಬಂದಿದ್ದು, ನಮಗೆ ಸರಿಯಾದ ಮಾಹಿತಿಯಿರಲಿಲ್ಲ ಹಾಗಾಗಿ ಹೋಗಿದ್ದೆವಷ್ಟೇ, ಆದರೆ ನಮ್ಮ ಬೆಂಬಲ ಶರದ್‌ ಪವಾರ್‌ರವರಿಗೆ ಎಂದು ಘೋಷಿಸಿದ್ದಾರೆ.

ಬಿಜೆಪಿ ನಾಯಕರ ಕುತಂತ್ರ ಬಯಲಾಗಿದೆ ಎಂದಿರುವ ಉದ್ಧವ್‌ ಠಾಕ್ರೆ, ಬಿಜೆಪಿ ಪಕ್ಷವನ್ನು ಇಬ್ಬಾಗ ಮಾಡುವ ಕೆಲಸ ಮಾಡುತ್ತಿದೆ. ನಾವು ಪಕ್ಷಗಳನ್ನು ಜೋಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...